ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಶ್ರೀಬಸವೇಶ್ವರರ ವಚನಗಳು-2

June 8, 2008 - 2:26am — sushil
ಶ್ರೀಬಸವೇಶ್ವರ

ನೀನೊಲಿದರೆ ಕೊರಡು ಕೊನರುವುದಯ್ಯ
ನೀನೊಲಿದರೆ ಬರಡು ಹಯನಹುದಯ್ಯ
ನೀನೊಲಿದರೆ ವಿಷವಮೃತವಹುದಯ್ಯ
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ

ನೀರಿಂಗೆ ನೈದಿಲೆಯೇ ಶೃಂಗಾರ
ಊರಿಂಗೆ ಅಕನೆಯೇ ಶೃಂಗಾರ
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗಮನ ಶರಣರಿಗೆ
ನೊಸಲ ವಿಭೂತಿಯೇ ಶೃಂಗಾರ

ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ?

ಲೋಕದ ಡೊಂಕ ನೀವೇಕೆ ತಿದ್ದುವಿರಿ?
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದು:ಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ

ಹಾವು ತಿಂದವರ ನುಡಿಸಬಹುದು
ಗರ ಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ

ಮಾಡುವಂತಿರಬೇಕು, ಮಾಡದಂತಿರಬೇಕು!
ಮಾಡುವ ಮಾಟದೊಳಗೆ ತಾನಿಲ್ಲದಿರಬೇಕು!!
ನೋಡುವಂತಿರಬೇಕು, ನೋಡದಂತಿರಬೇಕು!
ನೋಡುವ ನೋಟದೊಳಗೆ ತಾನಿಲ್ಲದಿರಬೇಕು!!
ನಮ್ಮ ಕೂಡಲಸಂಗಮದೇವರ
ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು!

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ.
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ,
ಕೂಡಿಕೊಂಬುವ ನಮ್ಮ ಕೂಡಲಸಂಗಮದೇವ

ಕಲ್ಲನಾಗರ ಕಂಡರೆ ಹಾಲನೆರೆ ಎಂಬರು;
ದಿಟನಾಗರ ಕಂಡರೆ ಕೊಲ್ಲು ಕೊಲ್ಲು ಎಂಬರಯ್ಯ!
ಉಂಬ ಜಂಗಮ ಬಂದರೆ ನಡೆ ಎಂಬರು;
ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ!
ನಮ್ಮ ಕೂಡಲಸಂಗನ ಶರಣರ ಕಂಡು
ಉದಾಸೀನವ ಮಾಡಿದರೆ,
ಕಲ್ಲತಾಗಿದ ಮಿಟ್ಟೆಯಂತಪ್ಪರಯ್ಯ!

ಮಡಕೆಯ ಮಾಡುವೊಡೆ ಮಣ್ಣೇ ಮೊದಲು,
ತೊಡಿಗೆಯ ಮಾಡುವೊಡೆ ಹೊನ್ನೇ ಮೊದಲು,
ಶಿವಪಥ ಅರಿವೊಡೆ ಗುರುಪಥ ಮೊದಲು,
ಕೂಡಲಸಂಗಮ ದೇವರನರಿವೊಡೆ,
ಶರಣರ ಸಂಗವೇ ಮೊದಲು, ಮೊದಲು.

  • ಅಧ್ಯಾತ್ಮ
~.~
  • Login or register to post comments
  • 794 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 8, 2008 - 8:29am — Sunil Jayaprakash

ಉ: ಶ್ರೀಬಸವೇಶ್ವರರ ವಚನಗಳು-2

Sunil Jayaprakash's picture

ತುಂಬಾ ಅಂದ್ರೆ ತುಂಬಾ ನಲಿವಾಗುತ್ತಿದೆ. ಈ ರೀತಿಯ ಸರಳ ಸುಂದರ ವಚನಗಳನ್ನು ಓದಕ್ಕೆ, ಚಿಂತನೆಗೈಯುವುದಕ್ಕೆ ನೀಡಿ, ಈ ಭಾನುವಾರದಿಂದು ಒಳ್ಳೆಯ ಆರಂಭ ಕೊಟ್ಟಿದ್ದಕ್ಕಾಗಿ ಸುಶೀಲ್ ನನ್ನಿ.

ಊರಿಂಗೆ ಅಕನೆಯೇ ಶೃಂಗಾರ - ಅಕನೆ ಅಂದ್ರೆ ಏನು ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 8, 2008 - 10:38am — sushil

ಉ: ಶ್ರೀಬಸವೇಶ್ವರರ ವಚನಗಳು-2

sushil's picture

ಕ್ಷಮಿಸಿ ಸುನಿಲ್ ಅವರೇ,ಬರೆದುಕೊಂಡದ್ದನ್ನೆಲ್ಲ ಟೈಪಿಸಿದ್ದೆ.ಅದರಲ್ಲಿ ತಪ್ಪಾಗಿದೆ.
ಆ ಸಾಲು ವಚನದಲ್ಲಿಲ್ಲ.ಇತ್ತೀಚೆಗೆ ಸೇರಿಸಲಾಗಿದೆ ಅಂತ ಅಪ್ಪಾಜಿಯವರನ್ನ ಕೇಳಿ ತಿಳಿದುಕೊಂಡೆ.
ಮತ್ತೆಂದೂ ಹೀಗಾಗದಂತೆ ನೋಡಿಕೊಳ್ಳುವೆ.

-ಸುಶೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 9, 2008 - 11:38am — girish.rajanal

ಉ: ಶ್ರೀಬಸವೇಶ್ವರರ ವಚನಗಳು-2

girish.rajanal's picture

ವಚನ ’ಅಮೃತ’ ಸವಿಸಿದ್ದಕ್ಕೆ ಹೆನ್ನನ್ನಿ.

ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 9, 2008 - 2:03pm — harshab

ಉ: ಶ್ರೀಬಸವೇಶ್ವರರ ವಚನಗಳು-2

harshab's picture

ಚೆನ್ನಾಗಿದೆ ಸುಶೀಲ್. ವಚನಗಳ ಜೊತೆಗೆ ಅದರ ಸಣ್ಣ description ಇದ್ದರೆ ಇನ್ನೂ ಚೆನ್ನಿತ್ತು Smiling.
ಮುಂದಿನ ಸಲ try ಮಾಡಿ, ಒಂದೊಂದೆ ವಚನಗಳನ್ನು( description ಜೊತೆಗೆ ) ಹಾಕಿದರೂ ಪರವಾಗಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 10, 2008 - 12:21am — sushil

ಉ: ಶ್ರೀಬಸವೇಶ್ವರರ ವಚನಗಳು-2

sushil's picture

ಧನ್ಯವಾದಗಳು ಹರ್ಷ ಅವರೇ..ನನಗೂ ಹಾಗೇ ಅನಿಸಿದ್ದುಂಟು.
ಪ್ರಯತ್ನಿಸುವೆ. Smiling

-ಸುಶೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 11:46am — kannadakanda

ಉ: ಶ್ರೀಬಸವೇಶ್ವರರ ವಚನಗಳು-2

kannadakanda's picture

ಕೊಱಡು, ಬಱಡು, ಅಱಿವೊಡೆ ಎಂಬಿವು ಮೂಲಪಾಠಗಳೆಂಬುದನ್ನು ಬಿಟ್ಟರೆ ಉೞಿದಂತೆ ಒಳ್ಳೆಯ ವಚನಗಳು. ಸಾಧ್ಯವಾದಷ್ಟು ವಚನಗಳಲ್ಲಿ ಱಕಾರವಿದ್ದಂತೆಯೇ ಬೞಸಿ. ಬಾಸೆ(ಭಾಷೆ)ಯನ್ನು ಅಧ್ಯಯನವಿಷಯ ಮಾಡಿಕೊಂದಿರುವ ನನಗೆ ಅದೆಷ್ಟಱ ಮಟ್ಟಿಗೆ ಅನುಕೂಲವಾಗುತ್ತದೆ.

ಇಂತು ತಮ್ಮ ವಿಶ್ವಾಸಿ
ಕನ್ನಡಕಂದ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಸವಣ್ಣನ ನುಡಿ
  • ವಚನಕಾರರು - ೨
  • ಬಸವಣ್ಣನವರ ವಚನಸುಧೆ 2
  • ನವರಸದ ನಗೆ - ಶೃಂಗಾರ
  • ವಚನ ಚಿಂತನ: ಬಸವಣ್ಣ: ಬಿದಿರು ಆಗಬೇಕು
Syndicate content

ಲೇಖಕರು

sushil's picture

ಪೂರ್ಣ ಹೆಸರು
ಸುಶೀಲ್ ಕುಮಾರ್

ಪರಿಚಯ

ಪುಸ್ತಕ,ಚಿತ್ರಕಲೆ,ಸಂಗೀತ ನನ್ನ ಸ್ನೇಹಿತರು.ತಾಯಿಗೆ ತಾಯ್ನಾಡಿಗೆ ಒಳ್ಳೆ ಮಗನಾಗೋ ಆಸೆ Sticking out tongue

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
  • ಮುಂಬಯಿ ಘಟನೆಯ ಬಗ್ಗೆ "ಪ್ರಸೂನ್ ಜೋಶಿಯ" ಕವನ: ಈ ಬಾರಿ ಇಲ್ಲ
  • ಸಾವಿನ ಹತ್ತಿರ
  • ಸಕಲವೂ ಈಶ್ವರಮಯವಾದುದು
  • ನಿಟ್ಟೆ:ವಾರದ ಅಂತರದಲ್ಲಿ ಎರಡು ಅಂತಾರ್ರಾಷ್ಟ್ರೀಯ ಸಮಾವೇಶಗಳು
  • ನನ್ನ ತಪ್ಪೇ ಅಥವಾ ಸಿನಿಕತನವೇ?
  • ರಾಜಕಾರಣಿಗಳಿಗೆ ತಮ್ಮ ಅದ್ದೂರಿತನ ತೋರಿಸಿಕೊಳ್ಳುವ ಗೀಳಿದೆಯೇ?

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 114 ಅತಿಥಿಗಳು ಆನ್ಲೈನ್ ಇರುವರು.


ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator