ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಶ್ರೀನಿವಾಸರಾಜು ಮೇಷ್ಟರಿಗೆ ನಮಸ್ಕಾರ

February 19, 2007 - 7:51pm — rasheed

ಬಹುಶಃ ಈಗಿನ ಹುಡುಗರಿಗೆ ಶ್ರೀನಿವಾಸರಾಜು ಮೇಷ್ಟರು ಸಿಗಲಿಕ್ಕಿಲ್ಲ
ಮೇಷ್ಟರಿಗೆ ಹುಡುಗರೂ ಇರಲಿಕ್ಕಿಲ್ಲ
ಇದು ಹಳಹಳಿಕೆಯೆಂದೇನೂ ಅನಿಸಬೇಕಾಗಿಲ್ಲ
ಏಕೆಂದರೆ ಕವಿತೆ ಹುಚ್ಚು ಹಾದರಗಿತ್ತಿಯಂತಹ ಹೆಂಗಸು,
ವಿಟನಂತಹ ಬೇಜವಾಬ್ಧಾರಿಯ ಗಂಡಸು, ಹಾಗೆಲ್ಲಾ
ಮೇಷ್ಟರ ಪಾಲಾಗುವುದಿಲ್ಲ ಅಂತ ನಾವೆಲ್ಲ ಸಜ್ಜನರ ಕಾಲೆಳೆಯಬೇಕಾಗಿಲ್ಲ.
ಏಕೆಂದರೆ ಸಜ್ಜನರು ಈಗಲೂ ಕಾಲವಾಗಿಲ್ಲ.
ಬಹುಶಃ ಇದನ್ನು ಸಮೀಕರಣದ ಮೂಲಕ ಹೀಗೂ ಹೇಳಬಹುದು
ಅಂತೆಲ್ಲ ಬಗೆಹರಿಸುತ್ತಿರಬೇಕಾದರೆ ನನಗೆ ನನ್ನನ್ನೇ ಒದೆಯಬೇಕೆನ್ನಿಸುತ್ತದೆ.

‘ಸುಮ್ಮನೇ ಮೇಷ್ಟರ ಕಾಲಬಳಿ ಕುಳಿತು ಅಥವಾ ಅವರ ಕೈ ತುತ್ತಿನಂತಹ
ವಾತ್ಸಲ್ಯ ಉಂಡು ಯಾಕೆ ಬೆನ್ನು ತಡವಿಸಿಕೊಂಡು ಬರಲಾಗುತ್ತಿಲ್ಲ’
ಮೇಷ್ಟರು ನಮ್ಮನ್ನು ಬೈಯ್ಯಬಹುದಿತ್ತು, ಕಿಚಾಯಿಸಬಹುದಿತ್ತು,
ವಿಮರ್ಶಿಸಬಹುದಿತ್ತು - ಹಾಗೇನೂ ಮಾಡಲಿಲ್ಲ
ಸುಮ್ಮನೇ ಸದ್ದು ಮಾಡದೇ ಸಪಾಟು ದಾರಿಯಲ್ಲಿ ನಡೆವಂತೆ ನಡೆದು
ಟೀ ಲೋಟ ಕೈಯಲ್ಲಿರುವಂತೆ ನಡೆದು
ಕವಿತೆ ಎದೆಯೊಳಗಿರುವಂತೆ ನಡೆದು
ಎಲ್ಲಿ ಹೆಜ್ಜೆ ಊರುವುದೋ ಎಂಬಂತೆ ನಡೆದು
ಪುಸ್ತಕಗಳ ಪ್ರಕಾಶಿಸಿದರು
ನನ್ನಂತಹ ಅರಿವುಗೆಟ್ಟವನ ಕವಿಯನ್ನಾಗಿಸಿದರು

ಒಮ್ಮೆ ಮೇಷ್ಟರಿಗೆ ನಮಸ್ಕಾರ ಮಾಡಲು ಮರೆತು ನನಗೆ ನನ್ನನ್ನೇ ಒದೆಯಬೇಕೆನ್ನಿಸಿತ್ತು
ಆಮೇಲೆ ಎಲ್ಲೋ ಹೊಳೆಯ ಬದಿಯಲ್ಲಿ ನನಗೆ ಅವಳು ಸಿಲುಕಿ ನನ್ನ ನಾಲಗೆಯಲ್ಲಿ ನೆತ್ತರು ಜಿನುಗಿ ಅವಳ ಎದೆ ಹೊಟ್ಟೆ ಬೆನ್ನು ಕುಂಡೆಯಲ್ಲೆಲ್ಲಾ ಉಣ್ಣೆಹುಳಗಳು ಕಚ್ಚಿ ರಂಪಾಟವಾಡಿ ಆಮೇಲೆ ಅದೇ ಸಖತ್ತಾಗಿ ಕವಿತೆಯಾಗಿ ಅದಕ್ಕೆ ಮೇಷ್ಟರು ಬಹುಮಾನವೂ ಕೊಟ್ಟು ಅದು ಹಾಗಲ್ಲ ಹಾಗಲ್ಲ ಎಂದು ಹಲ್ಲು ಕಚ್ಚಿಕೊಂಡಿದ್ದೆ
ಆಗಲೂ ಶ್ರೀನಿವಾಸರಾಜು ಮೇಷ್ಟರು ಮಗುವಿನ ಹಾಗೆ ನಗುತ್ತಿದ್ದರು
ಈಗಲೂ ನಗುತ್ತಿರುತ್ತಾರೆ.
ಅವರ ಮನೆಯೆದುರಿನ ಮಲ್ಲಿಗೆ ಬಳ್ಳಿ
ಕಾಮದೇನುವಿನ ಪರಿಮಳ!
ಅವಳ ಕೆಚ್ಚಲಿನಿಂದ ಮುಖವ ಬಿಡಿಸಿಕೊಂಡು ಬೆಂಗಳೂರಿನ ಬಸ್ಸು ಹತ್ತಿ
ಕ್ರೈಸ್ಟ್ ಕಾಲೇಜಿನಿಂದ ಕವಿತೆಗೆ ಬಹುಮಾನ ಇಸಕೊಂಡು ಬರುವುದಿದೆಯಲ್ಲ
ಮೇಷ್ಟ್ರೆ ನೀವಿದ್ದರೆ ಹುಡುಗರಿಗೆ ಹೀಗೆಲ್ಲ ಕಾವ್ಯದ ಹಾಗೆ
ಗಿರಕಿ ಹೊಡೆಯಲು ಆಗುತ್ತದೆ.
ನಿಮಗೆ ನಮಸ್ಕಾರ.

-ರಶೀದ್
  • ಕಾವ್ಯ ಮತ್ತು ಕವನ
~.~
  • Login or register to post comments
  • 732 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 27, 2007 - 2:17pm — droupadhi

Re: ಶ್ರೀನಿವಾಸರಾಜು ಮೇಷ್ಟರಿಗೆ ನಮಸ್ಕಾರ

droupadhi's picture

droupadi

ಮಾನ್ಯ ರಶೀದ್ ಸಾಹೇಬರಿಗೆ

ನಿಮ್ಮ ಕವಿತೆ ಓದಿದೆ ಖುಷಿ ಕೊಟ್ಟಿತು

ನಾನೂ ಕ್ರೈಸ್ಟ್ ಕಾಲೇಜಿಗೆ ಕವನ ಕಳಿಸಿದ್ದೆ

ಆದರೆ ಆಗ ಶ್ರೀನಿವಾಸರಾಜು ಇರಲಿಲ್ಲ

ಬಹುಮಾನವೂ ಬರಲಿಲ್ಲ

ನಿಮ್ಮ ಹತ್ರ ಅವರ ವಿಳಾಸ ಇದ್ರೆ ಕೊಡ್ತೀರಾ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 10, 2007 - 8:35pm — venkatesh

ರಾಜು ರವರಿಗೆ ನಮಸ್ಕಾರ.

venkatesh's picture

ನಮಸ್ಕಾರ.

ನಾನು ನಿಮ್ಮ ಬಗ್ಗೆ 'ರಶೀದ್' ಬರೆದ ಪತ್ರ , ಹಾಗೂ ನಿಮ್ಮ ಬಗ್ಗೆ ಬರೆದ ಕವನ ಓದಿದೆ. ಸಂಪದದಲ್ಲಿ ಬರೆದರೆ ಸಾಕು, ಊರು-ಕೇರೀಗೆಲ್ಲಾ ಸುದ್ದಿ ತಲ್ಪತ್ತೆ.

ವೆಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಡುಗೆ ಮಾಡುವ ವಿಧಾನ - ಒಂದು ಚುಟುಕ
  • ಚಿ ಶ್ರೀನಿವಾಸರಾಜು ಇನ್ನಿಲ್ಲ
  • ಒಂದು ಖಾಸಗೀ ಕವಿತೆ
  • ಫಾದರ್ ಸೆರ್ಗಿಯಸ್ (ಟಾಲ್ಸ್‌ಟಾಯ್ ಕಥೆ) - ಓ ಎಲ್ ಎನ್ ಸ್ವಾಮಿ
  • ವಿಶ್ವೇಶ್ವರ ಭಟ್ ಅವರ ಪುಸ್ತಕಗಳ ಬಿಡುಗಡೆ ಸಮಾರಂಭ
Syndicate content

ಲೇಖಕರು

rasheed's picture

ಪರಿಚಯ

i do not know myself

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 119 ಅತಿಥಿಗಳು ಆನ್ಲೈನ್ ಇರುವರು.


ಪ್ರಗತಿಯೇ ಜೀವನದ ವ್ಯಾಪಾರ!

— ಸ್ಯಾಮುಯೆಲ್ ಜಾನ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator