sindhu (ಲೇಖನಗಳು)
ನಲ್ಮೆಯ ನಮನ
April 13, 2007 - 10:23pm — sindhuಸುಂದರ ಪಾರ್ಕು, ಸುತ್ತೆಲ್ಲ ಮರಗಳು
ಚೈತ್ರದ ಹೂಗಳು ವೈಶಾಖದ ಬಿಸಿಲಲ್ಲೂ ನಗುತ್ತಿದ್ದರೆ ಅದು ಬೆಂಗಳೂರಿನ ಮರಗಳ ವೈಭವ ಅಂತ ನೀವೆ ಅವತ್ಯಾವತ್ತೋ ಹೇಳಿದ್ರಿ. ಆ ಸುಮವೈಭವ ನೋಡುತ್ತ, ಉದ್ಯಾನದ ಕಲ್ಲು ಮೆಟ್ಟಿಲೇರಿದೆ. ಮುಂದೆ ಓದಿ »

- Login or register to post comments
- 564 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಜಯಂತ ಕಾಯ್ಕಿಣಿಯವರ ಹೊಸ ಕತೆ - ನೀರು
March 29, 2007 - 10:59pm — sindhu- ನಿದ್ದೆ ಎಚ್ಚರ ನೀರು ಬೆಳಕು ಪಯಣ ಭಯ ದಣಿವುಗಳ ಮಾದಕ ಮಿಶ್ರಣದಂತಿರುವ ಒದ್ದೆ ಇರುಳಲ್ಲಿ ಒಂದು ಸ್ವಪ್ನದಲ್ಲಿ ನಡೆದಂತೆ ನಡೆದರು. ಅದಾಗಲೇ ಅವರ ನಡುವೆ ಎಷ್ಟೋ ವರುಷಗಳಿಂದ ಜತೆಗಿದ್ದಂತಿದ್ದ ಸಲುಗೆಯ ದಣಿವು ಇತ್ತು.
- "ಕಾಳಜಿ ಮಾಡಬೇಡಿ ಸಾಬ್, ಬೇಗ ಬಲುಬೇಗ ಗುಣವಾಗ್ತೀರಿ, ನಿಮ್ಮ ಮೊಮ್ಮಗಳ ಮದುವೆ ಖಂಡಿತ ನೋಡ್ತೀರಿ. ನನ್ನ ಈ ರಾತ್ರಿಯ ದುವಾ ಇದೆ ನಿಮಗೆ"
- ಲಕ್ಷಾಂತರ ಮನೆಗಳನ್ನು ನಡುನೀರಿನಲ್ಲಿ ಬಿಟ್ಟು ಲಕ್ಷಾಂತರ ಜನರನ್ನು ಅಂಚಿಗೆ ತಳ್ಳಿದ ಈ ಜಲಪ್ರಳಯದ ಅನಂತರದ ಈ ಸುದೀರ್ಘ ನೀರವದ ಬೀದಿಯಲ್ಲಿ, ಇರುಳಿನ ಕೊನೆಗಳಿಗೆಯಲ್ಲಿ, ಆರಾಧ್ಯ ಜೀವದ ಲೇಸಿಗೆಂದು ಹೃದಯ ತುಂಬಿ ತಂದ ಪುಟ್ಟ ಬಿಂದಿಗೆಯೊಂದು ಚಲಿಸಿ ಹೋದ ರೀತಿಯನ್ನು ಸುಮ್ಮನೆ ನೋಡಿದ ಸಂತೋಷನ್ ಗೆ ದೇವರನ್ನೇ ಕಂಡಂತಾಯಿತು..
ಮೇಲಿನ ಈ ಮೂರೂ ಪಂಕ್ತಿಗಳು ನನ್ನ ಪ್ರೀತಿಯ ಕತೆಗಾರ ಜಯಂತ್ ಕಾಯ್ಕಿಣಿಯವರ ಇತ್ತೀಚಿನ ಪ್ರಕಟಿತ ಕತೆ - ನೀರು - ಇಂದ ಆಯ್ದದ್ದು. ತರಂಗದ ಈ ಬಾರಿಯ ಯುಗಾದಿ ವಿಶೇಷಾಂಕದಲ್ಲಿ ಪ್ರಕಟವಾಗಿದೆ.
ಜಯಂತ್ ನನ್ನ ಪ್ರೀತಿಯ ಬರಹಗಾರರು. ಒಬ್ಬ ಲೇಖಕರಾಗಿ ಮತ್ತು ವ್ಯಕ್ತಿಯಾಗಿ ನಾನು ಅವರನ್ನು ತುಂಬ ಇಷ್ಟಪಡುತ್ತೇನೆ. ಅವರ ಸಹವಾಸವೇ, ಮಾತುಕತೆಯೇ ಒಂದು ಆಹ್ಲಾದ.. ಕಡಲ ದಂಡೆಯ ಸಂಜೆ ಗಾಳಿಯಂತೆ... ಅವರ ಬರಹಗಳು ಮಬ್ಬು ಕವಿದ ಮನಸ್ಸಿನಲ್ಲಿ ಮಿನುಗುವ ಪುಟ್ಟ ದೀಪಗಳಾಗಿ ಚಿಂತನೆಯ ಬೆಳಕು ಹಚ್ಚುತ್ತವೆ. ಇಲ್ಲ ಅವರೇನು ಉಪದೇಶ ಮಾಡುವುದಿಲ್ಲ, ದಾರಿದೀಪವೂ ಅಲ್ಲ - ಕತ್ತಲ ಹಾದಿಯುದ್ದದ ಮನೆಗಳ ದೀಪದ ಕೋಲಿನಂತೆ ಅವರ ಬರಹ/ಕತೆ/ಕವನಗಳು. ಅದು ಕಣ್ಣು ಕುಕ್ಕುವ ಪ್ರಖರ ಬೆಳಕಲ್ಲ, ಇದೇ ದಾರಿಯಲ್ಲಿ ಹೋಗಿ ಎಂದು ಹೇಳುವ ಕೈಮರವಲ್ಲ.. ನಿಮ್ಮ ದಾರಿಯ ನೀವೇ ಹುಡುಕಿಕೊಳ್ಳಲು ಸುಲಭವಾಗುವಂತೆ, ನಿಮಗೇ ಉದ್ದೇಶಿಸದಂತೆ, ಆದರೆ ನಿಮಗಾಗೇ ಕಾದಿರುವಂತೆ ಬೆಳಗಿರುವ ಬೆಳಕಿನ ಕೋಲುಗಳು. ಓದತೊಡಗಿದಂತೆ ಆಪ್ತವಾಗಿ ತೆರೆದುಕೊಳ್ಳುವ ಕಥಾಲೋಕದೊಂದಿಗೆ ನಿಮ್ಮೊಳಹೊಕ್ಕು, ನಿಮ್ಮ ನಡೆ ನುಡಿ ಆಲೋಚನೆಗಳಲ್ಲಿ ನಿಮ್ಮವೇ ಆಗಿ ಹೊರಹೊಮ್ಮುವ ಭಾವ ದೀಪಗಳು. ಮುಂದೆ ಓದಿ »

- Login or register to post comments
- 579 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: