ಚಲನಚಿತ್ರ ವಿಮರ್ಶೆ

ಟೋಪಿವಾಲ ಚಿತ್ರದ ವಿಮರ್ಶೆ

ಉಪೇಂದ್ರ ನಿರ್ದೇಶಿಸದಿದ್ದರೂ ಅವರೇ ಸ್ವತಃ ಕಥೆ, ಚಿತ್ರಕಥೆಯ ಜವಾಬ್ದಾರಿ ಹೊತ್ತಿದ್ದರಿಂದ ಟೋಪಿವಾಲ ಚಿತ್ರ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ಆ ಕುತೂಹಲಕ್ಕೆ ತೆರೆ ಬಿದ್ದಿದೆ, ಟೋಪಿವಾಲ ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ.
 
ಹೌದು, ಏನು ಟೋಪಿವಾಲನ ಕಥೆ?
 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (5 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸಿಂಪಲ್ಲಾಗ್ ಎದೆಯೊಳಗೆ ಕಚಗುಳಿಯಿಡುತ್ತೆ ಈ ಲವ್ ಸ್ಟೋರಿ !

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

"ಕಂಡರೂ ಸಾವು, ನೀ ಬದುಕು" ಎನ್ನುವ ಸಿದ್ಲಿಂಗು

ಸಿದ್ಲಿಂಗು - ಉದ್ದದ ಕಥೆ. ಆತನ ಹುಟ್ಟಿನಿಂದ ಶುರುವಾಗುವ ಕಥೆ. ಹುಟ್ಟುತ್ತಲೇ ಅಮ್ಮನನ್ನು ಕಳೆದುಕೊಂಡು ಅನಾಥನಾಗುವ ಸಿದ್ಲಿಂಗು. ಮಾಮೂಲೀ ಕಥೆಗಳಲ್ಲಿನ ಮಲತಾಯಿಯಂತಲ್ಲದೆ, ಅಪ್ಪನ ಪ್ರೇಯಸಿ, ಅಮ್ಮನೇ ಆಗುತ್ತಾಳೆ.  ಆದರೂ ಮಗು ಸಿದ್ಲಿಂಗು ಅಳು ನಿಲ್ಲಿಸುವುದು ಈ ಹೊಸ ಅಮ್ಮ ಕೈಗೆ ‘ಕಾರ್’ ಗೊಂಬೆಯನ್ನಿತ್ತಾಗ. ಅಂದಿನಿಂದ ‘ಕಾರ್’ ಅನ್ನು ಪಡೆಯುವುದು ಆತನ ಕನಸಾಗಿಬಿಡುತ್ತದೆ. ಆ ಕನಸನ್ನು ಅಪ್ಪ, ಅಮ್ಮ ಇಬ್ಬರೂ ಕೂಡ ಪೋಷಿಸುತ್ತಾರೆ. ಒಟ್ಟಿನಲ್ಲಿ ಸಿದ್ಲಿಂಗುಗೆ ಹುಟ್ಟಿನಿಂದಲೂ ಅತಿಯಾದ ಕಾರಿನ ಹುಚ್ಚು! ಆತ ಅತಿಯಾಗಿ ದ್ವೇಷಿಸುತ್ತಿದ್ದ ಸಹಪಾಠಿ ಕೂಡ ಆಕೆಯ ತಂದೆ ‘ಕಾರ್’ ಕೊಂಡಾಕ್ಷಣ ಪ್ರೀತಿಯ ಗೆಳತಿಯಾಗಿಬಿಡುತ್ತಾಳೆ. ಒಂಟಿ ಲೆಕ್ಚರರ್ ಳಿಗೆ ಈತ ಜೊತೆಯಾಗುವುದು ಕೂಡ ಆಕೆಯ ಬಳಿ ಕಾರ್ ಇದೆಯೆಂದೇ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (3 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಪರಮಾತ್ಮ - ಚಲನಚಿತ್ರ ವಿಮರ್ಶೆ

ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು.  ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ.  ಮಗನ ಮೇಲೆ ಅದಮ್ಯ ವಿಶ್ವಾಸ.  ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ  ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.7 (12 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: