nannakanasu-chiguru
ನನಗೆ ಬರೆಯೋದಿಕ್ಕೆ ಸ್ಪೂರ್ತಿ ತಂದು ಕೊಟ್ಟ ನನ್ನ ಅತ್ಮೀಯ ಗೆಳೆಯರಾದ ಅಮರ ಮತ್ತೆ ವಿಜಯ್ ಗೆ ನನ್ನ ಹೃತ್ಪೋರ್ವಕ ವಂದನೆಗಳು. ನಿಮ್ಮೆಲ್ಲರ ಹಾರೈಕೆ ನನ್ನೊಂದಿಗಿರಲಿ... ನಮಸ್ಕಾರ, ನನ್ನ ಎಲ್ಲಾ ಸ್ನೇಹಿತರಿಗೂ.... ನಾನಿಲ್ಲಿ ಬರೆದಿರುವುದೆಲ್ಲಾ ನನ್ನ ಮನಸ್ಸಿನ ಭಾವನೆಗಳು, ಮನದ ಮಾತುಗಳು. ಮೊದ ಮೊದಲು ಕವನದ ಕಡೆಗೆ ಇದ್ದ ಒಲವು ಇತ್ತಿಚೆಗೆ ಕಡಿಮೆಯಾಗಿದೆ. ನನ್ನದೇ ಒಂದು ಪುಟ್ಟ ಬ್ಲಾಗ್ ಇದೆ. ಮನಸ್ಸಿಗೆ ತೋಚಿದ್ದನ್ನ ನಾನಿಲ್ಲಿ ವ್ಯಕ್ತಪಡಿಸ್ತಾ ಇದ್ದೇನೆ. ಇಲ್ಲಿ ಬರೆದಿರೊದ್ರಲ್ಲಿ ಬಹಳಷ್ಟು ತಪ್ಪುಗಳಿವೆ. ನನ್ನ ಓದುಗರು ಅದನ್ನ ನನಗೆ ತಿದ್ದಿ ಹೇಳಬೇಕು. ಯಾರೂಕೂಡಾ ಹುಟ್ಟಿದ ತಕ್ಷಣ ಎಲ್ಲಾದನ್ನೂ ಕಲಿಯೋದಿಲ್ಲ. ನಡಿಯೋಕಾಲು ಎಡವೋದು ಸಹಜತಾನೆ ??? ನಿಮ್ಮ ಪ್ರೀತಿಯ ತಿದ್ದುಪಡಿಗೆ ನಾನು ಚಿರರುಣಿ...
pachhu2002 ರವರ ಬ್ಲಾಗ್
ಹುನ್ಕಲ್ ವುಡ್
November 17, 2008 - 9:02am — pachhu2002ಪ್ರತೀ ಸಲದಂತೆ ಈ ಸಲವೂ ಡಿಸೆಂಬರಿನಲ್ಲಿ ನಮ್ಮ ಚಾರಣದ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿತ್ತು. ಕಳೆದಬಾರಿ ಅಣ್ಣನ ಮಗಳಿನ ನಾಮಕರಣವಿದ್ದಿದ್ದರಿಂದ ನನಗೆ ಚಾರಣಕ್ಕೆ ಹೋಗಲಾಗಿರಲಿಲ್ಲ. ವರುಷದ ಮಿಕ್ಕ ದಿನಗಳಲ್ಲಿ ಯಾಂತ್ರಿಕಜೀವನದಿಂದ ಸ್ವಲ್ಪ ಬದಲಾವಣೆ ಇರಲೆಂದು ನಮ್ಮ ಚಾರಣದ ತಂಡ ಡಿಸೆಂಬರಿನಲ್ಲಿ ಚಾರಣಕ್ಕೆ ಹೋಗುವುದು ವಾಡಿಕೆ. ಕಳೆದಬಾರಿ ಪ್ರಕೃತಿಯ ಮಡಿಲಿನಲ್ಲಿ ವಿಹರಿಸುವ ಅವಕಾಶ ಕೈತಪ್ಪಿದ್ದರಿಂದ ಈ ಸಲವಾದರೂ ಚಾರಣಕ್ಕೆ ಹೋಗಲೇಬೇಕೆಂದು ಮೊದಲೇ ಮನದಲ್ಲಿ ಎಣಿಸಿದ್ದೆ. ನಾನು ಖಂಡಿತವಾಗಿ ಬರುವುದಾಗಿಯೂ ತಿಳಿಸಿದ್ದೆ.
ಆದರೆ ಸ್ವಲ್ಪದಿನಗಳ ನಂತರವಷ್ಟೇ ನೆನಪಾಗಿದ್ದದ್ದು.... ನಾವು ಚಾರಣಕ್ಕೆ ಹೊರಡುವ ದಿನಾಂಕದಂದೇ ಅಪ್ಪನ ಮಾಸಿಕ ಇದೆಯೆಂದು. ಚಾರಣಕ್ಕಿಂತಾ ಮಾಸಿಕ ಮುಖ್ಯವಾದದ್ದರಿಂದ ಈ ಸಲವೂ ಚಾರಣದ ಅವಕಾಶ ಕೈ ತಪ್ಪಿ ಹೋಯಿತು. ಪ್ರಕೃತಿಯ ಮಡಿಲಿನಲ್ಲಿ ಪ್ರತಿವರುಷವೂ ಕಳೆಯುತ್ತಿದ್ದ ದಿನಗಳನ್ನು ಈ ಸಲ ಕಳೆಯಲಾಗಲಿಲ್ಲ ಎಂದುಕೊಳ್ಳುತ್ತಿರುವಾಗಲೇ ಮನೋಹರ ೨ ದಿನಗಳ ಚಾರಣದಬಗ್ಗೆ ಹೇಳಿದ. ಚಾರಣದ ಸ್ಥಳ, ಹೊರಡುವ ವೇಳೆ, ಅಲ್ಲಿಗೆ ಹೋಗುವ ವ್ಯವಸ್ಥೆ ಎಲ್ಲಾ ತಿಳಿದುಕೊಂಡು ನಾನು ಬರುವುದಾಗಿ ಹೇಳಿ ಆ ವಿಚಾರವಾಗಿ ಅದರಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡೆ. ಹರ್ಷ ಈ ಚಾರಣದ ಜವಾಬ್ದಾರಿಯನ್ನು ಹೊತ್ತಿದ್ದರು. ಪ್ರಾಕ್-ಸಿಸ್ ಅನ್ನುವ ಕಂಪನಿಯಲ್ಲಿ ಕೆಲಸ ಮಾಡುವ ಅವರು ಮತ್ತು ಅವರ ಸಹೋದ್ಯೋಗಿಗಳ ಜೊತೆಯಲ್ಲಿ ನಾನೂ ಒಬ್ಬನಾಗಿ "ಹುನ್ಕಲ್ ವುಡ್" ಅನ್ನುವ ಧಾಮಕ್ಕೆ (Resort) ಹೋಗಿ ಹತ್ತಿರದಲ್ಲೇ ಇರುವ ಹುನ್ಕಲ್-ರಾಕ್ ಅನ್ನು ಹತ್ತುವುದು ನಮ್ಮ ಪೂರ್ವಯೋಜಿತ ಕಾರ್ಯಕ್ರಮವಾಗಿತ್ತು. ಅಂದಾಜು ೩೪ ಜನ ಒಟ್ಟಿಗೇ ಒಂದು ಬಸ್ಸಿನಲ್ಲಿ ಚಿಕ್ಕಮಗಳೂರಿನ ಮೂಲಕ "ಹುನ್ಕಲ್ ವುಡ್" ಧಾಮಕ್ಕೆ ಹೋಗಬೇಕಾಗಿತ್ತು. ಅಲ್ಲಿ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿದ್ದದ್ದರಿಂದ ಹರ್ಷ ಮೊದಲೇ ಅದನ್ನು ಕಾದಿರಿಸಿದ್ದರು. ಆ ೩೪ ಜನದಲ್ಲಿ ೪ ಪುಟ್ಟ ಮಕ್ಕಳೂ ಇದ್ದದ್ದು ವಿಷೇಶ.

ಕಲ್ಪನೆಯು ಕನ್ಯೆ…
November 20, 2008 - 10:17am — pachhu2002ಕಾದಿರುವುದೀ ಮನ ನಿನ್ನ ಬರುವಿಕೆಗಾಗಿ
ಕಾಯುತಿದೆ ಈ ಹೃದಯ ನಿನ್ನೊಲುಮೆಗಾಗಿ..
ನಿನ್ನ ಕಲ್ಪನೆಯದೊಂದು ಚಿತ್ರವನು ಹೃದಯದಿ ಹೊಂದಿರುವೆನು
ನಿನ್ನಂದವನು ನಾ ಕಂಡಿಲ್ಲ, ನಿನ್ನಯ ಚೆಲುವನ್ನು ಸೃಷ್ಟಿಕರ್ತನೇಬಲ್ಲನು…
ನನ್ನ ಕಲ್ಪನೆಯ ಬೆಡಗಿ ನೀ ಹೀಗಿರಬಹುದೆಂದು
ಚಿತ್ರಿಸಿರುವೆ ನಿನ್ನದೇ ರೂಪವನೊಂದು…
ಮುದ್ದಾದ ಸವಿಮಾತು ನನ್ನ ಕಿವಿಗೆ ಸಾಕು ಮುಂದೆ ಓದಿ »

ಪ್ರೀತಿ ಮೂಡಿದಾಗ...
November 13, 2008 - 2:26pm — pachhu2002ಛೇ....
ನಾನು ಹೀಗೆ ಮಾಡಬಾರದಿತ್ತು.....
ಆ ಪುಟ್ಟ ಮನಸ್ಸಿಗೆ ನೋವು ನೀಡಬಾರದಿತ್ತು....
ನಾನು ಅವಳನ್ನು ನೋಯಿಸಿಬಿಟ್ಟೆ ಕಣೋ !!!!
ಅವಳ ಆ ಕಣ್ಣುಗಳಿಂದ ಕಣ್ಣೀರಿಳಿಸಿಬಿಟ್ಟೆ....
ದೇವರು ನನ್ನನ್ನು ಯಾವತ್ತೂ ಕ್ಷಮಿಸುವುದಿಲ್ಲ....
ಅಲ್ಲ ಅಲ್ಲ ತಪ್ಪು....
ಈ ಪ್ರಶ್ನೆ ಬರುವುದೇ ಇಲ್ಲ ಅಲ್ವೇನೋ ???
ನಾನು ಈ ರೀತಿ ಮಾಡಿದ್ದು ಅವನ ಸಹಾಯದಿಂದನೇ ಅಲ್ವಾ ? ಮುಂದೆ ಓದಿ »

- Login or register to post comments
- 67 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ನಿಮ್ಮಲ್ಲಿ ನಲ್ಮೆಯ ವಿನಂತಿ...
November 7, 2008 - 9:54am — pachhu2002ನಾವು ನಮ್ಮ ಕಳೆದುಹೋದ ದಿನಗಳತ್ತ ತಿರುಗಿ ನೋಡಿದರೆ ಎಂದಾದರೂ ಒಮ್ಮೆ ನಿಮಗೆ ನಿಮ್ಮ ಮನೆಯ ವಿಳಾಸಕ್ಕೆ ಒಂದು ಪತ್ರ ಅಥವಾ ಕರಪತ್ರ ಬಂದಿರಬಹುದು... "ಜೈ ಸಂತೋಷೀ ಮಾ" ...... ಹೀಗೆ ಆರಂಭವಾಗುವ ಪತ್ರ "ಇದನ್ನು ____ ಜನರಿಗೆ ಕಳುಹಿಸಿದರೆ ಒಳ್ಳೆಯದಾಗುತ್ತದೆ, ಇಲ್ಲವಾದಲ್ಲಿ ಕೆಡುಕಾಗುತ್ತದೆ" ಇಲ್ಲಿಯವರೆಗೆ ಇರುತ್ತಿತ್ತು. ಮುಂದೆ ಓದಿ »

ಪಯಣ
November 3, 2008 - 9:17am — pachhu2002ಸ್ವಲ್ಪ ದಿನಗಳ ಹಿಂದೆ ಕೆಲಸದಮೇಲೆ ನಾನು ಉತ್ತರ ಕರ್ನಾಟಕದ ಹೊಸಪೇಟೆಗೆ ಹೋಗಬೇಕಾಯಿತು. ಒಂದು ಹೊಸಾ ತಂತ್ರಾಂಶವನ್ನ ಅಲ್ಲಿಯ ಕಂಪನಿಯಲ್ಲಿ ಅಳವಡಿಸಿಕೊಡಬೇಕಾಗಿತ್ತು. ನಾನು ನಮ್ಮ ಕಾರ್ಯಾಲಯದಲ್ಲಿ ಅದನ್ನು ಒಮ್ಮೆ ಪರೀಕ್ಷಿಸಿದ್ದರೂ ಆ ವಾತಾವರಣಕ್ಕೆ, ಆ ಕಂಪನಿಯವರ ಬೇಡಿಕೆಗೆ ಈ ತಂತ್ರಾಂಶ ಹೊಂದಿಕೆಯಾಗುತ್ತದೋ ಇಲ್ಲವೋ ಅನ್ನುವ ಅನುಮಾನ... ಮುಂದೆ ಓದಿ »


RSS: