ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › User account

hpn (ಬ್ಲಾಗ್ ಬರಹಗಳು)

ಮುರಳಿ

October 5, 2008 - 3:47pm — hpn

'ಟೆಕ್ ಸಂಪದ'ದ ಒಟ್ಟಾರೆ ವಿಶನ್ನಿನ ಹಿಂದಿರುವ ಮನಸ್ಸು ಹಾಗೂ ಯೋಜನೆಯ ಟೀಮ್ ಲೀಡರ್ ಸಂಪದದ ಗೆಳೆಯ ಮುರಳಿ. ನಿತ್ಯ "ಲೇ, ಬೇಗ ರೆಡಿ ಮಾಡೋ - ಇದು ಇಂಪಾರ್ಟೆಂಟು" ಅನ್ನುತ್ತ ಕೆಲಸವನ್ನು push ಮಾಡುವವ ಇವನೆ. ಟೆಕ್ ಸಂಪದಕ್ಕಾಗಿ ಕಳೆದ ಹಲವು ತಿಂಗಳುಗಳಿಂದ ಸತತ ಸಕ್ರಿಯನಾಗಿರುವವನೂ ಕೂಡ ಇವನೇ. ತಂತ್ರಜ್ಞಾನದ ಹಲವು ವಿಷಯಗಳಿಂದ ಗ್ರಾಸ್ ರೂಟ್‌ ಟಚ್ ಮಾಡುವ ನಿಜವಾದ ಕಾಳಜಿ ಉಳ್ಳವ. ಸಂಪದದ ಐದನೇ ಸದಸ್ಯ.

ನಿನ್ನೆ ಮುರಳಿ ಅವನ ಡಿ ಎಸ್ ಎಲ್ ಆರ್ ಕ್ಯಾಮೆರಾ ಹಿಡಿದು ಮನೆಗೆ ಬಂದಿದ್ದ. ಅವನ ಕ್ಯಾಮೆರಾದಲ್ಲಿಯೇ ಅವನ ಫೋಟೋ ಬಂದದ್ದು ಹೀಗೆ:

Murali H R  ಮುಂದೆ ಓದಿ »

  • ಟೆಕ್ ಸಂಪದ
  • ಮುರಳಿ
~.~
  • hpn ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 258 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಗ್ನು/ಲಿನಕ್ಸ್ ಹಬ್ಬದ ದಿನ ಅರವಿಂದ ಕನ್ನಡದಲ್ಲಿ ಬರೆದಾಗ

September 30, 2008 - 9:08pm — hpn

ಮೈಸೂರಿನಲ್ಲವತ್ತು ಗ್ನು/ಲಿನಕ್ಸ್ ಹಬ್ಬ. ಕನ್ನಡದಲ್ಲಿ passionate ಆಗಿ ಬರೆಯಬೇಕೆಂದರೆ ಅರವಿಂದನಿಗಿಂತ ಉತ್ತಮ ಬೇರೆ ಯಾರೂ ಇರಲಿಕ್ಕಿಲ್ಲ. ಕನ್ನಡ ಅಂದ ಕೂಡ್ಲೆ ಇವನಿಗೆ ಶ್ರದ್ಧೆ, ಆಸಕ್ತಿ ದುಪ್ಪಟ್ಟು ಆಗುವುದು ಅಂತ ಹೇಳಿದರೂ ಉತ್ಪ್ರೇಕ್ಷೆಯಲ್ಲ! ನೀವೇ ನೋಡಿ. Smiling
ಅವನಿಗೂ ತಿಳಿಸದೆ ಈ ಚಿತ್ರಗಳ ಸಿರೀಸ್ ಇರುವ ಅನಿಮೇಶನ್ ಹಾಕುತ್ತಿದ್ದೇವೆ ಇಲ್ಲಿ. Smiling  ಮುಂದೆ ಓದಿ »

  • ಅರವಿಂದ
  • ಗ್ನು/ಲಿನಕ್ಸ್ ಹಬ್ಬ
  • ಮೈಸೂರು
~.~
  • hpn ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 208 hits
  • 1 attachment
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮತ್ತೊಂದು ಭಾನುವಾರ

September 28, 2008 - 2:12pm — hpn
ಬೆಂಗಳೂರಲ್ಲಿ ಎಂತಹ ಒಳ್ಳೇ ಹೋಟೆಲಿನಲ್ಲಿ ಚ್ಯಾಟ್ಸ್ ತಿಂದರೂ ಸ್ವಲ್ಪ ದಿನಗಳಲ್ಲೇ sore throat ಗ್ಯಾರಂಟಿ. ಈ ವಾರ ಎರಡು ಮೂರು ಬಾರಿ ಸ್ನೇಹಿತರೊಂದಿಗೆ ಚ್ಯಾಟ್ಸ್ ಪ್ರೋಗ್ರಾಮ್ ಇಟ್ಟುಕೊಂಡದ್ದರಿಂದ ವಾರಾಂತ್ಯ ಬರುವಷ್ಟರಲ್ಲೇ ನೆಗಡಿ, ಜ್ವರ ಶುರು. ಮೊನ್ನೆ ರಾತ್ರಿಯೇ ಅನಿಸಿತ್ತು... ಮುಂದೆರಡು ದಿನ ಕಷ್ಟ ಆಗಬಹುದೆಂದು.

ಎಂದೂ ಬೇಗ ಏಳದವ ಇವತ್ತು ಮುಂಜಾನೆ ಎದ್ದು ಅತ್ತ ದೆಹಲಿಯಲ್ಲಾದ ಬಾಂಬ್ ಸ್ಪೋಟದ ಬಗ್ಗೆ ವಿವಿಧ ಸುದ್ದಿ ಮಾಧ್ಯಮಗಳ ವರದಿ ಓದುತ್ತಿದ್ದೆ. ನಡುನಡುವೆ ಉಪ್ಪುನೀರು gargle ಮಾಡೋದು, pillsಉ ಟಾನಿಕ್ಕು ಪಕ್ಕದಲ್ಲಿಟ್ಟುಕೊಂಡ ಕಂಪ್ಯೂಟರಿನ ಮುಂದೆ ಕುಳಿತುಕೊಳ್ಳಲು ಬೇಸರವಾದಾಗ ಸ್ವತಃ ಧೂಳು ಹಿಡಿದುಕೊಂಡಿದ್ದ ವ್ಯಾಕ್ಯೂಮ್ ಹಿಡಿದು ಕಸ ಹೊಡೆದದ್ದು. ಹೊರಗೆ ಹೋಟೆಲಿನಲ್ಲಿ ತಿಂದದ್ದಕ್ಕೆ ಇವೆಲ್ಲದರ ನಡುವೆ ನನಗೇ ನಾನೇ ಬೈದುಕೊಂಡದ್ದು.  ಮುಂದೆ ಓದಿ »

  • ಚ್ಯಾಟ್ಸ್
  • ಫ್ಲೂ
  • ಬೆಂಗಳೂರು
~.~
  • hpn ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 229 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

“ಮಾಲಂಗಿ ಮಡುವಾಗಲಿ, ತಲಕಾಡು ಮರಳಾಗಲಿ, ಮೈಸೂರು ಅರಸರಿಗೆ ಮಕ್ಕಳಾಗದೇ ಇರಲಿ”

September 23, 2008 - 4:14pm — hpn

ಕನ್ನಡ ವಾಟರ್ ಪೋರ್ಟಲ್ಲಿನಲ್ಲಿ ಕಾವೇರಿ ಕುರಿತು ಒಂದು ಫೀಚರ್ ರೆಡಿ ಮಾಡುತ್ತ ತಲಕಾಡು ಫೋಟೋಗಳನ್ನು ನೋಡುತ್ತಿರುವಾಗ ಈ ವಿಷಯ ಮತ್ತೆ ನೆನಪಾಯಿತು. ಅಲ್ಲಿ ವಿವರಣೆಗೆಂದು ಇದ್ದ ಈ ವಿಷಯವನ್ನು ನೆನಪಿಸಿದ ಅನುವಾದದ ಸಾಲುಗಳು ಇಲ್ಲಿದೆ ನೋಡಿ:  ಮುಂದೆ ಓದಿ »

  • ಕಥೆ
  • ತಲಕಾಡು
  • ಮೈಸೂರು
  • ವಿಸ್ಮಯ
~.~
  • hpn ರವರ ಬ್ಲಾಗ್
  • 13 ಪ್ರತಿಕ್ರಿಯೆಗಳು
  • 354 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭಾನುವಾರದ ಹಬ್ಬ

September 22, 2008 - 1:19am — hpn

ಸರಿಯಾಗಿ ನಿದ್ರೆಯಿಲ್ಲದೆ, ಕಣ್ಣು ಸ್ಟ್ರೇಯ್ನ್ ಮಾಡಿಕೊಂಡು - ಇನ್ನು ಗ್ನು/ಲಿನಕ್ಸ್ ಹಬ್ಬ ಮಾಡೋದೇನೆ ಎಂದುಕೊಂಡು ಕುಳಿತಿದ್ದೆ. ಮುಂಜಾನೆ ನಾಲಕ್ಕಾಗಿತ್ತು. ಇನ್ನು ನಿದ್ರೆ ಮಾಡಲಾಗದೆಂದು LHC shutdown ಆದದ್ದರ ಬಗ್ಗೆ ಓದುತ್ತ ಕುಳಿತಿದ್ದೆ. ಒರಿಸ್ಸಾ ಪ್ರವಾಹದ ಬಗ್ಗೆ ಓದುತ್ತ ಕುಳಿತಿದ್ದೆ. ಸರಿಯಾಗಿ ಐದಕ್ಕೆ ಫೋನು ಬಂತು:
"ಎದ್ದಿದೀಯಾ ಹರಿ?"
"ಹೂಂ ಕಣೋ"
"ಸರಿ, ಈಗ ಹೊರಟೆ. ಕಾರು ತಗೊಂಡು ಇನರ್ಧ ಗಂಟೆಯಲ್ಲಿ ಅಲ್ಲಿರ್ತೀನಿ"

ಸರಿ, ರೆಡಿಯಾಗಿ ಬ್ಯಾನರ್ ಕೆಳಗಿಳಿಸಿ ಲ್ಯಾಪ್ಟಾಪ್ ಪ್ಯಾಕ್ ಮಾಡಿ ಹೊರಟೆ. ಕಾರಿನ ಸ್ಪೀಡು, ಡೆಕ್ ನ ವೂಫರ್ ಸದ್ದು ನಿದ್ರೆಯಿಲ್ಲದ ಮನಸ್ಸಿಗೆ ಸವಾಲೆಸೆದಿತ್ತು. ಈ ನಡುವೆ ಮುಂಜಾನೆಯ ಮಂಜಿನಲ್ಲಿ ರೋಡು ಮಿಸ್ ಆಗಿ ಕಳಕೊಂಡ ಕೆಲವು ಘಳಿಗೆಗಳು. ಅಂಕುಡೊಂಕಿನ ಮೈಸೂರು ರಸ್ತೆಯಲ್ಲಿ ರಾಮನಗರದ ಲೋಕರುಚಿ ತಲುಪುವಷ್ಟರಲ್ಲಿ ಎಂಟಾಗಿತ್ತು. ಸುತ್ತ ಹುಸಿ ಜನಪದ ಓಡಾಡಿಕೊಂಡಿದ್ದ ಹೋಟೆಲಿನಲ್ಲಿ ಕಡುಬು, ರಾಗಿ ರೊಟ್ಟಿ (ಅಷ್ಟೊತ್ತಿಗೇ) ನಮ್ಮ ತಿಂಡಿ. ಅತ್ತಿತ್ತ ಕಂಡ ಮೈಸೂರು-ಬೆಂಗಳೂರು ಹುಡುಗಿಯರ ಮುಖಗಳು ನಮ್ಮ ದಂಡಯಾತ್ರೆಯ ಸಿಪಾಯಿಗಳ ಕಣ್ಣುಗಳನ್ನು busy ಇಟ್ಟಿತ್ತು.

ಫ್ಯೂಶನ್, ಭಾವಗೀತೆ, ಹಿಂದಿ ಸಿನೆಮಾ ಹಾಡು, ಮೆಟಲ್, ರಾಕ್ - ಹೀಗೆ ಎಲ್ಲ ಹಾಡುಗಳ ಕಲಸುಮೇಲೋಗರದೊಡನೆ ಮೈಸೂರು ವಿ.ವಿ. ತಲುಪಿದ್ದು ಸರಿಯಾಗಿ ೧೦ಕ್ಕೆ. ಆಡಿಟೋರಿಯಮ್ ಆಗಲೇ ಭರ್ತಿಯಾಗಿತ್ತು!
ಹಲವರು ನಿಂತುಕೊಂಡು ಕೇಳುತ್ತಿದ್ದದ್ದು ಕಾಣಿಸಿತು.

ಗ್ನು/ಲಿನಕ್ಸ್ ಟಿ-ಶರ್ಟ್ ಹಾಕಿಕೊಂಡು ಒಂದೆರಡು ಕೆಲಸಗಳನ್ನು ಕೈಗೆತ್ತಿಕೊಂಡು ಮೈಸೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ (Physics) ಡಿಪಾರ್ಟ್ಮೆಂಟ್ ಲ್ಯಾಬಿಗೆ ಹೋದಾಗ ಅಲ್ಲಿರುವ ಹಲವು ಸಿಸ್ಟಮುಗಳಲ್ಲಿ ಗ್ನು/ಲಿನಕ್ಸ್ ಇದ್ದದ್ದು, ಜೊತೆಗೆ ಕನ್ನಡಕ್ಕೆ ಬೇಕಾದ ಸಕಲ ತಂತ್ರಾಂಶಗಳೂ ಅದರಲ್ಲಿದ್ದದ್ದು ನೋಡಿ ಖುಷಿಯಾಯ್ತು.

ಅತ್ತ ಗ್ನು/ಲಿನಕ್ಸ್ ಪರಿಚಯ ಜೋರಾಗಿ ನಡೆದಿತ್ತು. ದಣಿವಾಗಿದ್ದ ಕಾರಣ ಸ್ಟೇಜು ಬಿಟ್ಟು ಸ್ವಲ್ಪ ದೂರ ಉಳಿದೆ. ಒಂದೆರಡು ಬಾರಿ ಮಾತ್ರ ಇಂಗ್ಲಿಷ್ ಬಳಕೆ ಜೋರಾದಾಗ "ಸಂಪೂರ್ಣ ಇಂಗ್ಲೀಷ್ ಬೇಡ, ಕನ್ನಡ ಹೆಚ್ಚಾಗಿ ಇರಲಿ" ಎಂದು ಹೇಳಿ ಬಂದೆ. ಮೈಸೂರಿಗರಲ್ಲಿ ಸ್ವಚ್ಛ ಭಾರತೀಯ ಇಂಗ್ಲೀಷಿಗಿರುವ ಒಲವು ಅಚ್ಚರಿ ಮೂಡಿಸಿತು. ಈ ಬಾರಿ ಮೈಸೂರಿನ ತಂಡದವರ ಬಯಕೆಯಂತೆ ಗ್ನು/ಲಿನಕ್ಸ್ ಹಬ್ಬದ ನಕ್ಷೆ ಸ್ವಲ್ಪ ಬದಲಾಗಿತ್ತು. ಮೊದಲರ್ಧ ದಿನ ಗ್ನು/ಲಿನಕ್ಸಿನಲ್ಲಿರುವ ದಿನನಿತ್ಯದ ಬಳಕೆಯ ತಂತ್ರಾಂಶಗಳನ್ನು ಬಳಸುವುದು ಹೇಗೆ ಎಂಬುದರ ದೃಶ್ಯಾವಳಿ, ಮಾತುಕತೆ. ಉಳಿದರ್ಧ ದಿನ ಗ್ನು/ಲಿನಕ್ಸ್ installationಉ - ಗ್ನು/ಲಿನಕ್ಸ್ ಹಾಕಿಕೊಂಡು ಪ್ರಯತ್ನಿಸುವಲ್ಲಿ ಸಹಾಯ ಮಾಡುವ ಸಮಯ.

ನೂರಾರು ಜನ ಭಾಗವಹಿಸಿ ಗ್ನು/ಲಿನಕ್ಸ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ತೋರಿದ್ದು ಖುಷಿ ತಂದಿತು. ಕನ್ನಡದ ಸುತ್ತ ಕೆಲಸ ಮಾಡುತ್ತಿರುವ ಕೆಲವು ಹಿರಿಯರ ಪರಿಚಯ ಮುಖತಃ ಆದದ್ದು ಮತ್ತಷ್ಟು ಖುಷಿ ಕೊಟ್ಟಿತು.
ಪರಿಸರದ ಸುತ್ತ ಕಾಳಜಿವಹಿಸಿ ಕೆಲವು ಚಿಕ್ಕಪುಟ್ಟ ಸಂಶೋಧನೆಗಳನ್ನು ಮಾಡುತ್ತಿರುವ ಹಿರಿಯರೊಬ್ಬರು ಸ್ವತಃ ಮಾತನಾಡಿಸಲೆಂದು ಬಂದು ತಾವು ಮಾಡುತ್ತಿರುವ ಕೆಲಸದ ಬಗ್ಗೆ ತಿಳಿಸಿದರು. ಆಸಕ್ತಿ ಹುಟ್ಟಿಸಿತು.
ಬಂದವರಲ್ಲೊಬ್ಬರು ನನ್ನ ಮುಖ ಗುರುತಿಸಿ ನೀನು ಮೈಸೂರಿನಲ್ಲಿ ನಮ್ಮ ಸ್ಕೂಲಿನಲ್ಲೇ ಓದ್ತಾ ಇದ್ದಿ, ನಮ್ಮ ಜೂನಿಯರ್. ನಾವೆಲ್ಲ ಒಟ್ಟಿಗೇ ಕ್ರಿಕೆಟ್ ಆಡ್ತಾ ಇದ್ವಿ, ನೆನಪಿದೆಯಾ ಎಂದು ಕೇಳಿದ್ದು ನೆನಪಿನ ಪುಟಗಳನ್ನು ಮತ್ತೊಮ್ಮೆ ತಿರುವಿ ಹಾಕುವಂತೆ ಮಾಡಿತು. ನೆನಪು ಮಾತ್ರ ಆಗಲಿಲ್ಲ!  ಮುಂದೆ ಓದಿ »

  • ಗಣಪತಿ ಹಬ್ಬ
  • ಗ್ನು/ಲಿನಕ್ಸ್ ಹಬ್ಬ
  • ಪಾಶ್ಚಾತ್ಯರು
  • ಮೈಸೂರು
~.~
  • hpn ರವರ ಬ್ಲಾಗ್
  • 15 ಪ್ರತಿಕ್ರಿಯೆಗಳು
  • 340 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
  • makrumanju
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 12, 2008 - 10:57am
  • makrumanju
    ಉ: ಮರಳಿ ಬರಲಿ ಬಾಲ್ಯ
    October 12, 2008 - 10:42am
  • ಪ್ರವೀಣ್
    ಉ: ಕನ್ನಡದ ಯುವ ಗಾನ ಕೋಗಿಲೆ, ಭಾರತದ ಭರವಸೆಯ ಗಾಯಕಿ 'ರಿತೀಶಾ'
    October 12, 2008 - 9:54am
ಇನ್ನಷ್ಟು


ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator