ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

anivaasi (ಲೇಖನಗಳು)

ನೆರಳು

June 15, 2007 - 10:37am — anivaasi

ನನ್ನ ಬಳುಕದ ಮನಸ್ಸಿನ ಮೇಲೆ ನಿನ್ನ ನೆರಳು
ನೆರಳಲ್ಲೂ ಕೆಂಪು ಹೂ
ಗಿಡದ ಚಿಗುರು.
ನಿನ್ನ ತೊನೆಯುವ ಮೈ ಮೇಲೆ ನನ್ನ ನೆರಳು
ತೇವದಲ್ಲಿ
ಮಣ್ಣುಳ
ಜಿಗಣೆ
ಇರುವೆಗೂಡು.

  • ಕಾವ್ಯ ಮತ್ತು ಕವನ
~.~
  • ೧ ಪ್ರತಿಕ್ರಿಯೆ
  • 563 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಡೌಲು

June 14, 2007 - 5:10pm — anivaasi

ನನ್ನ ಚಂದದ ತುಟಿಗಳನ್ನು
ನೋಡಲು ನಿನಗೆ
ಡೌಲಿಗಿಂತ ನಾಚಿಕೆಯಾಗುವುದೇ
ನನಗೆ ಇಷ್ಟ.
ಆದರೆ ನಾಚಿಕೆ ಮುಚ್ಚಲು ಹೋಗಿ ನೀನು
ತುಟಿಬಿಗಿದು ಡೌಲನ್ನೇ ಮೆರೆಸುತ್ತೀಯ!

  • ಕಾವ್ಯ ಮತ್ತು ಕವನ
~.~
  • 4 ಪ್ರತಿಕ್ರಿಯೆಗಳು
  • 505 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತಾಳಬದ್ಧ

June 13, 2007 - 6:45pm — anivaasi

"ನನ್ನ ಕನಸಿನ ಪಕಳೆಯಲಿ ನೀ ನಿದ್ದೆ ಮಾಡುವ ಹುಡುಗನಂತೆ
ನಿನ್ನ ಕನಸಿನ ನೆರಿಗೆಯಲಿ ನಾ ಸುತ್ತಿ ಅಲೆಯುವ ಹುಚ್ಚಿಯಂತೆ"

ಎಷ್ಟು ತಾಳಬದ್ಧವಾದರೇನು ಬಂತು-
ನನ್ನ ಕನಸಲ್ಲಿ ನಿನ್ನ ಉಡಾಫೆ
ನಿನ್ನ ಕನಸಲ್ಲಿ ನನ್ನ ಮಗ್ನತೆ
ಗೊತ್ತಾಗದ ಮೇಲೆ!

  • ಕಾವ್ಯ ಮತ್ತು ಕವನ
~.~
  • 2 ಪ್ರತಿಕ್ರಿಯೆಗಳು
  • 519 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಂಗಾರು ಮಳೆ ನೋಡಿದ ಮೇಲೆ

June 12, 2007 - 5:00pm — anivaasi

-೧-
ಮುಂಗಾರು ಮಳೆಯನ್ನು ಯಾಕೆ ಅಷ್ಟೊಂದು ಜನ ನೋಡಿದ್ದಾರೆ ಮತ್ತು ನೋಡುತ್ತಿದ್ದಾರೆ? ಈ ಪ್ರಶ್ನೆ ನನ್ನನ್ನು ಕಾಡಿದ್ದು ಮುಂಗಾರು ಮಳೆಯನ್ನು ಮೊನ್ನೆ ಸಿಡ್ನಿಯಲ್ಲಿ ನೋಡಿದಾಗ. ಸಾಧಾರಣವಾಗಿ ಎರಡು ಶೋಗಳು ನಡೆಯುವ ಇಲ್ಲೂ ಮೂರು ಶೋಗಳಿದ್ದು ಮೂರಕ್ಕೂ ಜನ ತುಂಬಿದ್ದರು.
ಪ್ರೀತಂನ ಮಾತುಗಳಿಗೆ ಮೊದಮೊದಲು ಜನ ನಗುತ್ತಲೇ ಚಿತ್ರ ಮೊದಲುಗೊಂಡಿತು. ಪ್ರೀತಂನ ಮಾತುಕತೆ ಎಲ್ಲಾ, ಬೆಂಗಳೂರಿನ ಶ್ರೀಮಂತ ಹುಡುಗನ ಉಡಾಫೆ, ಸಲೀಸಾಗಿ ಹರಿಯುವ ಇಂಗ್ಲೀಷ್ ಮಿಶ್ರಿತ ಕನ್ನಡ, ಮನಸ್ಸಿಗೆ ಹಿಡಿದ ಹುಡುಗಿ ಬೇಕೇ ಬೇಕು ಎಂಬಂತೆ ಹಿಂಬಾಲಿಸುವ ಮನೋಧರ್ಮ, ಇದರ ಸುತ್ತಲೇ ಸುತ್ತುತ್ತ ಢಾಳಾಗಿ ನಮ್ಮ ಮುಂದೆ ನಿಲ್ಲುತ್ತದೆ. ಒಳಗೇನೂ ಇಟ್ಟುಕೊಳ್ಳದೆ ಬೇಕಾದ್ದನ್ನು ಆಡುವ, ಆಡಿದಂತೆ ನಡೆಯುವ ಹುಡುಗ. ಇವೆಲ್ಲಾ ಹೊಸದೇನಲ್ಲ. ಆದರೆ, ಹೊಸ ಬಗೆಯ ಸ್ವಾವಹೇಳನ (self-depricating) ಹಾಸ್ಯ ಕನ್ನಡ ಚಿತ್ರದ ಹೀರೋಗೆ ಹೊಸದಿರಬಹುದು. ಆ ಅಂಶ ಅಲ್ಲಲ್ಲಿ ಕನ್ನಡದ ಚಿತ್ರಗಳಲ್ಲಿ ಈ ಹಿಂದೆ ಬಂದಿದ್ದರೂ, ಇಲ್ಲಿ ಅದು ಪ್ರೀತಂನ ಸ್ವಭಾವದ ಒಂದು ದೊಡ್ಡ ಭಾಗವೇ ಆಗಿರುವುದು ಹೊಸದೇನೋ ಅನಿಸಿತು. ಆಗಾಗ ಸಂದರ್ಭದ ಹೊರಗೆ ನಿಂತು ಚಟಾಕಿ ಹಾರಿಸುವ ಕ್ಷಣಗಳು ಮುದಕೊಡುವಂಥವು. ಎಲ್ಲಕ್ಕಿಂತ ಮುಖ್ಯವಾಗಿ ಪ್ರೀತಂ ಬಳಸುವ ಬೆಂಗಳೂರಿನಂಥ ನಗರದ ಭಾಷೆಯಿಂದಾಗಿ ಅದು ಹೊಸದಾಗಿ ಕಾಣುತ್ತವೆ ಕೂಡ. ಆದರೆ ಚಿತ್ರದ ಉತ್ತರಾರ್ಧದ ಹೊತ್ತಿಗೆ ಅವನ ಮಾತು ಕತೆ ಹಾಗೇ ಮುಂದುವರೆಯುವುದು ಪಿಚ್‌ ಎನಿಸುತ್ತದೆ.  ಮುಂದೆ ಓದಿ »

  • ಸಿನೆಮಾ ವಿಮರ್ಶೆ
~.~
  • 50 ಪ್ರತಿಕ್ರಿಯೆಗಳು
  • 2468 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮದ್ದು

June 10, 2007 - 4:34am — anivaasi

ನಿನ್ನ ಕುರುಡಿಗೆ
ನನ್ನ ಸೊಂಟ, ಎದೆ, ತುಟಿ, ಕಣ್ಣು, ಹುಬ್ಬು, ಹೆರಳು
ಇವುಗಳದೇ ಸಂಭ್ರಮ

ನನ್ನ ದಿಟ್ಟ ಹೆಜ್ಜೆ ನಡುವಿನ ಅನುಮಾನ
ಮತ್ತು ಗಟ್ಟಿ ದನಿಯಾಳದ ನಡುಕ
ನಿನ್ನ ಸಂಭ್ರಮಕ್ಕೆ ಮದ್ದರೆಯುತ್ತವೆ
ಮೌನವಾಗಿ.

  • ಕಾವ್ಯ ಮತ್ತು ಕವನ
~.~
  • ೧ ಪ್ರತಿಕ್ರಿಯೆ
  • 519 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
1234ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ನೀನು ನಾನು ಜೋಡಿ
    September 8, 2008 - 12:14pm
  • ಸಂಗನಗೌಡ
    ಉ: ನೀನು ನಾನು ಜೋಡಿ
    September 8, 2008 - 11:49am
  • Nagaraj.G
    ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ
    September 8, 2008 - 11:35am
  • ಸಂಗನಗೌಡ
    ಉ: ಜೋಯೀಸರ ಮಗಳು
    September 8, 2008 - 11:22am
  • ಸಂಗನಗೌಡ
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 11:15am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 11:13am
  • ಸಂಗನಗೌಡ
    ಉ: ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
    September 8, 2008 - 11:10am
  • madhava_hs
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 10:09am
  • roshan_netla
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 10:09am
  • madhava_hs
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 10:00am
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator