ಯೋಗಾಸನ

ಯೋಗಾಸನ ಪೈಶಾಚಿಕವಂತೆ

ಯೋಗಾಸನ ಪೈಶಾಚಿಕವಂತೆ, ಹೀಗಂತ decree ಹೊರಡಿಸಿದವರು ಅಮೆರಿಕೆಯ ಪಾದ್ರಿಯೊಬ್ಬರು.


ಸಿಯಾಟ್ಲ್ ರಾಜ್ಯದ ಆ ಪಾದ್ರಿಗೆ ಯೋಗಾಸನವು ಪದ್ಮಾಸನ ಹಾಕಿ ಕೂತ ಪಿಶಾಚಿಯಂತೆ ತೋರುತ್ತದಂತೆ. ಯೋಗ ತರಗತಿಗೆ ನೊಂದಾಯಿಸಿ ಕೊಳ್ಳುವುದರ ಮೂಲಕ ಒಂದು ಪುಟ್ಟ ಪೈಶಾಚಿಕ ತರಗತಿಗೂ ಸೇರುತ್ತಿದ್ದೀರಿ ಎಂದು ಕ್ರೈಸ್ತ ಧರ್ಮೀಯರಿಗೆ ಕಿವಿ ಮಾತು ಹೇಳಿದ R Albert Mohler Jr, ಕೆಂಟಕಿಯ ದಕ್ಷಿಣ ಬ್ಯಾಪ್ಟಿಸ್ಟ್ ಧಾರ್ಮಿಕ ಸಂಸ್ಥೆಯೊಂದರ ಅಧ್ಯಕ್ಷ. ಯೋಗದ ವೇಳೆ ಪಠಿಸಲ್ಪಡುವ ಮಂತ್ರಗಳು ಸಂಸ್ಕೃತ ದ್ದೂ ಮತ್ತು ಕ್ರೈಸ್ತ ಧರ್ಮದ ಆದರ್ಶಗಳಿಗೆ ವಿರೋಧಿಯೆಂದೂ ಹೇಳಿಕೆ ನೀಡಿದ ಈ ಪಾದ್ರಿ ಅಮೇರಿಕಾ ಹೇಗೆ ದಿನೇ ದಿನೇ ಕ್ರೈಸ್ತ ಮೂಲಭೂತವಾದದ ತನಗರಿವಿಲ್ಲದಂತೆ ಜಾರುತ್ತಿದೆ ಎನ್ನುವುದಕ್ಕೆ ನಿದರ್ಶನವಾದರು. ಕೆಲ ವಾರಗಳ ಹಿಂದೆ ಪವಿತ್ರ “ಕುರ್’ ಆನ್” ಗ್ರಂಥವನ್ನು ಬಹಿರಂಗವಾಗಿ ಸುಡಲು ಕರೆ ನೀಡಿದ್ದ ಪಾದ್ರಿಯೊಬ್ಬ ವಿಶ್ವದಾದ್ಯಂತ ಕೇಳಿ ಬಂದ ಪ್ರತಿಭಟನೆಗೆ ಮಣಿದು ಹಿಂಜರಿದ. 

field_vote: 
Average: 4 (3 votes)
To prevent automated spam submissions leave this field empty.
ಲೇಖನ ವರ್ಗ (Category): 
Subscribe to ಯೋಗಾಸನ