ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಮಳೆ

ಬಿಹಾರದಲ್ಲಿ ಪ್ರವಾಹ

September 19, 2008 - 2:33pm — Nagaraj.G
ಕೊಸಿನದಿಯ ರುದ್ರ ನರ್ತನಕ್ಕೆ ತುತ್ತಾಗಿ ಎಲ್ಲಿ ನೋಡಿದರು ನೀರಿನಿಂದ ಕೂಡಿದ ಬಿಹಾರ

ನೇಪಾಳ ಗಡಿಭಾಗದ ಕುಶಾದಲ್ಲಿ ಕೋಸಿ ನದಿಗೆ ಕಟ್ಟಿದ ಒಡ್ಡು ಒಡೆದ ಪರಿಣಾಮ ಕೆಲವೇ ಗಂಟೆಗಳಲ್ಲಿ ಉತ್ತರ ಬಿಹಾರದ ಐದು ಜಿಲ್ಲೆಗಳಾದ ಸುಪೌಲ್, ಅರಾರಿಯ, ಸಹರ್ಸಾ, ಮಾಧೇಪುರ ಮತ್ತು ಪುರ್ನಿಯಾ ಅಸ್ತಿತ್ವವೇ ಇಲ್ಲದಂತೆ ಜಲಾವೃತಗೊಂಡವು. ಈ ಪ್ರಾಂತಗಳು ಪ್ರತಿ ವರ್ಷ ಎದುರಿಸುತ್ತಿದ್ದ ಪ್ರವಾಹಕ್ಕಿಂತ ದುಪ್ಪಟ್ಟು ನಷ್ಟವನ್ನು ಈ ಬಾರಿಯ ವಿಪತ್ತು ತಂದೊಡ್ಡಿದೆ. ಬಿಹಾರದ ಕಣ್ಣೀರ ನದಿಯೆಂದೆ ಜನಜನಿತವಾಗಿರುವ ಕೋಸಿ ನದಿಯ ಪ್ರವಾಹದಿಂದಾಗಿ ಬಿಹಾರದ ಜನತೆ ಅಕ್ಷರಶಃ ತಮ್ಮ ಜೀವನದೊಂದಿಗೆ ಹೋರಾಟಕ್ಕಿಳಿದಿದ್ದಾರೆ. ಲಕ್ಷಾಂತರ ಮಂದಿ ಪ್ರವಾಹದಿಂದಾಗಿ ತಮ್ಮ ಮನೆಮಠ, ಕುಟುಂಬಿಕರು, ಸಂಬಂಧಿಗಳು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಭೀಕರ ಪ್ರವಾಹದ ಪರಿಣಾಮ ಬಿಹಾರದ ಜನತೆ ತುಂಬಲಾರದ ನಷ್ಟಕ್ಕೀಡಾಗಿದ್ದಾರೆ; ಎಲ್ಲವನ್ನೂ ನೆರೆ ಕೊಚ್ಚಿಕೊಂಡು ಹೋಗಿದೆ. ಪ್ರವಾಹದ ಬಲಿಪಶುಗಳಲ್ಲಿ ಹೆಚ್ಚಿನವರು ಮಕ್ಕಳು. ಸಾವಿರಾರು ಮಕ್ಕಳು ನಿರ್ಗತಿಕರಾಗಿದ್ದಾರೆ. ನೇಪಾಳದಲ್ಲಿ ಪ್ರವಾಹ ತಡೆಗಾಗಿ ನಿರ್ಮಿಸಿದ್ದ ಮೊರಿಯು ಒಡೆದ ಕಾರಣ ಕೋಸಿ ನದಿ ಉಕ್ಕಿ ಹರಿಯುತ್ತಿದ್ದು, ಬಿಹಾರದ 16 ಜಿಲ್ಲೆಗಳು ಸಂಕಷ್ಟಕ್ಕೀಡಾಗಿವೆ.  ಮುಂದೆ ಓದಿ »

  • ಕೋಸಿ
  • ನೀರು
  • ಪ್ರವಾಹ
  • ಬಿಹಾರ
  • ಮಳೆ
~.~
  • Nagaraj.G ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 102 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಿಟಕಿಯಾಚೆಯ ಚಿತ್ರ

August 3, 2008 - 8:34pm — Chamaraj
banana_tree.jpg

ಸಣ್ಣಗೇ ಮಳೆ ಸುರಿಯುತ್ತಿದೆ.  ಮುಂದೆ ಓದಿ »

  • ಕಿಟಕಿ
  • ಚಿತ್ರ
  • ಬಾಳೆ
  • ಮಳೆ
~.~
  • Chamaraj ರವರ ಬ್ಲಾಗ್
  • Login or register to post comments
  • 132 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಯಾತಕ್ಕೆ ಮಳೆ ಹೋದವೋ...

July 11, 2008 - 9:56am — pallavi.dharwad

ಮೋಡಗಳು ಮುನಿಸಿಕೊಂಡಿವೆ.  ಮುಂದೆ ಓದಿ »

  • ಬರಗಾಲ
  • ಮಳೆ
  • ಮುಂಗಾರು
  • ವಿದ್ಯುತ್‌
~.~
  • pallavi.dharwad ರವರ ಬ್ಲಾಗ್
  • 16 ಪ್ರತಿಕ್ರಿಯೆಗಳು
  • 437 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

"ಭಿಷ್ಟಿ ಪೊಡೇ ಟಪುರ್ ಟುಪುರ್"

June 3, 2008 - 10:13pm — rameshbalaganchi

ಮಳೆಯಿಲ್ಲದೆ ಮಳೆನೀರ ಹನಿಯ ಸದ್ದು.

ಈ ಶೀರ್ಷಿಕೆ, ಒಂದು ಬಂಗಾಳಿ ಹಾಡಿನ ಸಾಲು. ಟಪ್, ಟಪ್ ಮಳೆ ಬೀಳುತ್ತಿದೆ ಅಂತ ಇದರ ಅರ್ಥ. ಬಾಲ್ಯದಲ್ಲಿ ಕೇಳಿದ ಹಾಡು ಇದು.

ಬೆಂಗಳೂರ್ನಲ್ಲಿ ಬಿಟ್ರೆ ಮಳೆ ಮತ್ತೆಲ್ಲಿ ಶುರುವಾಗಿದ್ಯೋ ಗೊತ್ತಿಲ್ವಲ್ಲ!!. ಇಲ್ಲಿ ತೀರ್ಥಳ್ಳೀಲಿ ಏಪ್ರಿಲ್ ತಿಂಗ್ಳಲ್ಲಿ ಸ್ವಲ್ಪ ಮುಖಹಾಕಿ,"ತಡೀರಿ, ಬರ್ತೀನಿ" ಅಂದಿದ್ದೆ ಅದೆಲ್ಲಿಗ್ಹೋಯ್ತೋ? ಹೆಚ್ಚಿನಂಶ ಮಲೆನಾಡ ಅಡಿಕೆ ಬೆಳೆಗಾರ್ರ ಹಿಡಿಶಾಪಕ್ಕೆ ರೋಸಿ ಎಲ್ಲೋ ಗುಳೇ ಹೋಗಿರ್ಬೇಕು.
ಬೆಂಗ್ಳೂರು ಬೇಡ ಅಂತ ಬಯಸಿ ಬಯ್ಸಿ ನಾನು ಇಲ್ಲಿಗೆ ಬಂದಾಗ ಏನು ಜಲಸಿರಿ!! ಅಬ್ಬಾ ನೆನಸ್ಕೊಂಡ್ರೆ ಮೈಯೆಲ್ಲ ಪುಳಕ ಬರತ್ತೆ! ನನ್ನ ಬಾಲ್ಯಕಾಲದ ಅನೇಕ ನೆನೆಪುಗ್ಳು ಮಳೆ, ಪ್ರವಾಹ, ಮಳೆನೀರಿನ ಸದ್ದು, ಕೊಚ್ಚೆರಾಡಿ ಇವುಗ್ಳ ಜೊತೇನೇ ತೆಕ್ಕೆಯಾಗಿವೆ. ಬಾಲ್ಯಕಾಲದಲ್ಲಿ ಶಿವಮೊಗ್ಗಾದಲ್ಲಿ ಎಷ್ಟು ಮಳೆ ಬರಿತ್ತು ಅಂದ್ರೆ ಹೇಳೋದೇ ಬೇಡ. ದಿನ ಬಿಟ್ದಿನ ಶಾಲೆಗೆ ರಜೆ ಇರ್ತಿತ್ತು. ನದಿ ದಡ್ದಲ್ಲಿ ನಿಂತು ದಡ ಕೊರೀತಾ ಕೆಂಪು ರಾಡಿಯಾಗಿ ಹರಿಯೋ ತುಂಗೆ ನೋಡಿದ್ರೆ ಅದ್ಯಾವ ಪುಣ್ಯಾತ್ಮ "ತುಂಗಾ ಪಾನಂ" ಅಂದ್ನೋ ಅನ್ಸೋದು. ನಮ್ಮ ಮನೆಯ ಹತ್ರಾನೇ ಇದ್ದ ಒಂದು ದೊಡ್ಡ ಮೋರಿ- ವೈತರಣಿ ಅಂತ್ಲೇ ಕರೀತಿದ್ವಿ ಅದನ್ನ- ತುಂಬಿ ನೀರೆಲ್ಲ ಅಕ್ಕ ಪಕ್ಕದ ವಠಾರಕ್ಕೆ ನುಗ್ಗಿ ಒಳ್ಳೇ ಫಜೀತಿ. ನಮ್ಮೂರ ದೇವರ ಅರ್ಚಕರಾದ ರಾಂಭಟ್ರು ತಮ್ಮ ಧಡೂತಿ ಹೆಂಡ್ತೀನ ಅನಾಮತ್ತಾಗಿ ತೋಳಲ್ಲಿ ಬಳಸಿ ಎತ್ಕೊಂಡು ಸೊಂಟಮಟ್ಟ ನೀರಲ್ಲಿ ಅವ್ರನ್ನು ಸುರಕ್ಷಿತ ಜಾಗಕ್ಕೆ ಕರ್ಕೊಂಡ್ಹೋಗ್ತಿದ್ದ ದೃಶ್ಯ ಯಾವತ್ಗೂ ಮರ್ಯೋದೇ ಇಲ್ಲ. ಸೀಗೇಹಟ್ಟಿ ಅನ್ನೋ ಶಿವಮೊಗ್ಗದ ಎಕ್ಸ್‌ಟೆನ್ಶನ್ ಸದಾ ಮಳೆಗಾಲದಲ್ಲಿ ಸುದ್ದಿಯಲ್ಲಿರ್ತಿತ್ತು. ನಾಲ್ಕಾಣೆ ಕೊಟ್ರೆ ಸಾಕು ಪ್ರೈವೇಟ್ ಬಸ್ನೋರು ಗಿಟ್ಟಿಗಿರಿದು ಜನತುಂಬ್ಕೊಡು ಸೀಗೇಹಟ್ಟಿ, ಹರಕೆರೆ, ಗಾಜನೂರು ಎಲ್ಲ ಕಡೆ ಪ್ರವಾಹದ ದೃಶ್ಯ ತೋರ್ಸೋರು.  ಮುಂದೆ ಓದಿ »

  • ಆಂಡಯ್ಯ
  • ನೀರು
  • ಮಳೆ
~.~
  • rameshbalaganchi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 370 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೇ ಅತ್ತು, ಸುಮ್ಮನಾಗುವ ಹೊತ್ತು!

June 3, 2008 - 6:46pm — pallavi.dharwad

ನಿನ್ನೆ ಬೆಳಿಗ್ಗೆಯಿಂದ ಏಕೋ ಖಿನ್ನತೆ.

ಒಂದು ಸುತ್ತು ಅತ್ತು ಸುಮ್ಮನಾಗಿದ್ದರೂ ದುಃಖ ಮಡುಗಟ್ಟಿದಂತಿರುವ ಮೋಡ ಯಾವಾಗ ಬೇಕಾದರೂ ಅಳಲು ಸಿದ್ಧವಾಗಿದೆ. ಹೊರಗೆ ಮಂಕು ಆಕಾಶ. ವಸುಂಧರೆಗೆ ಬೈದ ನಾಚಿಕೆಯೇನೋ, ಸೂರ್ಯ ತಲೆ ಮರೆಸಿಕೊಂಡಿದ್ದಾನೆ. ಹಸಿರು ತುಂಬಿದ ರಸ್ತೆಗಳು ಮೋಡದ ಕಣ್ಣೀರಿಗೆ ತೋಯ್ದು ಕಪ್ಪಾಗಿ ಕಾಣುತ್ತಿವೆ. ಒಳಗೆ ಅವ್ವ ಒಗ್ಗರಣೆ ಕೊಡುವ ಸದ್ದು. ಗಾಳಿಯಲ್ಲಿ ಹಿತವಾದ ಘಮ. ಆಕಾಶವಾಣಿ ಧಾರವಾಡದಲ್ಲಿ ಚೌಡಿಕೆ ಪದದ ರಣನ. ಅಪ್ಪ ಪೇಪರ್‌ ಓದುತ್ತಿರಬೇಕು. ನಾನು ಮೌನವಾಗಿ ಕೂತು ಖಿನ್ನತೆಯನ್ನು ಅಕ್ಷರಗಳನ್ನಾಗಿಸುತ್ತಿದ್ದೇನೆ.

ಏಕೋ ಬೇಸರ. ಅಡಿಗರು ನೆನಪಾಗುತ್ತಾರೆ. ’ಮತ್ತದೇ ಬೇಸರ, ಏನೋ ಕಾಡಲು, ಏನೋ ತೀಡಲು ಹೊತ್ತಿ ಉರಿವುದು ಕಾತರ’ (ಪೂರ್ತಿ ನುಡಿ ನೆನಪಾಗುತ್ತಿಲ್ಲ). ನನ್ನ ಮನದಲ್ಲಿ ಬೇಸರವೊಂದಿದೆ. ಆದರೆ, ಕಾತರ ಇಲ್ಲವಾದಂತಿದೆ.

ಐ-ಪಾಡ್‌ನಿಂದ ಸೋಸಿ ಬರುತ್ತಿದೆ ’ಭಾವಸಂಗಮ’ದಲ್ಲಿಯ ಕವನ. ’ದೂರದೊಂದು ತೀರದಿಂದ, ತೇಲಿ ಪಾರಿಜಾತ ಬಂಧ, ದಾಟಿ ಬಂತು ಬೇಲಿ ಸಾಲ, ಮೀಟಿ ಹಳೆಯ ಮಧುರ ನೋವ’. ಮನಸ್ಸಿನೊಳಗಿಂದ ಖಿನ್ನತೆ ಮತ್ತಷ್ಟು ಒಸರುತ್ತದೆ. ’ಎಲ್ಲಿ ಜಾರಿತೋ ಮನವು...!’  ಮುಂದೆ ಓದಿ »

  • ಒಂಟಿತನ
  • ಖಿನ್ನತೆ
  • ಮಳೆ
  • ಮೋಡ
~.~
  • pallavi.dharwad ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 651 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator