ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ಕತೆ: ೪: ಪ್ರಥಮ ಸೂತ್ರ

August 7, 2005 - 7:41am — olnswamy

ಕ್ಯೋಟೋದಲ್ಲಿರುವ ಒಬಾಕು ದೇವಾಲಯಕ್ಕೆ ಹೋದವರಿಗೆ ಅಲ್ಲಿನ ಮಹಾದ್ವಾರದ ಮೇಲೆ "ಪ್ರಥಮ ಸೂತ್ರ" ಎಂದು ಬರೆದಿರುವುದು ಕಾಣುತ್ತದೆ. ಅಕ್ಷರಗಳು ಬಲು ದೊಡ್ಡವು. ಕೈ ಬರಹದ ಕಲೆಯ ನಿಷ್ಣಾತರು ಈ ಬರವಣಿಗೆಯನ್ನು ಅತ್ಯುತ್ತಮ ಕಲಾಕೃತಿ ಎಂದು ಹೊಗಳುತ್ತಾರೆ. ಇದನ್ನು ಬರೆದವನು ಇನ್ನೂರು ವರ್ಷಗಳ ಹಿಂದೆ ಬದುಕಿದ್ದ ಕೊಸೆನ್ ಎಂಬ ಕಲಾವಿದ.
ಕೊಸೆನ್ ಅಕ್ಷರಗಳನ್ನು ಹಾಳೆಯ ಮೇಲೆ ಬರೆಯುತ್ತಿದ್ದ. ಆಮೇಲೆ ಬಡಗಿಗಳು ಆ ಅಕ್ಷರಗಳನ್ನು ಮರದ ಮೇಲೆ ಕಾಪಿ ಮಾಡಿಕೊಂಡು ಕೆತ್ತುತ್ತಿದ್ದರು.
ಕೊಸೆನ್‌ಗೆ ಒಬ್ಬ ಧೈರ್ಯವಂತ ಶಿಷ್ಯ ಇದ್ದ. ಅಕ್ಷರ ಕಲೆಯಲ್ಲಿ ಪರಿಣತಿ ಪಡೆದಿದ್ದ. ಕೊಸೆನ್ ಮೊದಲ ಬಾರಿಗೆ ಅಕ್ಷರಗಳನ್ನು ಹಾಳೆಯ ಮೇಲೆ ಬರೆದಾಗ ಅವನೂ ಅಲ್ಲೇ ಇದ್ದ.
"ಗುರುವೇ, ಇದು ಚೆನ್ನಾಗಿಲ್ಲ" ಅಂದ.
ಗುರು ಮತ್ತೊಮ್ಮೆ ಬರೆದು "ಹೇಗಿದೆ?" ಎಂದು ಕೇಳಿದ.
"ಕೆಟ್ಟದಾಗಿದೆ, ಮೊದಲಿನದೇ ಎಷ್ಟೋ ವಾಸಿ" ಅಂದ ಶಿಷ್ಯ.
ಗುರು ತಾಳ್ಮೆಯಿಂದ ಮತ್ತೆ ಬರೆದ. ಶಿಷ್ಯನಿಗೆ ಅದೂ ಇಷ್ಟವಾಗಲಿಲ್ಲ. ಮತ್ತೆ ಬರೆದ. ಮತ್ತೆ ಚೆನ್ನಾಗಿಲ್ಲ ಅನ್ನುವ ಮಾತು ಕೇಳಿದ. ಹೀಗೇ ಎಂಬತ್ತನಾಲ್ಕು ಪ್ರಥಮ ಸೂತ್ರಗಳು ರಾಶಿಯಾಗಿ ಬಿದ್ದವು. ಶಿಷ್ಯ ಯಾವುದನ್ನೂ ಒಪ್ಪಲಿಲ್ಲ.
ವಿಮರ್ಶಕ ಶಿಷ್ಯ ಕೊಂಚ ಹೊತ್ತು ಹೊರಗೆ ಹೋಗಬೇಕಾಗಿ ಬಂತು. "ಅವನ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳುವುದಕ್ಕೆ ಇದೇ ಸಮಯ" ಎಂದುಕೊಂಡ ಗುರು ನಿರಾಳವಾದ ಮನಸ್ಸಿನಿಂದ ಸರಸರನೆ "ಪ್ರಥಮ ಸೂತ್ರ" ಬರೆದ.
ವಾಪಸ್ಸು ಬಂದ ಶಿಷ್ಯ "ಅದ್ಭುತ ಕಲಾಕೃತಿ" ಎಂದು ಉದ್ಗರಿಸಿದ.
[ಸದಾ ದೋಷಗಳನ್ನು ಹುಡುಕುವುದಲ್ಲ; ಎಲ್ಲವೂ ಹೀಗೇ ಇರತಕ್ಕದ್ದು ಎಂಬುದೂ ಅಲ್ಲ; ಇನ್ನೊಬ್ಬರ ಮೆಚ್ಚುಗೆ ಬಯಸುವುದೂ ಅಲ್ಲ; ನಿರಾಳವಾಗಿರುವುದು ಝೆನ್]

‹ ಝೆನ್ ಕತೆ ೧೬: ಕನಸಿನ ಚಿಟ್ಟೆ-ಚಿಟ್ಟೆಯ ಕನಸುಮೇಲಿನ ಪುಟಕ್ಕೆಝೆನ್ ಕತೆ: ೫: ಒಂದು ಕೈ ಚಪ್ಪಾಳೆ ›
  • ಕಥಾ ಮಾಲಿಕೆ
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1255 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 7, 2005 - 11:42pm — hpn

ಅಕ್ಷರ ಕಲೆ

hpn's picture

ಇಲ್ಲಿ ಜಪಾನ್ ಮತ್ತು ಚೈನಾಗಳಲ್ಲಿ ಜನಪ್ರಿಯವಾದ ಅಕ್ಷರ ಕಲೆ ಅಥವಾ ಕ್ಯಾಲಿಗ್ರಫಿಯ ಬಗ್ಗೆ ಈಗಾಗಲೇ ಇದರ ಬಗ್ಗೆ ತಿಳಿದಿಲ್ಲದ ಜನರಿಗಾಗಿ ಒಂದಷ್ಟು ಬರೆದರೆ ಸೂಕ್ತವೆಂದು ಸೇರಿಸುತ್ತಿರುವೆ...

ಜಪಾನ್ ದೇಶದಲ್ಲಿ ಅಕ್ಷರಗಳು ಸಂಕೇತಗಳಾದ್ದರಿಂದ ಅದನ್ನು ಬರೆಯುವುದೂ ಒಂದು 'ಕಲೆ'. ಅಲ್ಲಿನ ಅಕ್ಷರಗಳನ್ನು ಚೆನ್ನಾಗಿ ಬರೆಯುವವರಿಗೆ (ಬಿಡಿಸುವವರಿಗೆ) ಆ ದೇಶಗಳಲ್ಲಿ ಬಹಳ ಗೌರವ ನೀಡುತ್ತಾರೆ. ಸಣ್ಣ ಮಕ್ಕಳು ತಮ್ಮ ಶಾಲೆಯ ಸಿಲ್ಲಾಬಸ್ ನಲ್ಲಿ ಕ್ಯಾಲಿಗ್ರಫಿ ಕಲೆಯುವುದುಂಟಂತೆ!

ಮತ್ತಷ್ಟು ಮಾಹಿತಿಗೆ ವಿಕಿಪೀಡಿಯಾದ ಲೇಖನ ನೋಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್: ೩: ಒಂದು ಹನಿ
  • ಝೆನ್ ೧೦ : ಇನ್ನೂ ಮೂರು ದಿನ
  • ತಗೋ ಬೆಳಕು
  • ಝೆನ್ ಕತೆ: ೨೩: ಕೋಪ
  • ಝೆನ್ ಕತೆ: ೨೨: ಅಮೂಲ್ಯ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 165 ಅತಿಥಿಗಳು ಆನ್ಲೈನ್ ಇರುವರು.


ಪ್ರಗತಿಯೇ ಜೀವನದ ವ್ಯಾಪಾರ!

— ಸ್ಯಾಮುಯೆಲ್ ಜಾನ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator