ಅರಿವು

5 

ನಮ್ಮವರೆಂಬರು ನಮ್ಮವರಲ್ಲ; ಮೋಹಕೆ ಸಿಲುಕಿ ಬಳಲಿದೆನಲ್ಲ

ದೇವ ನಿನ್ನನು ನೆನೆಯಲೆ ಇಲ್ಲ; ಹುಟ್ಟಿನ ಮಹತಿ ತಿಳಿಯಲೆ ಇಲ್ಲ ||ಪ ||
ಕಂಡದ್ದೆಲ್ಲ ಬಯಸಿದೆನಲ್ಲ: ಸಿಕ್ಕದೆ ಇರಲು ಶಪಿಸಿದೆನಲ್ಲ

ಇಲ್ಲದ ಬಯಸಿ ಕೊರಗಿದೆನಲ್ಲ; ಇದ್ದುದ ಬಿಟ್ಟು ಕೆಟ್ಟೆನಲ್ಲ ||೧||
ಚಪಲತೆ ಕಣ್ಣನು ಮುಚ್ಚಿತಲ್ಲ; ನಿಜ ಕಾಣದಾಯಿತಲ್ಲ

ಚಂಚಲ ಬುದ್ಧಿ ಆಡಿದ ಆಟಕೆ ಎಡವಿ ಬಿದ್ದೆನಲ್ಲಾ ||೨||
ಸಜ್ಜನ ಸಂಗವ ಮಾಡಲಿಲ್ಲ; ಸದ್ಗತಿ ಸಿಗಲಿಲ್ಲ

ಕೋಪವು ಮತಿಯ ತಿಂದಿತಲ್ಲ; ಮನಸೇ ಸರಿಯಿಲ್ಲ ||೩||
ಮಿಗಿಲಾರೆಂದು ಬೀಗಿದೆನಲ್ಲ; ನಗೆಪಾಟಲಾಯಿತಲ್ಲ

ರಜೋ ತಮಗಳ ಆರ್ಭಟದಲ್ಲಿ ಸತ್ವ ಸತ್ತಿತಲ್ಲಾ ||೪||
ನಾನು ಎಂಬುದು ನಿಜವಲ್ಲ; ನಾನೇ ಎಂಬುದು ತರವಲ್ಲ

ನಿನ್ನನು ಬಿಟ್ಟು ನಾನೆಲ್ಲೆಂಬುದ ಅರಿಯಲಿಲ್ಲವಲ್ಲಾ ||೫ ||

********************

ಕ.ವೆಂ.ನಾಗರಾಜ್.

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ಚೆನ್ನಾಗಿದೆ ಸರ್
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು, ಚಿಕ್ಕೂ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ದಾಸರ ಪದದಂತೆ ಅರ್ಥಪೂರ್ಣವಾಗಿದೆ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ವಂದನೆಗಳು, ಸತೀಶರೆ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ನಾಗರಾಜ್ ರವರೇ ನಿಜ ಈ ಅರಿವು ಒಳಮನದಲ್ಲಿದ್ದರೂ ಅರಿವಿಲ್ಲದವರಂತಿದ್ದೇವೆ ನಾವು ಈ ಅರಿವ ಅರಿಯುವ ಅರಿವನ್ನು ಅಸುರಾರಿಯೇ ಮೂಡಿಸಬೇಕಷ್ಟೆ ಸರಳ ಸುಂದರ ಸಾಲುಗಳು.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮೆಚ್ಚಿದ್ದಕ್ಕೆ ವಂದನೆಗಳು, ನಾಗರತ್ನರವರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ತಾನ್ಯಾರೆಂಬ ಸತ್ಯವ ಮನುಜ ಅರಿತೊಡೆ ಅಂದಿಗೆ ಸಾರ್ಥಕವಾಗುವುದು ಆ ಜನ್ಮ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅರಿತರೆ ಸಾರ್ಥಕ! ಪ್ರತಿಕ್ರಿಯೆಗೆ ಧನ್ಯವಾದ, ಜಯಂತ್.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ನಾಗರಾಜ್ ಸರ್ ಹೊಸ ಹೊಸ ರೀತಿಯಲ್ಲಿ ಕಾವ್ಯ ಕೃಷಿಯಲ್ಲಿ ತೊಡಗಿದ್ದೀರಿ... ಮುಂದುವರೆಯಲಿ -ಪಾರ್ಥಸಾರಥಿ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ರೀತಿ ಹಲವಿದ್ದರೂ ಭಾವ ಒಂದೇ. ಧನ್ಯವಾದ, ಪಾರ್ಥರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅರಿವು ಅನ್ನೋದು ಬಾಳಿನುದ್ದಕ್ಕೂ ನಡೆವ ತಪಸ್ಸು.. ಕವನ ಚೆನ್ನಾಗಿದೆ ಸರ್..
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ತಪಸ್ಸಿನ ಫಲವೇ ಅರಿವು! ಧನ್ಯವಾದ ಪ್ರಸನ್ನರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಜೀವನದ ಒಳ ಅರಿವು ಮತ್ತು ಅರ್ಥ ಎರಡೂ ಇದೆ ತಮ್ಮ ಸಾಲುಗಳಲ್ಲಿ ..ಅರ್ಥ ಪೂರ್ಣವಾಗಿದೆ
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅರಿವು ಮೂಡಿದರೆ ಅರ್ಥವೆನಿಸುವುದು ಜೀವನ! ಪ್ರತಿಕ್ರಿಯೆಗೆ ವಂದನೆಗಳು, ವಾಣಿಯವರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.