ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅನಿವಾಸಿ

ಸಂಪದ ಸದಸ್ಯರೊಂದಿಗೆ ಅನಿವಾಸಿಯವರ "ಮುಖಾಮುಖಿ"

November 5, 2007 - 1:04am — hpn


"ಮುಖಾಮುಖಿ"

ಶನಿವಾರ ಬೆಳಿಗ್ಗೆಗೆ ಮೊಬೈಲಿನಲ್ಲಿ (ಎಂದಿನಂತೆ)ಏಳೆಂಟು ಅಲಾರ್ಮ್ ಇಟ್ಟುಕೊಂಡಿದ್ದೆ.ರಾತ್ರಿ ಸುಮಾರು ಮೂರುವರೆ ಗಂಟೆಗೆ ಮಲಗಿದ್ದರೂ ಬೆಳಿಗ್ಗೆ ಮೂರನೇ ಅಲಾರ್ಮಿಗೇ ಅದು ಹೇಗೋ ಎಚ್ಚರವಾಗಿಬಿಟ್ಟಿತ್ತು. ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲವಿದ್ದರೂ ಅಷ್ಟು ಬೇಗ ಎಚ್ಚರವಾಗಿದ್ದು ಬಹುಶಃ ಬೆಳಿಗ್ಗೆ ಎಚ್ಚರವಾಗದೆ ಆ ದಿನದ ಈವೆಂಟ್ ಮಿಸ್ ಮಾಡಿಕೊಂಡ್ರೆ ಅವಿವೇಕದ ಕೆಲಸವಾಗತ್ತೆ ಎಂಬ ವಿಷಯ ತಲೆಯಲ್ಲಿದ್ದದ್ದರಿಂದ.

ಸುಮಾರು ಎರಡು ವಾರಗಳ ಹಿಂದೆ ಅನ್ಸತ್ತೆ - ಸುದರ್ಶನ್ ಆಸ್ಟ್ರೇಲಿಯದಿಂದ ಫೋನ್ ಮಾಡಿದ್ದಾಗ "ಬೆಂಗ್ಳೂರಿಗೆ ಬರ್ತಿದ್ದೀರಾ? ಹಾಗಾದ್ರೆ ನಿಮ್ಮ ಸಿನಿಮಾ ಸ್ಕ್ರೀನಿಂಗ್ ಮಾಡ್ಬೋದ್ರೀ... ಚೆನ್ನಾಗಿರತ್ತೆ!" ಅಂದಿದ್ದೆ. ಇವರು ಮಾಡಿರುವ ಸಿನಿಮಾ ಹೇಗಿರಬಹುದು ನೋಡಬೇಕಲ್ಲ ಎಂಬ ಕುತೂಹಲದಿಂದ ಹುರಿದುಂಬಿಸಿದ್ದೆ. ಹೀಗೆ ಸ್ಕ್ರೀನಿಂಗ್ ಮಾಡಿಸಿ ಸುದರ್ಶನರ ಜೋಬಿಗೆ ಸ್ವಲ್ಪ ಕತ್ತರಿ ಹಾಕಿಸಿದರೂ ಮಾಡಿದ್ದು ಬಹಳ ಒಳ್ಳೆಯ ಕೆಲಸ ಎಂದನಿಸಿದ್ದು ನನಗೆ ಸಿನಿಮಾ ನೋಡಿದ ಮೇಲೆ.  ಮುಂದೆ ಓದಿ »

  • ಅನಿವಾಸಿ
  • ಕಾರ್ಯಕ್ರಮಗಳು
  • ಮುಖಾಮುಖಿ
  • ಸಂಪದ
  • ಸುಚಿತ್ರ
~.~
  • hpn ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 810 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೊಂದು ಪತ್ರ

October 22, 2007 - 12:00am — keshav

ಹಿಂಗ್ಯಾಕೆ ನಮ್ಮೂರಲ್ಲೇ ಆಗುತ್ತೆ? ಎಂಬ ಲೇಖನಕ್ಕೆ ನನ್ನ ಪತ್ರ (thatskannada.com)

ಶಾಸ್ತ್ರಿಯವರೇ,

ನಾನೂ ನಿಮ್ಮ ಹಾಗೆ ಪಾಶ್ಚಿಮಾತ್ಯ ದೇಶದಲ್ಲಿರುವವನೇ (ಇಂಗ್ಲಂಡ್). ಆದರೇ ನನ್ನ ಅನುಭವ ನಿಮ್ಮ ಲೇಖನಕ್ಕೆ ತೀರ ತದ್ವಿರುದ್ಧ. ನನಗೇ ಇಲ್ಲಿನ ಖಾಲಿ ರಸ್ತೆಗಳು (ನಮ್ಮ ದೇಶದಲ್ಲಿ ಕರ್ಫೂ ಆದಾಗ ಮಾತ್ರ ಕಾಣುವಂಥಹ), ತುಂಬ ಕೃತಕವಾಗಿ Good Morning, Good evening, BYE, ಮತ್ತು ಮಾತು ಮಾತಿಗೆ Thanks, Sorry, excuse me ಎನ್ನುವುದನ್ನು ಕೇಳಿ ತಲೆ ಚಿಟ್ಟು ಹಿಡಿಯುತ್ತದೆ.

ನಾವು ನಮ್ಮ ದೇಶದ ಏರೋಪ್ಲೇನ್ ಹತ್ತಿದಾಗ ನಮ್ಮ ಸಂಕೋಚಗಳನ್ನೆಲ್ಲ ಬಿಟ್ಟು, ಪಾಶ್ಚಾತ್ಯರ ಢಾಂಬಿಕ (pseudo)ನಯ-ನಾಜೂಕುಗಳನ್ನು ಬಿಟ್ಟು ಹಗುರಾಗುತ್ತೇವೆ, ಅದಕ್ಕೆಂದೇ ಹತ್ತು ಸಾರಿ ಗಗನಸಖಿಯರನ್ನು ಕರೆಯುತ್ತೇವೆ. ಫಾರಿನ ಏರ್-ಲೈನಿನಲ್ಲಿ ಯಾಕೆ ಹೀಗಾಗೋಲ್ಲ ಅಂತ ಕೇಳ್ತೀರಲ್ಲಾ, ಒಂದು ಸಲ ಬಿಟ್ಟು ಎರಡು ಸಲ ಗಗನಸಖಿಯರನ್ನು ಕರೆದು ನೋಡಿ, ಕಂದು ಚರ್ಮದ ನಮ್ಮ ಬಣ್ಣದ ಬಗ್ಗೆ ತಮ್ಮತಮ್ಮಲ್ಲೇ ಮಾತಾಡಿಕೊಳ್ಳುತ್ತಾರೆ, ಅದಕ್ಕೆ ನಾವು ನೀವೆಲ್ಲ ಸುಮ್ಮನಿರುವುದು.

ಇನ್ನು ಕಸದ ಬುಟ್ಟಿಯಲ್ಲಿ ಬೀಸಾಕುವುವುದರ ವಿಚಾರಃ ದಿನಕ್ಕೆ ಸಾವಿರಾರು ಬಾರಿ CCTVಯಲ್ಲಿ ನಮ್ಮನ್ನು ರೆಕಾರ್ಡ್ ಮಾಡುವ ಈ Big Brother ಪಾಶ್ಚಾತ್ಯ ದೇಶಗಳಲ್ಲಿ ಕಸ ಬೀಸಾಕಿದರೆ ಕೌನ್ಸಿಲ್ನಿಂದ ತಪ್ಪಿಸಿಕೊಳ್ಳುವ ಛಾನ್ಸೇ ಇಲ್ಲ, ಮೇಲಾಗಿ ಕಸಕ್ಕೆ ಸಾವಿರಾರು ರೂಪಾಯಿ ದಂಡತೆರಬೇಕಾದ ಪರಿಸ್ಥಿತಿ. ನಮ್ಮ ದೇಶವಿನ್ನೂ Big Brother ಆಗಿಲ್ಲ ಸ್ವಾಮಿ, ಅದಕ್ಕೇ ಹಾಯಾಗಿ ನಾವು ಪಾನ್-ಬೀಡಾ ತಿಂದು ರಸ್ತೆಗಳಲ್ಲಿ ಆರಾಮವಾಗಿ ಉಗಿಯುತ್ತೇವೆ.

ಒಂದು ಭೇಲ್-ಪುರಿಗೆ ಇಲ್ಲಿ ಇಂಗ್ಲಂಡಿನಲ್ಲಿ ನಾನು ಕೊಡುವುದು ಕೇವಲ ೩೦೦ ರೂಪಾಯಿ ಮಾತ್ರ (ನಿಮ್ಮ ಅಮೇರಿಕದಲ್ಲಿ ಎಷ್ಟು ಅಂತ ಗೊತ್ತಿಲ್ಲ). ಭಾರತದಲ್ಲಿ ನೀವು ಅಷ್ಟು ದುಡ್ಡು ಕೊಟ್ಟು ತಿನ್ನುವಿರಾದರೆ, ಅಮೇರಿಕದಲ್ಲಿ ಸಿಗುವುದಕ್ಕಿಂತ ಚೆನ್ನಾಗಿ, ಶುಚಿಯಾಗಿ ಮಾಡಿ ಇನ್ನೂ ಜಾಸ್ತಿ quantity ಕೊಡುತ್ತಾರೆ. ಆದರೆ ನಿಮಗೆ ಭಾರತಕ್ಕೆ ಬರುತ್ತಿದ್ದಂತೆ , ಅಯ್ಯೋ, ಭೇಲ್-ಪುರಿಗೆ ೧೫ ರೂಪಾಯಿಯೇ, ೧೦ ರೂಪಾಯಿಗೆ ಸಿಗುತ್ತಿತ್ತಲ್ಲ ಅಂತ ಚಡಪಡಿಸುತ್ತೀರಿ. ಸುಮ್ಮನಿರಿ ಸಾರ್, ಈ ಥರ ಮಾತಾಡುವ NRIಗಳನ್ನು ದಿನನಿತ್ಯ ಕೇಳಿಸಿಕೊಳ್ಳುತ್ತಲೇ ಇರುತ್ತೇನೆ, ಬ್ಲಾಗುಗಳಲ್ಲಿ ಓದುತ್ತಲೇ ಇರುತ್ತೇನೆ.

ಇನ್ನು STOP ಸಿಗ್ನಲ್-ಗಳ ವಿಚಾರಃ ಪ್ರತಿ ಮೂಲೆಯಲ್ಲಿರುವ CCTVಗಳು, ಜೇಬನ್ನೆಲ್ಲ ಬರಿದು ಮಾಡುವ ಇನ್ಸುರನ್ಸ್ ಪಾಲಿಸಿಗಳು, ಸಣ್ಣ ತಪ್ಪಿಗೂ ಡ್ರೈವಿಂಗ್ ಲೈಸನ್ಸನ್ನೇ ರದ್ದು ಮಾಡುವ ಕಾನೂನುಗಳು - ಏಲ್ಲ ರಸ್ತೆಗಳು ಖಾಲಿ ಇದ್ದಾರೂ ಯಾವನಿಗೆ ಸ್ವಾಮಿ STOP ಸಿಗ್ನಲ್ ದಾಟಿ ಕಾರ್ ಓಡಿಸುವ ಧೈರ್ಯವಾಗುತ್ತೆ?  ಮುಂದೆ ಓದಿ »

  • ಅನಿವಾಸಿ
  • ಪತ್ರ
~.~
  • keshav ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 570 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು


ನದಿ, ಪರ್ವತ, ನೀರು ಹೀಗೆ ಯಾವುದು ನೋಡಲು ಸಿಕ್ಕರೂ (ನಿಸರ್ಗ) ಅದು ಹರಿದರ್ಶನವೆಂದೇ ತಿಳಿಯಬೇಕು

— ಭಾಗವತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator