ನಟನೆ

ಭಾಗ - ೧೪ ಭೀಷ್ಮ ಯುಧಿಷ್ಠಿರ ಸಂವಾದ: ಕುಟಿಲ ನೀತಿ!

         ಭೀಷ್ಮ ಯುಧಿಷ್ಠಿರ ಸಂವಾದ ಅರ್ಥಾತ್ ರಾಜನೀತಿ ಶಾಸ್ತ್ರದಿಂದ ಆಯ್ದ ಮತ್ತೊಂದು ನೀತಿ ಕಥೆ.  
         ಯುಧಿಷ್ಠಿರನು ಕೇಳಿದನು,"ಪಿತಾಮಹಾ, ಸತ್ಯ, ತ್ರೇತಾ, ದ್ವಾಪರ ಯುಗಗಳು ಪರಿಸಮಾಪ್ತವಾಗಿವೆ. ಈಗ ಕಲಿಯ ಆರಂಭವಾಗುತ್ತಿದೆ. ಧರ್ಮವು ಕ್ಷಯಿಸುತ್ತಿದೆ. ದರೋಡೆಕೋರತನ, ಕಳ್ಳತನ, ಅತ್ಯಾಚಾರಗಳು ಆರಂಭವಾಗಿವೆ. ಅವಿನೀತಿ, ಆಮಿಷಗಳಿಗೆ ಕೈಯೊಡ್ಡುವುದು, ಸ್ವಜನ ಪಕ್ಷಪಾತ, ಮೊದಲಾದವು ತಾಂಡವವಾಡುತ್ತಿವೆ. ಇಂತಹ ಸ್ಥಿತಿಯಲ್ಲಿ ರಾಜನಾದವನು ಏನು ಮಾಡಬೇಕು? ಉಪಾಯವನ್ನು ಹೇಳಬೇಕಾಗಿ ಪ್ರಾರ್ಥಿಸುತ್ತಿದ್ದೇನೆ" 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ನಟಿಯರ ಲಂಗದ ಎತ್ತರ ಹಾಗೂ ಜಾಗತಿಕ ಸಂಚು!

( ನಗೆ ನಗಾರಿ ಸಿನಿಕ ಸಂಶಯ-ಚೋದನಾ ಬ್ಯೂರೋ)


ಜಗತ್ತು ನಾವಂದುಕೊಂಡಷ್ಟು ಸರಳವಾಗಿ ನಡೆಯುವುದಿಲ್ಲ. ಬೆಳ್ಳಗಿರುವುದೆಲ್ಲ ಹಾಲು ಆಗಿರುವುದಿಲ್ಲ. ಹಾಗೂ ಹಾಲು ಬೆಳ್ಳಗೇ ಇರಬೇಕೆಂಬ ನಿಯಮವೂ ಇಲ್ಲ. ಕಣ್ಣೆದುರು ಕಂಡದ್ದಷ್ಟೇ ಘಟನೆಯ ಸಂಪೂರ್ಣ ಸತ್ಯವಲ್ಲ. ತೆರೆಮರೆಯಲ್ಲಿ ಘೋರವಾದ ಸಂಚುಗಳು ರೂಪುಗೊಳ್ಳುವುದು, ಕಾಣದ ಕೈಗಳು ಇಡೀ ಜಗತ್ತಿನ ಆಗುಹೋಗುಗಳನ್ನು ನಿರ್ದೇಶಿಸುವುದು, ಜನ ಸಾಮಾನ್ಯರು ತಾವೆಷ್ಟೇ ಸ್ವತಂತ್ರರು ಎಂದುಕೊಂಡರೂ ತಮ್ಮ ಕೃತಿಗಳನ್ನು ಬದುಕಿನ ನಿರ್ಧಾರಗಳು ತಮ್ಮ ಕೈಲಿಲ್ಲ ಎಂಬ ಅರಿವು ಎಲ್ಲರಿಗೂ ಇರುವುದಿಲ್ಲ. ಈ ಜಗತ್ತಿನಲ್ಲಿ ಸದಾ ಮಹಾ ಸಂಚೊಂದು ಸದ್ದಿಲ್ಲದೆ ನನ್ನ ಬೆನ್ನ ಹಿಂದೆ ಜರುಗುತ್ತಿದೆ ಎಂಬ ಸಂಶಯ ಎಲ್ಲರಿಗೂ ಒಂದಲ್ಲ ಒಂದು ಸಮಯದಲ್ಲಿ ಮೂಡಿರುತ್ತೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.7 (3 votes)
To prevent automated spam submissions leave this field empty.
Subscribe to ನಟನೆ