ಅಮೇರಿಕ

ಯೋಗಾಸನ ಪೈಶಾಚಿಕವಂತೆ

ಯೋಗಾಸನ ಪೈಶಾಚಿಕವಂತೆ, ಹೀಗಂತ decree ಹೊರಡಿಸಿದವರು ಅಮೆರಿಕೆಯ ಪಾದ್ರಿಯೊಬ್ಬರು.


ಸಿಯಾಟ್ಲ್ ರಾಜ್ಯದ ಆ ಪಾದ್ರಿಗೆ ಯೋಗಾಸನವು ಪದ್ಮಾಸನ ಹಾಕಿ ಕೂತ ಪಿಶಾಚಿಯಂತೆ ತೋರುತ್ತದಂತೆ. ಯೋಗ ತರಗತಿಗೆ ನೊಂದಾಯಿಸಿ ಕೊಳ್ಳುವುದರ ಮೂಲಕ ಒಂದು ಪುಟ್ಟ ಪೈಶಾಚಿಕ ತರಗತಿಗೂ ಸೇರುತ್ತಿದ್ದೀರಿ ಎಂದು ಕ್ರೈಸ್ತ ಧರ್ಮೀಯರಿಗೆ ಕಿವಿ ಮಾತು ಹೇಳಿದ R Albert Mohler Jr, ಕೆಂಟಕಿಯ ದಕ್ಷಿಣ ಬ್ಯಾಪ್ಟಿಸ್ಟ್ ಧಾರ್ಮಿಕ ಸಂಸ್ಥೆಯೊಂದರ ಅಧ್ಯಕ್ಷ. ಯೋಗದ ವೇಳೆ ಪಠಿಸಲ್ಪಡುವ ಮಂತ್ರಗಳು ಸಂಸ್ಕೃತ ದ್ದೂ ಮತ್ತು ಕ್ರೈಸ್ತ ಧರ್ಮದ ಆದರ್ಶಗಳಿಗೆ ವಿರೋಧಿಯೆಂದೂ ಹೇಳಿಕೆ ನೀಡಿದ ಈ ಪಾದ್ರಿ ಅಮೇರಿಕಾ ಹೇಗೆ ದಿನೇ ದಿನೇ ಕ್ರೈಸ್ತ ಮೂಲಭೂತವಾದದ ತನಗರಿವಿಲ್ಲದಂತೆ ಜಾರುತ್ತಿದೆ ಎನ್ನುವುದಕ್ಕೆ ನಿದರ್ಶನವಾದರು. ಕೆಲ ವಾರಗಳ ಹಿಂದೆ ಪವಿತ್ರ “ಕುರ್’ ಆನ್” ಗ್ರಂಥವನ್ನು ಬಹಿರಂಗವಾಗಿ ಸುಡಲು ಕರೆ ನೀಡಿದ್ದ ಪಾದ್ರಿಯೊಬ್ಬ ವಿಶ್ವದಾದ್ಯಂತ ಕೇಳಿ ಬಂದ ಪ್ರತಿಭಟನೆಗೆ ಮಣಿದು ಹಿಂಜರಿದ. 

field_vote: 
Average: 4 (3 votes)
To prevent automated spam submissions leave this field empty.
ಲೇಖನ ವರ್ಗ (Category): 

ಒಂದು ವಿಚ್ಛೇದನದ ಸುತ್ತ

ನಲವತ್ತು ವಸಂತಗಳು, ಎಂಥ ಮೊಂಡು ಸಸಿಯನ್ನೂ ಮರವನ್ನಾಗಿಸಿ, ಪಳಗಿಸಿ, ಆಳವಾಗಿ ಬೇರೂರಿ ಸುಲಭವಾಗಿ ಶಿಥಿಲವಾಗದಂತೆ ಮಾಡುತ್ತವೆ. ನಲವತ್ತು ಸಂವತ್ಸರಗಳು ಮನುಷ್ಯನನ್ನು ಎಷ್ಟೊಂದು ಪ್ರಬುದ್ಧವಾಗಿಸುತ್ತವೆ. ಅದೂ ನಲವತ್ತು ಸಂವತ್ಸರಗಳ ಅನುಭವ ಒಂದು ಹೊಸ ಅನುಭೂತಿಯನ್ನು ತರುತ್ತದೆ ಮನುಷ್ಯನಲ್ಲಿ. ನಲವತ್ತು ವರುಷಗಳ ಅನುಭವ ಮನುಷ್ಯನನ್ನು ಹೊಸ ಎತ್ತರಕ್ಕೆ ಒಯ್ಯುತ್ತದೆ. ನಾಲ್ಕು ದಶಕಗಳು....ಅವುಗಳ ಬಗ್ಗೆ ಊಹಿಸುವುದೂ ಕಷ್ಟ.


ನಲವತ್ತು ವರುಷಗಳ ಕಾಲ ತೀರಾ ಹತ್ತಿರವಾಗಿದ್ದವರು, ಸಾವಿರಾರು ಹಗಲನ್ನೂ, ಇರುಳನ್ನೂ ಕಂಡವರು ಏಕಾಏಕಿ ದೂರವಾದರು, ಅಮೆರಿಕೆಯಲ್ಲಿ.  

field_vote: 
Average: 3.8 (6 votes)
To prevent automated spam submissions leave this field empty.
ಲೇಖನ ವರ್ಗ (Category): 
Subscribe to ಅಮೇರಿಕ