ಡಾ.ಬಿ.ಆರ್.ಸತ್ಯನಾರಾಯಣ

ಗೋಪಿನಾಥ ರಾವ್ ಅವರ ’ಸಾರ್ವಭೌಮ’ದ ಕೆಲವು ಕಥೆಗಳು: ಸ್ವಗತ

ಇತ್ತೀಚಿಗೆ ಗೋಪಿನಾಥ ರಾವ್ ಅವರ ಬೇಟಿಯಾಗಿತ್ತು. ಅವರ ಒಂದೆರಡು ಕಥೆಗಳನ್ನು ಹಿಂದೆ ಓದಿದ್ದೆ. ಅದ್ಭುತವಾದ ಕಥೆಗಾರಿಕೆ ಅವರಲ್ಲಿದೆ ಎಂದು ಅರ್ಥಮಾಡಿಕೊಂಡಿದ್ದೆ. ಅವರ ಚೊಚ್ಚಲ ಕಥಾ ಸಂಕಲನ ಸಆರ್ವಭೌಮ ದೂರದ ದುಬೈನಲ್ಲಿ ಬಿಡುಗಡೆಯಾಗಿತ್ತು. ಮೊನ್ನೆ ಅವರು ಬಂದಾಗ ಕಥಾಸಂಕಲನವನ್ನು ಕೊಟ್ಟರು. ಅವರನ್ನು ಬೀಳ್ಕೊಟ್ಟ ತಕ್ಷಣ ನಾನು ಕೆಲವು ಕಥೆಗಳ ಮೇಲೆ ಕಣ್ಣಾಡಿಸಿದೆ. ಅದರ ಹಲವಾರು ಕಥೆಗಳು ಒಂದೇ ಬಾರಿಗೆ ನನ್ನಿಂದ ಓದಿಸಿಕೊಂಡವು. ಒಂದೇ ಒಂದು ಪದ ಆಚೀಚೆಯಾಗದಂತೆ ಬರೆಯುವ ಅವರ ಕಲೆಗಾರಿಕೆ ನನಗೆ ಇಷ್ಟವಾಯಿತು. ಒಂದು ಕಥೆಯಾದ ಮೇಲೆ ಅದರ ಬಗ್ಗೆ ನನಗನ್ನಿಸಿದ್ದನ್ನು ಆಗಲೇ ಟೈಪಿಸಿಬಿಡುತ್ತಿದ್ದೆ. ಅಂತಹ ಅನಿಸಿಕೆಗಳನ್ನು ಇಂದು ನಿಮ್ಮೊಂದಿಗೆ ಹಂಚಿಕೊಳ್ಳಬಯಸಿದ್ದೇನೆ. ಆ ಸಂಕಲನದ ಇನ್ನುಳಿದ ಕಥೆಗಳನ್ನು ಓದಿದ ನಂತರ ಮತ್ತೆ ಬರೆಯುತ್ತೇನೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

T-10 : ತೇಜಸ್ವಿ ಟೆನ್

ಎಂತಹಾ ಗಂಭೀರವಾದ ವಿಷಯವನ್ನು ಹೇಳುವಾಗಲೂ ಬರೆಯುವಾಗಲೂ ವಿಶೇಷವಾದ ಪಂಚಿಂಗ್ ಲೈನುಗಳನ್ನು ಸೇರಿಸಿ ನಗಿಸುವ ಶೈಲಿ ತೇಜಸ್ವಿಯವರದ್ದಾಗಿತ್ತು. ಅಂತಹ ತೇಜಸ್ವಿ ಸ್ವಲ್ಪ ಲಘುಬರಹ ಅಥವಾ ಹರಟೆಯನ್ನು ಬರೆಯುವಾಗ ಹೇಗೆ ನಗೆ ಬುಗ್ಗೆ ಚಿಮ್ಮಿಸುತ್ತಾರೆ ಎಂಬ ಕುತೂಹಲ ನಿಮಗಿದ್ದರೆ, ಅವರ ‘ಪಾಕಕ್ರಾಂತಿ’ ಓದಬೇಕು. ಆ ನೀಳ್ಗತೆಯ ಹತ್ತು ಪಂಚಿಂಗ್ ಲೈನುಗಳನ್ನು ತೇಜಸ್ವಿ ಟೆನ್ (T-10)ಎಂದು ಇಲ್ಲಿ ಸಂಗ್ರಹಿಸಿದ್ದೇನೆ. ನಕ್ಕು ನಗಿಸುತ್ತಾ ತೇಜಸ್ವಿಯವರನ್ನು ಸ್ಮರಿಸೋಣ. ತೇಜಸ್ವಿ ನಮ್ಮನ್ನಗಲಿ ಇಂದಿಗೆ (ಮೇ ೫) ಮೂರು ವರ್ಷಗಳೇ ಕಳೆದುಹೋದವು. ಆದರೂ ನಮ್ಮ ಬದುಕಿನಲ್ಲಿ, ನಮ್ಮ ಯೋಚನಾ ಕ್ರಮದಲ್ಲಿ ಅವರ ಚಿಂತನೆ ಆದರ್ಶಗಳು ಸದಾ ಜೀವಂತ. ಈ ನಡುಡವೆ ಕುಪ್ಪಳಲ್ಳಿಯಲ್ಲಿ ೪ ಮತ್ತು ೫ ನೇ ತಾರೀಖಿನಂದು ಎರಡುದಿನದ ತೇಜಸ್ವಿ ಹಬ್ಬ ನೆರವೇರಲಿದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಶಬ್ದಗಾರುಡಿಗ ಬೇಂದ್ರೆಯವರ ಮೂರು-ಮೂರೇ ಸಾಲುಗಳು

ಬದುಕಿನಲ್ಲಿ ಬೆಂದರೆ ಬೇಂದ್ರೆಯಾಗುತ್ತಾನಂತೆ! ಹಾಗೆ ಬದುಕಿನುದ್ದಕ್ಕೂ ಬೇಯುತ್ತಲೇ ಇದ್ದ ಬೇಂದ್ರೆಯವರನ್ನು ವಿಶೇಷ ಕವಿಯಾಗಿ ಕನ್ನಡ ಎಂ.ಎ. ಮಾಡುವಾಗ ಓದಬೇಕಾಯಿತು. ಆಗಿನ ನನ್ನ ದರದೃಷ್ಟವೆಂದರೆ ಬೇಂದ್ರೆಯವರ ಯಾವುದೇ ಸಾಹಿತ್ಯಕೃತಿ ಮರುಮುದ್ರಣವಾಗಿರಲಿಲ್ಲ. ಹಳೆಯ ಪ್ರತಿಗಳು ಸಿಗುತ್ತಿರಲಿಲ್ಲ. ಆದ್ದರಿಂದ ವಿಧಿಯಿಲ್ಲದೆ, ವಿ.ವಿ.ಯವರು ಪೂರೈಕೆ ಮಾಡಿದ್ದ ಪಾಠಗಳಲ್ಲಷ್ಟೇ ಬೇಂದ್ರೆಯವರನ್ನು ಓದಬೇಕಾಯಿತು. ಹಾಗಾಗಿದ್ದು ಒಂದು ರೀತಿಯಲ್ಲಿ ಒಳ್ಳೆಯದೇ ಆಯಿತೇನೋ! ಏಕೆಂದರೆ ಬೇಂದ್ರೆಯವರ ಸಾಹಿತ್ಯವನ್ನು ಮೂಲದಲ್ಲೇ ಓದಬೇಕು ಎಂಬ ‘ಹೆಬ್ಬಯಕೆ’ ನನ್ನಲ್ಲಿ ಆಗಿನಿಂದಲೂ ಮೂಡಿಬಿಟ್ಟಿತು. ಅವರ ಸಮಗ್ರ ಕಾವ್ಯವನ್ನು ಸೇರಿಸಿ ‘ಔದುಂಬರ ಗಾಥೆ’ ಎಂಬ ಹೆಸರಿನಲ್ಲಿ ಆರು ಸಂಪುಟಗಳು ಪ್ರಕಟವಾದಾಗ ನನ್ನ ಆಸೆ ಈಡೇರುವ ಕಾಲ ಬಂದಿತೆಂದು ಸಂತೋಷವಾಯಿತು. ಹೀಗೆ ನಮ್ಮ ಗ್ರಂಥಾಲಯಕ್ಕೆ ಬಂದ ಆರು ಸಂಪುಟಗಳನ್ನು ನನ್ನ ಸುಪರ್ದಿನಲ್ಲಿಯೇ ಇಟ್ಟುಕೊಂಡು ಸಮಯ ಸಿಕ್ಕಾಗಲೆಲ್ಲಾ ಓದುತ್ತಿದ್ದೆ. ಮೊನ್ನೆ ಬಿ.ಎ. ಹುಡುಗರಿಗೆ ಬೇಂದ್ರೆಯವರ ಬಗ್ಗೆ ಅಸೈನ್‌ಮೆಂಟ್ ಕೊಟ್ಟಿದ್ದರೆಂದು ಕಾಣುತ್ತದೆ. ಇದ್ದಕ್ಕಿದ್ದಂತೆ ಆ ಪುಸ್ತಕಗಳಿಗೆ ಬೇಡಿಕೆ ಹೆಚ್ಚಾಯಿತು. ಅವರೆಲ್ಲಾ ಬರೆದುಕೊಂವೋ ಕ್ಸೆರಾಕ್ಸ್ ಮಾಡಿಸಿಕೊಂಡೋ ಹೋದ ನಂತರ ಆರು ಸಂಪುಟಗಳೂ ನನ್ನ ಟೇಬಲ್ಲಿನ ಮೇಲೆ ಬಿದ್ದಿದ್ದವು. ನಾನು ಅವುಗಳ ಮೇಲೆ ನೆನ್ನೆಯಿಂದ ಕಣ್ಣಾಡಿಸುತ್ತಲೇ ಇದ್ದೆ. ಆಗ ಈ ಮೂರು ಮೂರು ಸಾಲಿನ ಪುಟ್ಟ ಪುಟ್ಟ ಪದ್ಯಗಳು ನನ್ನ ಗಮನ ಸೆಳೆದವು. ಅವುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಎನ್ನಿಸಿ ಇಲ್ಲಿ ಬ್ಲಾಗಿಗೇರಿಸಿದ್ದೇನೆ. ಓದಿ ಬೇಂದ್ರೆಯವರ ಕಾವ್ಯಾಮೃತದ ಕೆಲವು ಹನಿಗಳನ್ನು. ಇದು ಅವರ ಹೆಚ್ಚಿನ ಸಾಹಿತ್ಯವನ್ನು ಓದುವಂತೆ ನಿಮ್ಮಲ್ಲಿ ಪ್ರೇರೇಪಿಸಿದರೆ ನಾನು ಧನ್ಯ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

‘ತ್ರಿಪದಿ’ಯಲ್ಲಿ ತ್ರಿವಿಧ

ತ್ರಿಪದಿ ಎಂಬುದು ಹೆಸರೇ ಸೂಚಿಸುವಂತೆ ಮೂರು ಪಾದಗಳುಳ್ಳ ಪದ್ಯ. ಇದನ್ನು ತಿಪದಿ, ತಿವದಿ, ತ್ರಿವುಡೆ, ತ್ರಿಪದಿಕಾ ಮುಂತಾದ ಹೆಸರುಗಳಿಂದ ಕರೆಯಲಾಗಿದೆ. ಬೇಂದ್ರೆಯವರು ತ್ರಿಪದಿಯೇ ಕನ್ನಡ ವೃತ್ತಗಳ ಗಾಯತ್ರಿ ಎಂದಿದ್ದಾರೆ. ಇವುಗಳು ಅಚ್ಚಗನ್ನಡದ ಮಟ್ಟುಗಳು. ಜಾನಪದ ಸಾಹಿತ್ಯದಲ್ಲಿ ಇವುಗಳ ವಿರಾಟ್‌ಸ್ವರೂಪವನ್ನು ಕಂಡಾಗ ಇವುಗಳ ಇತಿಹಾಸವನ್ನು ನಿಖರವಾಗಿ ಗುರುತಿಸುವುದು ಕಷ್ಟವೆನ್ನಿಸುತ್ತದೆ. ಶಾಸನಗಳಲ್ಲಿ ಆಲ್ಲಲ್ಲಿ ಕಾಣಿಸಿಕೊಳ್ಳುತ್ತಾ, ಪಂಪ ಪೊನ್ನರ ಕೃತಿಗಳಲ್ಲಿ ಇಣುಕಿ, ಮುಂದಿನ ಕವಿಕೃತಿಗಳಲ್ಲಿ ಕಾಣಿಸಿಕೊಂಡು ಸರ್ವಜ್ಞನ ಕಾಲಕ್ಕೆ ಬೃಹತ್ತಾಗಿ ಬೆಳೆದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಂಡಿವೆ. ಕನ್ನಡ ಜಾನಪದ ಸಾಹಿತ್ಯಪ್ರಕಾರಗಳಲ್ಲಿ ತ್ರಿಪದಿಗಳದೇ ಸಿಂಹಪಾಲು.
ತ್ರಿಪದಿಗಳ ಲಕ್ಷಣಗಳನ್ನು ಈ ರೀತಿ ಸರಳೀಕರಿಸಬಹುದು.-  • ಮೂರು ಪಾದಗಳು. 

  • ಹನ್ನೊಂದು ಗಣಗಳು. 

  • 6 ಮತ್ತು 10ನೇ ಗಣಗಳು ಬ್ರಹ್ಮಗಣಗಳು; ಉಳಿದವು ವಿಷ್ಣುಗಣಗಳು.  
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.4 (7 votes)
To prevent automated spam submissions leave this field empty.

ಸರಸ್ವತೀ ಮಣಿಹಾರನಾದ ಪಂಪ ಮಹಾಕವಿ

ಪಂಪ ಕನ್ನಡದ ಆದಿಕವಿ. ‘ಆದಿಪುರಾಣ’ ಮತ್ತು ‘ಪಂಪಭಾರತ’ ಆತನ ಕೃತಿಗಳು. ಅವನೇ ಹೇಳಿರುವಂತೆ, ಭಾರತವೂ ‘ಆದಿಪುರಾಣ’ವೂ ಸಮಸ್ತ ಕ್ಷಿತಿಗೆ ಅಲಂಕಾರದಂತಿವೆ. ಸರಸ್ವತಿಗೆ ಅವು ಹೊಸ ವಿಲಸವನ್ನುಂಟುಮಾಡಿವೆ. ಸರಸ್ವತಿಗೇ ಹೊಸ ವಿಲಾಸವನ್ನುಂಟುಮಾಡಿದ ಪಂಪನ ವಾಗ್ವಿಳಾಸ ಸರಸ್ವತಿಯ ವಿಷಯದಲ್ಲಿಯೂ ಉದಾರವಾಗಿಯೇ ಇದೆ. ‘ಆದಿಪುರಾಣ’ ಕೃತಿರಚನೆಯ ಶಿಸ್ತಿನಲ್ಲೇ ಸರಸ್ವತಿಯು ನೆಲೆಯಾಗಿರುವುದನ್ನು ಕಾಣಬಹುದು. ಮೊದಲನೆಯ ಆಶ್ವಾಸವೊಂದನ್ನು ಉಳಿದು ಪ್ರತಿ ಆಶ್ವಾಸದ ಪ್ರಾರಂಭದ ಪದ್ಯದಲ್ಲಿ ತನ್ನ ಕಾವ್ಯದ ಮುಖ್ಯಪಾತ್ರಗಳಾದ ಮಹಾಬಲ, ಲಲಿತಾಂಗ, ವಜ್ರಜಂಘ, ಸುವಿಧಿ, ಪುರುದೇವ, ಶ್ರೀಪತಿ, ಆದಿನಾಥ, ಭರತ ಮೊದಲಾದವರನ್ನು ಸರಸ್ವತಿಗೆ ಮಣಿಹಾರವನ್ನಾಗಿಸಿದ್ದಾನೆ. ಸ್ವತಃ ತನ್ನನ್ನೇ ಮೂರು ಪದ್ಯಗಳಲ್ಲಿ ಸರಸ್ವತೀಮಣಿಹಾರನೆಂದು ಕರೆದುಕೊಳ್ಳುತ್ತಾನೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.5 (2 votes)
To prevent automated spam submissions leave this field empty.

ಮ.ಮ.ಮ. ಓದಿಗೊಂದು ಪೂರ್ವಸಿದ್ಧತೆ: ಭಾಗ-1


‘ಏನು ಕಾಫಿಗೆ ಬರುವುದಿಲ್ಲವೆ?’
‘ತಾಳು ತಾಳು ಚಿನ್ನಮ್ಮ ತಪ್ಪಿಸಿಕೊಂಡು ಹೋಗಬೇಕು ಹಂಡೆ ಸದ್ದಾಗುತ್ತಿದೆ’

‘ಚಿನ್ನಮ್ಮಗೆ ಏನೂ ತೊಂದರೆಯಿಲ್ಲ. ತಪ್ಪಿಸಿಕೊಂಡು ಹೋಗುವಳು ನೀವು ಬಂದು ಕಾಫಿ ಕುಡಿದು ಹೋಗಿ’

ಅರ್ಧಗಂಟೆಯ ನಂತರ ಕಾಪಿ ಕುಡಿಯುತ್ತಾ,

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

T20=ತೇಜಸ್ವಿ ಟ್ವೆಂಟಿ : ಸ್ವರೂಪ ಪಂಚಿಂಗ್ ಲೈನ್ಸ್

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

‘ಕೇಸರಿ’ಗೇ ಒದ್ದ ‘ನಾಟಿದನ’ದಿಂದ ಮನೆಯ ಹೆಸರೇ ಬದಲಾಯಿತು!

“ಕರು ಹಾಕಿದ ದನಗಳ ಹಾಲು ಹಿಂಡದೇ ಇದ್ದರೆ ಅವು ‘ಗೊಡ್ಡು’ ದನ ಆಗುತ್ತವೆ! ಹಾಗಾಗಿ ದಿನಾ ಬೆಳಗ್ಗೆ ಮತ್ತು ಸಾಯಂಕಾಲ ಅವನ್ನು ಕರೆಯಲೇ ಬೇಕು, ಸಾರ್!” ಎಂದು ದನ ಮೇಯಿಸುವ ಹುಡುಗ ನನಗೆ ತಾಕೀತು ಮಾಡಿದ. ನಾನಾದರೋ ಬಹು ಜಂಬದಿಂದಲೇ “ಬಾಲೂ, ಅದೇನು ದೊಡ್ಡ ವಿಷಯ? ನಾನೇ ಸ್ವತಃ ಬೆಳಗ್ಗೆ ಮತ್ತು ಸಾಯಂಕಾಲ ಸ್ವಲ್ಪ ಹಾಲು ಕರೆದು, ಉಳಿಕೆಯ ಹಾಲನ್ನು ಕರುವಿಗೆ ಉಣ್ಣಲು ಬಿಡುತ್ತೇನೆ” ಎಂದೆ.


ಮರು ದಿನ ಬೆಳಗಾಗುತ್ತಲೇ ಎಳೇ ಕರುವಿನ ದನ ಕೆಂಪಿ ‘ಅಂಬಾ, ಅಂಬಾ!’ ಎಂದು ಅರಚುತ್ತಾ ಇತ್ತು. ನಾನು ನನ್ನ ನಿತ್ಯದ ಯೂನಿಫಾರ್ಮ್ ಆದ ಅರ್ಧ ಪ್ಯಾಂಟ್(ಶಾರ್ಟ್ಸ್), ಟೀ ಶರ್ಟ್, ಮಣಿಗಂಟಿನ ವರೆಗೆ ಕವರ್ ಮಾಡುತ್ತಾ ಇದ್ದ ಬಾಟಾ ಕಂಪನಿಯ ‘ಹಂಟರ್ ಬೂಟ್” ಹಾಗೂ ಬೆಂಗಳೂರಿನಲ್ಲಿ ನಾನು ಕೊಂಡಿದ್ದ ಅಗಲ ಬ್ರಿಮ್‌ನ ಹ್ಯಾಟು ಧರಿಸಿ ಹಟ್ಟಿಗೆ ಹೋದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಆರು ಸಾಲಿನ ಷಟ್ಪದಿಯಲ್ಲೂ ಇಷ್ಟೊಂದು ಬಗೆಯ ಚೆಲುವೆ!?

ಈ ಷಟ್ಪದಿಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ! ಕನ್ನಡ ದೇಸಿ ಛಂದಸ್ಸಿನಲ್ಲಿ ತ್ರಿಪದಿಯನ್ನು ಬಿಟ್ಟರೆ ಅತ್ಯಂತ ಜನಪ್ರಿಯ ಪ್ರಕಾರ ಇದು. ಆದರೆ ತ್ರಿಪದಿಗಿಂತ ಹೆಚ್ಚು ಕಾವ್ಯಗಳು ಈ ಷಟ್ಪದಿ ಪ್ರಕಾರದಲ್ಲಿ ಬಂದಿವೆ.


ದೇಸಿ ಛಂದಸ್ಸಿನ ಮುಖ್ಯ ಲಕ್ಷಣದಂತೆ ಷಟ್ಪದಿಯೂ ಅಂಶ ಛಂದಸ್ಸೇ ಆಗಿತ್ತು. ಬ್ರಹ್ಮ, ವಿಷ್ಣು, ರುದ್ರ ಎಂದು ಮೂರು ಬಗೆಯ ಅಂಶಗಳನ್ನು ಒಳಗೊಂಡಿರುವುದೇ ಅಂಶ ಛಂದಸ್ಸು. ಅಂಶ ಷಟ್ಪದಿಯ ಒಂದು ಉದಾಹರಣೆ:


ವಿ ವಿ               


ವಿ ವಿ               

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.9 (7 votes)
To prevent automated spam submissions leave this field empty.

ಕುವೆಂಪು ಜನ್ಮದಿನಕ್ಕೊಂದು ಕಥೆ : ಮಹಾಮಾತೆ ಮಂಥರೆ

ಪಾಪಿಗುದ್ಧಾರಮಿಹುದೌ ಸೃಷ್ಟಿಯ ಮಹದ್‌ವ್ಯೂಹ ರಚನೆಯೊಳ್.-ಶ್ರೀ ಕುವೆಂಪು, ಶ್ರೀರಾಮಾಯಣ ದರ್ಶನಂ ಮಹಾಕಾವ್ಯ. ಪುಟ ೧೨೩; ಸಾಲು ೩೦೩-೦೪.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (4 votes)
To prevent automated spam submissions leave this field empty.

ಮೂಗಿಗೆ ಮೂಗು, ಕಿವಿಗೆ ಕಿವಿ : ಪಾಕಿಸ್ತಾನ ನ್ಯಾಯಾಲಯದ ತೀರ್ಪು

ಇಂದು (೨೩.೧೨.೨೦೦೯) ಬೆಳಿಗ್ಗೆ ಪ್ರಜಾವಾಣಿ ಪತ್ರಿಕೆಯನ್ನು ತಿರುಗಿಸಿದಾಗ ೧೦ನೇ ಪುಟದಲ್ಲಿ ಒಂದು ತಲೆ ಬರಹ ಹೀಗಿತ್ತು. ‘ಮೂಗು ಕತ್ತರಿಸಿದವರ ಮೂಗನ್ನೇ ಕತ್ತರಿಸಿ’ ಇದು ಪಾಕಿಸ್ತಾನದ ನ್ಯಾಯಲಯದ ಆದೇಶ! ಲಾಹೋರ್ ಹೈಕೋರ‍್ಟಿನ ಆದೇಶದ ಮೇರೆಗೆ ವಿಚಾರಣೆ ನಡೆಸಿದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಈ ತೀರ‍್ಮಾನ ನೀಡಿದೆ. ಶೇರ್ ಮೊಹಮದ್ ಮತ್ತು ಅಮಾನತ್ ಅಲಿ ಎಂಬಿಬ್ಬರು ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳನ್ನು ಅಪಹರಿಸಿ ಆಕೆಯ ಮೂಗು ಕಿವಿಗಳನ್ನು ಕತ್ತರಿಸಿ ಹಾಕಿದ್ದರು. ಈಗ ನ್ಯಾಯಾಲಯ, ಮೂಗಿಗೆ ಮೂಗು ಕಿವಿಗೆ ಕಿವಿ ಎನ್ನುವ ಇಸ್ಲಾಂ ಧರ‍್ಮದ ಶಿಕ್ಷೆಯ ಭಾಗವಾಗಿ ಈ ಶಿಕ್ಷೆ ನೀಡಿದೆ. ಇದರ ಜೊತೆಗೆ ಇಬ್ಬರು ಅಪರಾಧಿಗಳಿಗೆ ತಲಾ ಮೂರು ಲಕ್ಷ ರೂಪಾಯಿಗಳ ದಂಡ ಮತ್ತು ಜೀವಾವಧಿ ಶಿಕ್ಷೆಯನ್ನೂ ನೀಡಿದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.

T20 = ತೇಜಸ್ವಿ ಟ್ವೆಂಟಿ : ಅಲೆಮಾರಿಯ ಅಂಡಮಾನ್

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (3 votes)
To prevent automated spam submissions leave this field empty.

ಜನ್ನಕವಿಯ ‘ಚಂಡಶಾಸನ ವೃತ್ತಾಂತ’ : ಆಧುನಿಕ ಸಂದರ್ಭದಲ್ಲಿ ಕಥೆಯಾದ ಕಥೆ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಜನ್ನಕವಿಯ ‘ಚಂಡಶಾಸನ ವೃತ್ತಾಂತ’ : ಆಧುನಿಕ ಸಂದರ್ಭದಲ್ಲಿ ಕಥೆಯಾದ ಕಥೆ!

1998-2000 ನಾನು ಕನ್ನಡ ಎಂ.ಎ. ಮಾಡಿದ್ದು. ಆಗ ನನಗೆ ಬೇಂದ್ರೆ ಮತ್ತು ಜನ್ನ ವಿಶೇಷಕವಿಗಳಾಗಿ ಅಧ್ಯಯನಕ್ಕೆ ಇದ್ದವರು. ಬೇಂದ್ರೆ ಆಧುನಿಕ ಕನ್ನಡದ ವರಕವಿಯಾದರೆ, ಜನ್ನ ಹನ್ನೆರಡನೆಯ ಶತಮಾನದ ಕವಿ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಹಾಸನ ಜಿಲ್ಲೆಯ ಪರಿಸರದಲ್ಲಿ ಹುಟ್ಟಿ ಬೆಳೆದು ಕವಿಚಕ್ರವರ್ತಿ ಎನಿಸಿಕೊಂಡವನು.


 ಕನ್ನಡ ಕವಿಚಕ್ರವರ್ತಿಗಳು ಮೂವರು. ಪೊನ್ನ, ರನ್ನ ಮತ್ತು ಜನ್ನ.


ಕನ್ನಡ ರತ್ನತ್ರಯರು ಮೂವರು. ಪಂಪ, ಪೊನ್ನ ಮತ್ತು ರನ್ನ.


ಆದರೆ ನಿಜವಾಗಿಯೂ ಈ ಎರಡೂ ಪಟ್ಟಿಯಲ್ಲಿ ಇರಬೇಕಾದವರು, ಪಂಪ, ರನ್ನ ಮತ್ತು ಜನ್ನ! ಇದು ನನ್ನ ಅನಿಸಿಕೆ. ಇರಲಿ ಬಿಡಿ. ಇಲ್ಲಿ ನಾನು ಯಾವ ಕವಿಯ ಸ್ಥಾನನಿರ್ದೇಶನಕ್ಕೂ ನಿಂತಿಲ್ಲವಾದ್ದರಿಂದ ಮತ್ತೆ ಜನ್ನನೆಡೆಗೆ ಬರುತ್ತೇನೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.

ನದಿಗಳ ಹೆಸರು ಹುಡುಕಿ; ‘ಜ್ಞಾನಿ ಕನ್ನಡಿಗ’ ಬಿರುದು ಗೆಲ್ಲಿ!

ಇತ್ತೀಚಿಗೆ ನನಗೆ ಪರಿಚಿತವಿರುವ ಕನ್ನಡ ಉಪನ್ಯಾಸಕರೊಬ್ಬರು, ‘ಪಿ.ಯು.ಸಿ. ಮಕ್ಕಳಿಗೆ ಕನ್ನಡ-ಕರ್ನಾಟಕ ಕುರಿತಂತೆ ಹಲವಾರು ಸ್ಪರ್ಧೆಗಳನ್ನು ನಡೆಸುತ್ತಿದ್ದೇವೆ. ಯಾವುದಾದರೂ ಹೊಸತರನಾದ ಸ್ಪರ್ಧೆಗಳಿದ್ದರೆ ತಿಳಿಸಿ’ ಎಂದಿದ್ದರು. ನಾನು ಮೂರು ರೀತಿಯ ಸ್ಪರ್ಧೆಗಳನ್ನು ತಿಳಿಸಿದ್ದೆ. ಅದರಲ್ಲಿ ಈ ಪದಬಂಧವೂ ಒಂದು.

ದಶಕಗಳ ಹಿಂದೆ ವಾರ ಪತ್ರಿಕೆಗಳಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಈ ರೀತಿಯ ಪದಬಂಧ ಇತ್ತೀಚಿಗೆ ನನ್ನ ಕಣ್ಣಿಗೆ ಬಿದ್ದಿಲ್ಲ. ಈ ಪದಬಂಧವನ್ನು ಬಿಡಿಸುವುದರ ಜೊತೆಗೆ ಕರ್ನಾಟಕದಲ್ಲಿ ಹರಿಯುವ ನದಿಗಳ ಬಗ್ಗೆ ತಿಳಿಸುವುದು ನನ್ನ ಉದ್ದೇಶವಾಗಿತ್ತು. ನಾನು ರೂಪಿಸಿದ ಈ ಪದಬಂಧದಲ್ಲಿ ಕರ್ನಾಟಕದಲ್ಲಿ ಹರಿಯುವ ಇಪ್ಪತ್ತಮೂರು (23) ನದಿಗಳ ಹೆಸರುಗಳು ಅಡಕವಾಗಿವೆ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಅಕ್ಕಮಹಾದೇವಿಯ ಹಾಡು - ಪಾಡು : ಭಾಗ - 1
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.8 (6 votes)
To prevent automated spam submissions leave this field empty.
Subscribe to ಡಾ.ಬಿ.ಆರ್.ಸತ್ಯನಾರಾಯಣ