ಕನ್ನಡ ಸಾಹಿತ್ಯ

ನುಡಿ - ಪ್ರಶ್ನೆ 5


ಈ  ಕೆಳಗಿನ ಕೃತಿಗಳನ್ನು ಬರೆದವರು ಯಾರು?  

 

1. ಭಾರತೀಯ ಕಾವ್ಯ ಮೀಮಾಂಸೆ

2. ಜಾನಪದ ಸಾಹಿತ್ಯ ಮೀಮಾಂಸೆ

3. ಪಾಶ್ಚಾತ್ಯ ಕಾವ್ಯಮೀಮಾಂಸೆ

4. ತೌಲನಿಕ ಕಾವ್ಯ ಮೀಮಾಂಸೆ

5. ದಾರ್ಶನಿಕ ಕಾವ್ಯ ಮೀಮಾಂಸೆ

6. ಕನ್ನಡ ಸಾಹಿತ್ಯ ಮೀಮಾಂಸೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (2 votes)
To prevent automated spam submissions leave this field empty.
ಸರಣಿ: 

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ|| ಗುರುಲಿಂಗ ಕಾಪ್ಸೆ ಅವರ ಸಂದರ್ಶನ (ವೀಡಿಯೊ)

ನಾನು ಭಾರತದಲ್ಲಿದ್ದಾಗ ಸಾಹಿತ್ಯ ಸಮಾರಂಭಗಳಿಗೆ ಹೋಗಬೇಕು, ಸಾಹಿತಿಗಳ ಮಾತು ಕೇಳಬೇಕು ಅಂತ ಬಹಳ ಆಸೆ ಇತ್ತು. ಆದರೆ ಇಂತಹ ಕಾರ್ಯಕ್ರಮಗಳೆಲ್ಲ ನನ್ನ ಗಮನಕ್ಕೆ ಬರುತ್ತಿದ್ದುದು ಮಾರನೆ ದಿನ ವಾರ್ತಾಪತ್ರಿಕೆಗಳಲ್ಲಿ ವರದಿ ಓದಿದಾಗ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ವಲಸೆಗಾರರು ಯಾರನ್ನು ಮೆಚ್ಚಿಸಲು ಬರೆಯಬೇಕು?

ಸುಮಾರು ವರ್ಷಗಳಿಂದ ನಾನಿರುವ ಅಮೇರಿಕದಲ್ಲಿ ಎನ್.ಅರ್.ಐ. ಲೇಖಕರು ಸೃಷ್ಟಿಸುತ್ತಿರುವ ಕನ್ನಡ ಲೇಖನಗಳನ್ನು ಓದುತ್ತಾ ಬಂದಿದ್ದೇನೆ. ಈ ನಡುವೆ ಕಥಾಸಂಕಲನಗಳು, ಮುಂತಾದವು ಪುಸ್ತಕ ರೂಪದಲ್ಲಿ ಪ್ರಕಟಗೊಳ್ಳುವುದು, ಅದಕ್ಕೆ ಭಾರತದಿಂದ ಬಂದ ಕವಿಗಳು/ಕಥೆಗಾರರು ಮುನ್ನುಡಿ ಬರೆದು, ಪುಸ್ತಕ ಬಿಡುಗಡೆ ಮಾಡಿ, ಶುಭಹಾರೈಸಿ ಹೋಗುವುದು ನಡೆಯುತ್ತಲೇ ಇದೆ. ಇವೆಲ್ಲ ಈ ಲೇಖಕರು ತಾವೇ ಸ್ವಂತ ಖರ್ಚು ಹಾಕಿ ಪ್ರಕಟಿಸಿರುವ ಪುಸ್ತಕಗಳು. ಹಾಗಿದ್ದ ಮೇಲೆ, ಇದರ ಗುಣಮಟ್ಟ ಎಂತಹದ್ದಿರಬಹುದು ಎಂಬ ಪ್ರಶ್ನೆ ಏಳುವುದು ಸಹಜವೆ. ನನಗನ್ನಿಸುವ ಹಾಗೆ ಇವೆಲ್ಲ ಸುಮಾರು ಒಳ್ಳೆಯ "ಟೈಮ್ ಪಾಸ್" ತರಹದ ಮುದ ನೀಡುವ ಕೃತಿಗಳು. ಆದರೆ, ಯಾವುದೇ "ಆವರಣ" ದಂತಹ ಗಂಭೀರ ಚರ್ಚೆಗೆ ಗುರಿಪಡಿಸುವಂತಹ ಮೇರುಕೃತಿಯಲ್ಲ. ಹೀಗೆ ಬರೆದ ಮರುಕ್ಷಣ ಅನ್ನಿಸಿದ್ದು, ನಾನೇಕೆ ಆವರಣದ ಜೊತೆ ಎನ್.ಅರ್.ಐ. ಕೃತಿಗಳನ್ನು ತಾಳೆ ಹಾಕುತ್ತಿದ್ದೇನೆ? ಇವಕ್ಕೆ ಇವರದ್ದೇ ಒಂದು ಸ್ವಂತ ಸ್ಥಾನವಿಲ್ಲವೇ?

ಹೌದು, ಇವರಿಗೆ ಒಂದು ಸ್ಥಾನವಿದೆ. ಅದೇನೆಂದರೆ, ಒಂದು ಪುಟ್ಟ ಮಗು ಚೆನ್ನಾದ ಚಿತ್ರ ಬಿಡಿಸಿದಾಗ, ದೊಡ್ಡವರು- ಚೆನ್ನಾಗಿದೆ ಮರಿ, ಇನ್ನೂ ಬರೆ, ನಿನಗೆ ಒಳ್ಳೆಯ ಭವಿಷ್ಯವಿದೆ- ಎಂದು ಬೆನ್ನು ತಟ್ಟಿ ಮುಂದೆ ಹೋಗುವ ಸ್ಥಾನ. ಯಾರೂ ಕನ್ನಡ ಸಾಹಿತ್ಯದಲ್ಲಿ ಇವರದೂ ಒಂದು ಪಾತ್ರವಿದೆಯೆಂದು ಗುರುತಿಸದ ಸ್ಥಾನ. ಭಾರತದಲ್ಲಿ ನಡೆಯುವ ಕನ್ನಡ ಕೃಷಿ "ಮೇಯಿನ್ ಸ್ಟ್ರೀಮ್", ಇಲ್ಲಿ ನಡೆಯುವುದು ಸಂತೃಪ್ತ ಮನಸ್ಸು ತಿಂದು ತೇಗಿ, ಬೀಗಿ ಬರೆಯುವ "ಹಾಬಿ" ಯ ಬರಹ. ಹೀಗಂತ ಬೆನ್ನ ಹಿಂದೆ ಹೇಳಿರುವ ಭಾರತದ ಲೇಖಕರು ಇದ್ದಾರೆ. ಹೌದಪ್ಪ ಹೌದು ಎಂದು ಅವರ ವಾಕ್ಯವೆಲ್ಲ ವೇದವೆನ್ನುವಂತೆ ಅಮೆರಿಕನ್ನಡಿಗರು ಸಹ ಅದಕ್ಕೆ ತಲೆಯಲ್ಲಾಡಿಸಿದ್ದಾರೆ. ಇದು ನಿಜವೇ? ಹಾಗಿದ್ದರೆ ನಾವೇಕೆ ಅವರನ್ನು ಮೆಚ್ಚಿಸಲು ಬರೆಯಬೇಕು? ನಾವೇಕೆ ಇವರ ಕಣ್ಣಲ್ಲಿ ಬೆಳಗಬೇಕೆಂದು ಒದ್ದಾಡಬೇಕು? ಗುಡಿಸಲಲ್ಲಿ ಮಲಗಿ, ಕೊಳಚೆಗೇರಿಯಲ್ಲಿ ಜೀವನ ಸವಿಸುವ ಪಾತ್ರಗಳು ಮಾತ್ರ ಪ್ರಶಸ್ತಿಗೆ ಲಾಯಕ್ಕೋ? ಹವಾನಿಯಂತ್ರಿತ ಕ್ಯೂಬಿಕಲ್ನಲ್ಲಿ ಕುಳಿತಿದ್ದು, ಕಾರಿನಲ್ಲಿ ಮನೆಗೆ ತೆರಳುವ ಪಾತ್ರಗಳ ಬದುಕಿನಲ್ಲಿ ಗೋಳೇ ಇಲ್ಲವೋ? ಹಾಗಿದ್ದಲ್ಲಿ ಇಲ್ಲಿನ ಮಾನಸಿಕ ಆಸ್ಪತ್ರೆಗಳಲ್ಲಿ ಕ್ಯೂ ಯಾಕಿರುತ್ತೆ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಕನ್ನಡ ಸಾಹಿತ್ಯ