Nagendra.trasi (ಲೇಖನಗಳು)
ವಂಡಾರು ಕಂಬಳ ಮತ್ತು ನರಬಲಿ...
September 3, 2008 - 1:55pm — Nagendra.trasiನಮ್ಮ ಊರಿನ ಹಿರಿಯರು ಆಗಾಗ ಗಾದೆ ಮಾತೊಂದನ್ನು ಹೇಳುತ್ತಿರುತ್ತಾರೆ, ಅದೇನೆಂದರೆ 'ಹಿಂದಿನ ಕಾಲವಲ್ಲ - ವಂಡಾರು ಕಂಬಳವಲ್ಲ' ಅಂತ. ಈಗಿನ ಕೆಟ್ಟು ಹೋದ ಪರಿಸ್ಥಿತಿಗೆ ರೋಸಿಹೋದ ಹಿರಿಯ ತಲೆಗಳು ಆಗಾಗ ಈ ಗಾದೆಯನ್ನು ಹೇಳುತ್ತಿರುತ್ತಾರೆ. ಆದರೆ ಆ ಗಾದೆ ಹಿಂದೆ ಒಂದು ಇಂಟರೆಸ್ಟಿಂಗ್ ಕಥೆ ಇದೆ. ಮುಂದೆ ಓದಿ »

ಚಂದಮಾಮನಿಗೆ ಅರವತ್ತು......
May 9, 2008 - 3:11pm — Nagendra.trasiಬಹುತೇಕ ಮಂದಿ ಚಂದಮಾಮದಲ್ಲಿನ ವಿಕ್ರಮ ಮತ್ತು ಬೇತಾಳ, ನೀತಿ ಕಥೆಗಳನ್ನು ಓದಿಯೇ ಆಡುಗೂಲಜ್ಜಿಯ ಕಥೆಯೆಡೆಗೊಂದು ಮೋಹ ಬೆಳೆಸಿಕೊಂಡಿರುವುದು. ಆ ಕಾಲಕ್ಕೆ ನಮಗೆ ಚಂದಮಾಮ, ಬಾಲಮಿತ್ರ ನಮ್ಮ ಬಾಲ್ಯದ ಸಂಗಾತಿಯಾಗಿದ್ದವು. ನಾವೆಲ್ಲ ಓದುತ್ತಾ, ಓದುತ್ತಾ ಬೆಳೆದ ಚಂದಮಾಮನಿಗೆ ಈಗ 60ರ ಸಂಭ್ರಮ.. ಅಬ್ಬಾ ಚಂದಮಾಮಕ್ಕೆ ಅರವತ್ತು ವರ್ಷಗಳು ತುಂಬಿತೆಂದರೆ, ನಮ್ಮ ಕಣ್ಣುಗಳೇ ಇಷ್ಟಗಲ ತೆರೆದುಕೊಳ್ಳುತ್ತದೆ.
ಇತ್ತೀಚೆಗಷ್ಟೇ ಮುಂಬೈಯಲ್ಲಿ ಚಂದಮಾಮದ 60ನೇ (61ವರ್ಷ) ವರ್ಷದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ, ನಾನು ಚಿಕ್ಕವನಿದ್ದಾಗ ಪಾಶ್ಚಾತ್ಯ ಕಾಮಿಕ್ಸ್‌ನೆಡೆಗೆ ಮೋಹಿತನಾಗಿದ್ದೆ. ಆದರೆ ನನ್ನ ಪೋಷಕರು ನನಗೆ ಚಂದಮಾಮದ ರುಚಿ ಹತ್ತಿಸಿದ ಮೇಲೆ ನನಗೆ ಬಾಲ್ಯದಲ್ಲಿ ಅದೇ ನನ್ನ ಸಂಗಾತಿಯಾಗಿತ್ತು. ಆದರೆ ಈಗ ನನಗೆ ಸಮಯದ ಒತ್ತಡ ಇರುವುದರಿಂದ ಓದಲಾಗುತ್ತಿಲ್ಲ, ಆದರೂ ಚಂದಮಾಮವನ್ನ ನನ್ನ ಮೊಮ್ಮಕ್ಕಳಿಗೆ ಪರಿಚಯಿಸುತ್ತೇನೆ ಎಂದು ಹೆಮ್ಮೆಯಿಂದ ಹೇಳಿದ್ದರು. ಮುಂದೆ ಓದಿ »

ಕುರಿಗಳು ಸಾರ್...ನಾವು....
March 15, 2008 - 6:37pm — Nagendra.trasiಸದನದ ಕಲಾಪದಲ್ಲಿ ಶಿಸ್ತಿನಿಂದ ವರ್ತಿಸುವುದನ್ನು ಕಲಿತುಕೊಳ್ಳಿ,ಸದನದ ಗೌರವನ್ನು ಕಾಪಾಡಿ,ನಿಮ್ಮ ಹದ್ದು ಮೀರಿದ ವರ್ತನೆಯಿಂದಾಗಿ ಸದನದ ಮರ್ಯಾದೆ ಬೀದಿಗೆ ಬಂದಿದೆ. ಮುಂದೆ ಓದಿ »








RSS: