ಬಸವನಗುಡಿ

ಭಾನುವಾರದ ಮಳೆ, ಪಾಟೀಲರ ನಾಟಕ

ಜಯಲಕ್ಷ್ಮಿ ಪಾಟೀಲರು 'ನನ್ನದೊಂದು ನಾಟಕ ಇದೆ' ಎಂದು ಬರೆದದ್ದು ಸಮುದಾಯದ ಹೊಸಬರಲ್ಲಿ ಅಚ್ಚರಿ ಮೂಡಿಸಿರಲಿಕ್ಕೂ ಸಾಕು. ನಾಟಕದ ಕುರಿತು ನಡೆಸಿಕೊಡುತ್ತಿರುವವರೇ ಬರೆದು ಆಮಂತ್ರಣ ನೀಡುವುದು ಹಲವರಿಗೆ ಹೊಸತೆನಿಸಬಹುದು. ಆದರೆ ಹಲವು ವರ್ಷಗಳ ಕಾಲ ಹಲವು ಸಮುದಾಯಗಳಲ್ಲಿ ಪಾಲ್ಗೊಂಡವರಿಗೆ ಗೊತ್ತಿರುತ್ತದೆ, ಎಲ್ಲರೊಂದಿಗೆ ಬೆರೆತು ಎಲ್ಲರನ್ನೂ ಆಮಂತ್ರಿಸುವ ಈ ರೀತಿ ಸಮುದಾಯಗಳಲ್ಲಿ ಹೊಸತೇನಲ್ಲ ಎಂಬುದು. ಸಮುದಾಯದಲ್ಲಿ ಸಮಾನತೆ ಕಾಣಿಸುವ ಹಲವು ವಿಷಯಗಳಲ್ಲಿ ಇದೂ ಒಂದು.

ಅಂದು 'ನಾಟಕ ಇದೆ, ಬನ್ನಿ' ಎಂದು ಬರೆದ ಲೇಖನ ಸರಿಯಾಗಿ ಪ್ರಕಟವಾಗಿಲ್ಲವೆಂದು ಜಯಲಕ್ಷ್ಮಿಯವರು ಸಂಪರ್ಕಿಸಿದಾಗ ಅದನ್ನು ಸರಿಪಡಿಸುವುದು ಹೇಗೆಂದು ತಿಳಿಸಿ "ನಾವೂ ಬರುತ್ತೇವೆ" ಅಂದಿದ್ದೆ. "ಬರ್ತೀರಾ?" ಎಂದು ಎರಡೆರಡು ಸಾರಿ ಕೇಳಿದ್ದರು, ಇವರೆಲ್ಲ ಕಂಪ್ಯೂಟರ್ ಬಿಟ್ಟು ಹೊರಗೆ ಹೋಗುವುದೇ ನಂಬಲಾಗದು ಎಂಬಂತೆ.

ಭಾನುವಾರ ಬಂತು, ನಾಟಕ ನೋಡೋಕೆ ಹೊರಟಿದ್ದೇನೋ ಸೈ, ಆದರೆ ಎಂದಿನಂತೆ ನಮ್ಮ ಪ್ರೋಗ್ರಾಮಿನಲ್ಲಿ twists ಎಂಡ್ turnsಉ. ಅರವಿಂದ ಮೈಸೂರಿನಿಂದ ಬಂದಿದ್ದ, ಅವ ಹಿಂದಿನ ದಿನ ಫೋನ್ ಮಾಡಿ "ಶ್ರೀನಗರದಲ್ಲಿದೀನಿ, ಸಿಗೋಣ್ವ?" ಅಂದಿದ್ದ.

ದಾರಿಯುದ್ದಕ್ಕು ಮಳೆ ಬೇರೆ ಭೋರ್ ಎಂದು ಹೊಡೆಯುತ್ತಿತ್ತು. ಪಾಲನಿಗೆ "ನೀನು ಆಶ್ರಮ ಬಸ್ ಸ್ಟಾಪಿಗೆ ಬಂದುಬಿಡು" ಎಂದು ಹೇಳಿ ಘಂಟೆಗಳೇ ಆಗಿಹೋಗಿತ್ತು. ಅವ ನಾಲ್ಕೈದು ಕಾಫಿ ಕುಡಿಯುತ್ತ, ನಮಗೆ ಕಾಯುತ್ತ ತಾಳ್ಮೆಯನ್ನು ಪರೀಕ್ಷೆಗೆ ಹಚ್ಚಿದ್ದ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಮೆಹಂದಿ (ಗೋರಂಟಿ)

ಮೆಹಂದಿ

ನಿನ್ನೆ ಸಂಜೆ ಬಸವನಗುಡಿಯಲ್ಲಿ ಅಡ್ಡಾಡುತ್ತಿರುವಾಗ ಮುರಳಿಯ ಕಣ್ಣಿಗೆ ಕಂಡದ್ದು ಇದು. ತಕ್ಷಣ ಮುರಳಿ ಮತ್ತು ನಾನು ಕ್ಯಾಮೆರಾ ತೆಗೆದು ಮೆಹಂದಿ ಹಾಕಿಕೊಂಡಿದ್ದ ಈ ಹೆಣ್ಣುಮಗಳ ಕೈಗಳ ಚಿತ್ರವನ್ನು ಸೆರೆಹಿಡಿದೆವು. ಇಂದು ಈ ಹುಡುಗಿಯ ಮದುವೆಯಂತೆ.

ಅವಳಿಗೆ ಶುಭ ಕೋರಿ ಮುಂದೆ ನಡೆದೆವು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.9 (18 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹಕ್ಕಿ ಹಾಡು ಚಿಲಿಪಿಲಿ ರಾಗ

ಕಳೆದ ಶನಿವಾರ ಬಸವನಗುಡಿಯ ಬ್ಯೂಗಲ್ ರಾಕ್ ಉದ್ಯಾನವನಕ್ಕೆ ಹೋಗಿದ್ದೆವು.
ಉದ್ಯಾನವನದಲ್ಲಿ ಸಂಜೆ ಹಕ್ಕಿಗಳ ಚಿಲಿಪಿಲಿ ಕೇಳಲು ಸುಮಧುರವಾಗಿತ್ತು. :)

ಆಗ ನನಗೆ ನೆನಪಾದ ಹಾಡು,
’ಹಕ್ಕಿ ಹಾಡು ಚಿಲಿಪಿಲಿ ರಾಗ
ಹರಿವ ನೀರ ಕಲರವ ...(ಮುಂದೆ ನೆನಪಿಲ್ಲ) :(
ಏನೇನೋ ಭಾವನೆ...’

ಈ ಹಾಡನ್ನು ಪಿ.ಸುಶೀಲಾ ಅವರು ತುಂಬಾ ಚೆನ್ನಾಗಿ ಹಾಡಿದ್ದಾರೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ಬಸವನಗುಡಿ