ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಮತ್ತದೇ ಖಾಲಿತನ, ಬೇಸರ

August 7, 2008 - 6:43am — Chamaraj
Boredom.jpg

ಹಾಡುಗಳ ಸಿಡಿ ಇಟ್ಟಲ್ಲೇ ಇದೆ. ಒಂದೇ ಕ್ಲಿಕ್ಕಿಗೆ ಕಿಶೋರ್‌ ಹಾಡತೊಡಗುತ್ತಾನೆ. ಆದರೆ ಬೆರಳುಗಳು ಚಲಿಸುವುದಿಲ್ಲ.

ಕೈ ಚಾಚಿದರೆ ಕಗ್ಗ ಸಿಗುತ್ತದೆ. ಡಿವಿಜಿ ವೇದಾಂತ ಹೇಳುತ್ತಾರೆ. ಡಾಮ್ನಿಕ್‌ ಲ್ಯಾಪಿಯರ್‌ ಚೆಂದಗೆ ಕತೆ ಹೇಳುತ್ತಾನೆ. ತರುಣ್‌ ತೇಜ್‌ಪಾಲ್‌ ಇದ್ದಕ್ಕಿದ್ದಂತೆ ಖಾಲಿಯಾದ ಸ್ಥಿತಿ ವರ್ಣಿಸುತ್ತಾನೆ. ಭೈರಪ್ಪನವರು ಸಾರ್ಥ ಹೊರಡುತ್ತಾರೆ. ತಾವು ಖಾಲಿಯಾಗಿದ್ದೇವೆ ಎಂಬುದನ್ನು ಅನಂತಮೂರ್ತಿ ಋಜುವಾತು ಮಾಡುತ್ತಾರೆ. ಆದರೂ ಕೈ ಚಾಚುವುದಿಲ್ಲ.

ಜೇಬಲ್ಲೇ ಇದೆ ಕೀಲಿ. ಬೆರಳೊತ್ತಿದರೆ ಸ್ಕೂಟಿ ಶುರುವಾಗುತ್ತದೆ. ಎಂಟೂ ದಿಕ್ಕುಗಳಿಗೆ ಯಾತ್ರೆ ಹೊರಡಬಲ್ಲುದು. ಆದರೂ ಕೈ ಸುಮ್ಮನಿದೆ.

ಎರಡೇ ಬಟನ್ನಿಗೆ ಮೆಚ್ಚಿನ ಚಾನೆಲ್‌ ಪ್ರತ್ಯಕ್ಷವಾಗುತ್ತದೆ. ಗಂಟೆ ಒಂಬತ್ತಾಯಿತೆ? ಪ್ರೈಮ್‌ ನ್ಯೂಸ್‌ ಬರುತ್ತಿರುತ್ತವೆ. ಏಕೋ ಸುದ್ದಿಗಳು ಬೇಸರ ಹುಟ್ಟಿಸುತ್ತವೆ. ರಿಮೋಟ್‌ ಅಲ್ಲೇ ಕೂತಿದೆ. ಆಜ್ಞೆಗಾಗಿ ಕಾಯುವ ಸಾಕುನಾಯಿಯಂತೆ.

ಯಾವಾಗ ಬೇಕಾದರೂ ಮೊಳಗಬಲ್ಲ ಮೊಬೈಲ್‌ ಪಕ್ಕಕ್ಕಿದೆ, ಥೇಟ್‌ ಸಿಡಿಯಲು ಸಿದ್ಧವಾದ ಬಾಂಬ್‌ನಂತೆ. ಬೆರಳೊತ್ತಿದರೆ ಇಷ್ಟಪಡುವ ಹಲವಾರು ಮಿತ್ರರು ಅಂಕೆಗಳಾಗಿ ಕಾಯುತ್ತಿದ್ದಾರೆ. ಆದರೂ ಕೈ ಅತ್ತ ಸರಿಯುತ್ತಿಲ್ಲ.

ಹಳೆಯ ಫೊಟೊಗಳ ಆಲ್ಬಮ್ಮುಗಳಿವೆ. ಅಚ್ಚಾದ ರಾಶಿರಾಶಿ ಪತ್ರಿಕೆಗಳಿವೆ. ಅಚ್ಚಿಗೆ ಕೊಡದೇ ಹಾಗೇ ಇಟ್ಟುಕೊಂಡ ನೂರಾರು ಬರಹಗಳಿವೆ. ಕಣ್ಣು ಮುಚ್ಚಿದರೆ ಮನಸ್ಸು ಮೂವತ್ತು ವರ್ಷ ಹಿಂದಕ್ಕೂ ಹೋಗಬಲ್ಲುದು. ಎಳೆಎಳೆಯನ್ನೂ ಹೆಕ್ಕಿ ನೆನಪಿನ ಚಾದರ ನೇಯಬಲ್ಲುದು. ಯಾವುದೋ ಎಳೆ ಹಿಡಿದೆಳೆದರೆ ಹಾಡಾಗುತ್ತದೆ, ಪ್ರಬಂಧವಾಗುತ್ತದೆ, ಕತೆಯಾಗುತ್ತದೆ, ಕೊಂಚ ಶ್ರದ್ಧೆಯಿಂದ ಕೂತರೆ ಕವಿತೆಯೂ ಆಗುತ್ತದೆ. ಆದರೂ ಮನಸ್ಸು ಸುಮ್ಮನಿದೆ.

ಕಿಟಕಿಯಾಚೆಯ ಬಾಳೆ ಗಿಡವೂ ಸುಮ್ಮನಿದೆ. ಜೊತೆಗಿದ್ದು ನೆಮ್ಮದಿ ನೀಡುತ್ತಿದ್ದ ಪೆನ್ನೂ ಸುಮ್ಮನಿದೆ. ರಿಮೋಟ್‌ ಸುಮ್ಮನಿದೆ. ಗಾಡಿಯ ಇಗ್ನಿಷನ್‌ ಕೀ ಸುಮ್ಮನಿದೆ. ಮೊಬೈಲ್‌ ಅನ್ನು ನಾನೇ ಸುಮ್ಮನಾಗಿಸಿದ್ದೇನೆ. ಏಕೋ ಗದ್ದಲ ಮಾಡುವ ಮಕ್ಕಳೂ ಮಲಗಿದ್ದಾರೆ. ಮತ್ತೇನು ವಿಶೇಷ ಎನ್ನುವ ಮಡದಿಯೂ ಮಲಗಿದ್ದಾಳೆ. ಏನೂ ವಿಶೇಷ ಇಲ್ಲವೆನ್ನುವಂತೆ ಬೆಂಗಳೂರಿನ ಗದ್ದಲದ ಟ್ರಾಫಿಕ್ಕೂ ಮೌನವಾಗಿದೆ.

ಬೀಟ್‌ ಪೋಲೀಸನ ಸಿಳ್ಳೆಯೂ ಕೇಳುತ್ತಿಲ್ಲ. ಸಂಗಾತಿಗಾಗಿ ಬೊಗಳುವ ನಾಯಿಯೂ ಸುಮ್ಮನಿದೆ. ಇಷ್ಟೊತ್ತಿಗೆ ಹೋಗಬೇಕಿದ್ದ ಕರೆಂಟ್‌ ಕೂಡ ಏತಕ್ಕೋ ಕಾಯುವಂತೆ ಬೆಳಗುತ್ತಲೇ ಇದೆ. ಮೋಡ ಚೆದುರಿ ಅಚ್ಚರಿಯಿಂದ ಚಂದ್ರ ಕೂಡ ಹೊರಬಂದಿದ್ದಾನೆ.

ಮರೆಯದೇ ಗೇಟ್‌ ಬೀಗ ಹಾಕಿದ್ದೇನೆ. ಗಾಡಿ ಲಾಕ್‌ ಮಾಡಿದ್ದೇನೆ. ಚಾರ್ಜಿಂಗ್‌ ದೀಪಗಳನ್ನು ಪ್ಲಗ್ಗಿಗೆ ಸಿಕ್ಕಿಸಿದ್ದೇನೆ. ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದೇನೆ. ನಿನ್ನೆಯ ಕೆಲಸಗಳು ಕರಾರುವಾಕ್ಕಾಗಿ ಮುಗಿದಿವೆ. ನಾಳೆ ಏನು ಮಾಡಬೇಕೆಂಬುದು ಇಂದೇ ಸ್ಪಷ್ಟವಾಗಿದೆ.

ಇವತ್ತು ಮಾಡುವುದು ಏನು?

ಮತ್ತದೇ ಬೇಸರ, ಖಾಲಿತನ, ಏಕಾಂತ !

- ಚಾಮರಾಜ ಸವಡಿ

  • ಏಕಾಂತ
  • ಖಾಲಿ
  • ಬೇಸರ
~.~
  • Chamaraj ರವರ ಬ್ಲಾಗ್
  • Login or register to post comments
  • 222 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 7, 2008 - 11:07am — ASHMYA

ಉ: ಮತ್ತದೇ ಖಾಲಿತನ, ಬೇಸರ

ASHMYA's picture

ತುಂಬ ಚನ್ನಾಗಿ ಮೂಡಿ ಬಂದಿದೆ ನಿಮ್ಮ ಸ್ವಗತ... Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 9:27pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

our sweetest songs are those which tell our saddest thoughts ಎಂಬ ಮಾತು ನಿಜವಾದಂತಾಯ್ತು ನೋಡಿ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 10:08pm — kishorpatwardhan

ಉ: ಮತ್ತದೇ ಖಾಲಿತನ, ಬೇಸರ

kishorpatwardhan's picture

ನೀವು ಕೊಟ್ಟ ತಲೆಬರಹ ಓದಿ ’ಮತ್ತದೇ ಬೇಸರವು ಅದೆ ಸಂಜೆ ಅದೆ ಏಕಾಂತ..’ (ನಿಸಾರ್ ಅಹ್ಮದ್ ..? ನಿತ್ಯೋತ್ಸವ ..?) ಹಾಡು ನೆನಪಾಯಿತು.

ಅರವತ್ತರ ದಶಕದ ಹಿಂದೀ ಸಿನೆಮಾ ಒಂದರಲ್ಲಿ ತಲತ್ ಮಹಮೂದ್ ಹಾಡಿರುವ ಹಾಡೊಂದಿದೆ:
"ಫಿರ್ ವೊಹೀ ಶಾಮ್.. ವೊಹೀ ಗಮ್.. ವೊಹೀ ತನ್ಹಾಯೀ ಹೆ. .."

http://www.youtube.com/watch?v=xfg5nHbH0j4

ಈ ಎರಡೂ ಹಾಡುಗಳ ಮೊದಲ ವಾಕ್ಯ ಅಕ್ಷರಶಃ ಒಂದೇ .. ಯಾವುದು ಮೊದಲು ಎಂಬುದು ಗೊತ್ತಿಲ್ಲ..

ಯಾವುದು ಯಾವುದಕ್ಕೆ ಸ್ಫೂರ್ತಿ ಕೊಟ್ಟಿತೋ ಗೊತ್ತಿಲ್ಲ.. ... ಅಥವಾ ಕೇವಲ ಆಕಸ್ಮಿಕ?

ಯಾರಾದರೂ ಗೊತ್ತಿರುವವರು ಹೇಳಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 10:43pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ಬಹುಶಃ ಬೇಸರ, ಖಾಲಿತನವೇ ಪ್ರೇರಣೆ ಕೊಟ್ಟಿರಬಹುದು ಅನಿಸುತ್ತೆ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 7, 2008 - 12:34pm — harshab

ಉ: ಮತ್ತದೇ ಖಾಲಿತನ, ಬೇಸರ

harshab's picture

ಹಮ್.. ನಾನು ನಿಮ್ಮಂಗೆ ಸಧ್ಯಕ್ಕೆ ನಾಗಭಟ್ಟನ ಜೊತೆ ಸಾರ್ಥದಲ್ಲಿದ್ದೆನೆ... Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 9:26pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ನಾಗಭಟ್ಟನ ಜೊತೆ ಸಾರ್ಥ ಹೋಗಿದ್ದೇ ಮರೆತುಹೋದಂತಾಗಿದೆ. ತುಂಬ ದಿನಗಳಾದವು ಸಾರ್ಥ ಹೋಗಿ. ಈಗೇನಿದ್ದರೂ ಹೊಸ ಹೊಸ ಸಾರ್ಥಗಳು, ಅರ್ಥಗಳು ಹಾಗೂ ಅನರ್ಥಗಳು.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 7, 2008 - 2:14pm — girish.rajanal

ಉ: ಮತ್ತದೇ ಖಾಲಿತನ, ಬೇಸರ

girish.rajanal's picture

ಮತ್ತದೇ ಬೇಸರ, ಖಾಲಿತನ, ಏಕಾಂತ ! Laughing out loud

ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 9:25pm — Chamaraj

ಉ: ಮತ್ತದೇ ಖಾಲಿತನ, ಬೇಸರ

Chamaraj's picture

ಹೂಂ...

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮತ್ತದೇ ಖಾಲಿತನ, ಬೇಸರ
  • ದಾಟುವ ಮುನ್ನ ಜಾರುವ ಮನ
  • ದಾಟುವ ಮುನ್ನ ಜಾರುವ ಮನ
  • ಪರಮಾಣು ಒಪ್ಪಂದ
  • ಕಣ್ಣೇ ಮುಚ್ಚೇ, ಕಾಡಬೇಡ್ವೇ...
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 100 ಅತಿಥಿಗಳು ಆನ್ಲೈನ್ ಇರುವರು.


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator