ಜೀವವಾಹ

1

ಜೀವವಾಹ

ಹಗಲಿರುಳು ಎಡೆಬಿಡದೆ
ನನ್ನೊಳಗೆ ನನ್ನಂತೆ
ಹರಿವ ಜೀವದ ವಾಹ ನೀನಲ್ಲವೇ

ಮಣ್ಣ ಕಣ-ಕಣದಿಂದ
ಸ್ಫುರಣಗೊಳೆ ಭವವಾಗಿ
ಅರಳ್ವ ಜೀವದ ವಾಹ ನೀನಲ್ಲವೇ

ಅಳವಿರದಾ ಕಾಶದಿಂದ
ಹರಿವ ಬಲ್ಝರಿಯಂತೆ
ಸುರಿವ ಜೀವದ ವಾಹ ನೀನಲ್ಲವೇ

ಕಡಲಿನಾಳದ ಬಸಿರ
ರತ್ನಗರ್ಭವ ಸೀಳಿ
ಹುಟ್ಟನೀಯುವ ವಾಹ ನೀನಲ್ಲವೇ

ಚಣಚಣವೂ ಉಸಿರಾಗಿ
ಹರಿದು ಒಳಹೊಳೆಯಾಗಿ
ನೆತ್ತರೊಡಲಿನ ವಾಹ ನೀನಲ್ಲವೇ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 1 (1 vote)
To prevent automated spam submissions leave this field empty.

ಪ್ರತಿಕ್ರಿಯೆಗಳು

ಬರಹ ಚೆನ್ನಾಗಿದೆ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು ಮಮತಾ ಅವರೇ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಈ ಭಾವ ಹೊರಡಿಸಿಹ ಸ್ರೋತ ನೀನಲ್ಲವೇ? ವಾಹ ನೀನಲ್ಲವೇ? ಭಾವ ನೀನಲ್ಲವೇ? ಸೊಗಸಾಗಿದೆ! ಧನ್ಯವಾದ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು ನಾಗರಾಜರೇ.
ನಿಮಗೆ ಹಿಡಿಸಿದ್ದು ಖುಷಿಯಾಯಿತು.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.