abdul ರವರ ಬ್ಲಾಗ್

ಇಶಾಂತ್ ಶರ್ಮ - ಚೇತನ್ ಶರ್ಮಾ

ನಿನ್ನೆ ನಡೆದ ಭಾರತ ಆಸ್ಟ್ರೇಲಿಯಾದ ಮೂರನೇ ಒಂದು ದಿನದ ಪಂದ್ಯ ಯಾರೂ ಊಹಿಸದ ಫಲಿತಾಂಶ ನೀಡಿತು. ಯಾವ ಆಟ ಅಥವಾ ಸ್ಪರ್ದೆಯೇ  ಆದರೂ ನಿರೀಕ್ಷಿಸಿದ ಫಲಿತಾಂಶ ಕೊಡಲ್ಲ. ಅದರಲ್ಲೇ ಅಲ್ಲವೇ ಆಟದ ಮಜಾ ಇರೋದು? ಆದರೆ ಕ್ರಿಕೆಟ್ ನ ಸೊಗಸೇ ಬೇರೆ. ಬೌಲ್ ಮಾಡಿದ ಪ್ರತೀ ಚೆಂಡು, ಬೀಸಿದ ಪ್ರತೀ ಹೊಡೆತ ಫಲಿತಾಂಶವನ್ನು ಏರು ಪೇರು ಮಾಡುತ್ತದೆ. ಕಮೆಂಟೇಟರ್ ನನ್ನು ಪ್ರೇಕ್ಷಕನನ್ನು ಇಂಗು ತಿಂದ ಮಂಗವನ್ನಾಗಿಸುತ್ತದೆ.   ನಿನ್ನೆಯ ಕತೆಯೂ ಅದೇ. ೪೭ ನೆ ಓವರ ವರೆಗೂ ಗೆಲುವು ಭಾರತದ ಕೈಯಲ್ಲಿತ್ತು. ೪೮ನೆ ಓವರ ಎಸೆಯಲು ಬಂದ ಇಶಾಂತ್ ಶರ್ಮ ಎಲ್ಲಾ ಲೆಕ್ಕಾಚಾರವೂ ತಲೆ ಕೆಳಗಾಗುವಂತೆ ಬೌಲ್ ಮಾಡಿ ಆರು ಚೆಂಡು ಗಳಲ್ಲಿ ಭಾರ್ತಿ ೩೦ ರನ್ ಕೊಟ್ಟು ಆಸ್ಟ್ರೇಲಿಯಾ ಕುಣಿಯುವಂತೆ ಮಾಡಿದ. ಆಟದ ಪ್ರತೀ ಸನ್ನಿವೇಶದ ಬಗ್ಗೆ ಇಲ್ಲಿ  ಹೇಳುವ ಅಗತ್ಯ ಇಲ್ಲ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.7 (3 votes)
To prevent automated spam submissions leave this field empty.

ಈ ಸರೀ ರಾತ್ರೀಲಿ ಅವಳಿಗೆ ಹೊರಗೇನು ಕೆಲಸ?

ಈ ಸರೀ ರಾತ್ರೀಲಿ ಅವಳಿಗೆ ಹೊರಗೇನು ಕೆಲಸ? .... ಈ ಥರ ಡ್ರೆಸ್ ಮಾಡಿಕೊಂಡರೆ ಇನ್ನೇನು?...ಆ ಜಾಗದಲ್ಲಿ ಅವಳೇನು ಮಾಡುತ್ತಿದ್ದಳು?
ಪ್ರಶ್ನೆಗಳು, ಪ್ರಶ್ನೆಗಳು, ಪ್ರಶ್ನೆಗಳು. ತುಂಟ ನಗೆ ತುಂಬಿದ ಪ್ರಶ್ನೆಗಳು, ಗಂಡು ಮತ್ತು ಹೆಣ್ಣು, ಇಬ್ಬರಿಂದಲೂ. 

ಓರ್ವ ಹೆಣ್ಣು ಬಲಾತ್ಕಾರಕ್ಕೆ ತುತ್ತಾದಾಗ ಮೇಲಿನ ಪ್ರಶ್ನೆಗಳ ಧಾಳಿ. ಡಿಫೆನ್ಸ್ ಲಾಯರ್ ಕಡೆಯಿಂದಲ್ಲ, ಜನಸಾಮಾನ್ಯ ನ ಕಡೆಯಿಂದ . ಈ ಪ್ರಶ್ನೆ ಬರೀ ನಮ್ಮಂಥ ಹಿಂದುಳಿದ ದೇಶಗಳ ಜನರಿಂದ ಮಾತ್ರವಲ್ಲ,  
ಮಂಗಳ ಗ್ರಹಕ್ಕೆ ಜನರನ್ನು ಕಲಿಸಲು ಸಿದ್ಧತೆ ನಡೆಸುವ ಅಮೇರಿಕಾ ದಂಥ ದೇಶದವರದೂ ಇದೇ ನಿಲುವು. (ಭೂಮಿಯ ಪಾಡನ್ನು ನಾಯಿ ಪಾಡು ಮಾಡಿಯಾಯಿತು, ಈಗ ಮಂಗಳದ ಕಡೆ ಪಯಣ, ಅದನ್ನೂ ಹಾಳುಗೆಡವಲು).  

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹಾಲಿವುಡ್ ನ ಎಂಜಲಿನಾ ಜೋಲಿ

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.5 (2 votes)
To prevent automated spam submissions leave this field empty.

ಮೂರು ವಾರಗಳ ಚೀನಾ ಪಿಕ್ನಿಕ್

ಮೂರು ವಾರಗಳ ಕಾಲ ಬಿಡಾರ ಹೂಡಿ ಅದೇನನ್ನು ಮಾಡಬೇಕು ಎಂದು ಬಯಸಿದ್ದರೋ ಅದನ್ನು ಮಾಡಿಯೋ, ಅಥವಾ ಮಾಡದೆ ಬಿಟ್ಟೋ, ಅಂತೂ ಚೀನೀಯರು ನಮ್ಮ ನೆಲದಿಂದ ಕಾಲ್ಕಿತ್ತರು. ಭಾರತದೊಳಕ್ಕೆ ೧೯ ಕಿಲೋ ಮೀಟರು ಗಳಷ್ಟು ಒಳಬಂದು ಠಿಕಾಣಿ ಹಾಕಿದ್ದರು ಚೀನೀಯರು.

ಬದುಕಿನಲ್ಲಿ ಮಿತ್ರರನ್ನು ಬದಲಾಯಿಸಬಹುದು, ನೆರೆಹೊರೆಯವರನ್ನೂ ಬೇಕಾದರೆ ಬದಲಾಯಿಸಬಹುದು, ಆದರೆ ದೇಶದ ವಿಷಯದಲ್ಲಿ ಮಾತ್ರ ಮಿತ್ರರನ್ನು ಚೇಂಜ್ ಮಾಡಬಹುದು, ನಿನ್ನೆ ರಷ್ಯಾ, ಇವತ್ತು ಅಮೇರಿಕಾ, ನಾಳೆ ಇಥಿಯೋಪಿಯಾ. ಆದರೆ ನೆರೆಹೊರೆಯವರನ್ನು ಬದಲಾಯಿಸಲು ಬರುವುದಿಲ್ಲ. ಅದು ಪರ್ಮನೆಂಟ್ ಫಿಕ್ಸ್ಚರ್ರು. ಎಡದಲ್ಲಿ ಪಾಕಿಸ್ತಾನ, ಬಲದಲ್ಲಿ ಚೀನಾ, ಇವೆರಡು ಶನಿಗಳ ಮಧ್ಯೆ ನಾವು. ಫಲಿತಾಂಶ ಆಗಾಗ ನಮ್ಮ ಗಡಿಯೊಳಕ್ಕೆ ಬಂದು ನಮ್ಮ ಸಹನೆಯ ಮಟ್ಟ ಪರೀಕ್ಷಿಸೋದು.

ಮೂರು ವಾರಗಳ ಕಾಲ ನಮ್ಮ ಸಹನೆ ಪರೀಕ್ಷಿಸಿ, ನಮ್ಮ ಮಾತುಕತೆಯ ಧಾಟಿ ನೋಡಿ, ಚೀನೀಯರು ಜಾಗ ಖಾಲಿ ಮಾಡಿದರು. ಚೀನೀಯರು ಈ ರೀತಿ ಮಾಡಲು, ತಮಗೆ ಬೇಕಾದಾಗ ನಮ್ಮ ದೇಶದೊಳಕ್ಕೆ ನುಗ್ಗಲು, ಅರುಣಾ ಛಲ ಪ್ರದೇಶ ನನ್ನದು ಎನ್ನಲು, ನಮ್ಮ ಪ್ರಧಾನಿ ತನ್ನ ದೇಶದೊಳಕ್ಕೆ ಪ್ರವಾಸ ಮಾಡ ಹೊರಟಾಗ ತಗಾದೆ ತೆಗೆಯಲು ಕಾರಣ ನಾವೇ. ನಮ್ಮ ಸೈನ್ಯ ಅವರಷ್ಟು ಬಲಿಷ್ಠವಾಗಿ ಹೊರಹೊಮ್ಮಲು ನಮಗಿಲ್ಲದ ಇರಾದೆ. ನಮ್ಮ ಗಮನ, ಆಸಕ್ತಿ ಎಲ್ಲಾ ವೈಯಕ್ತಿಕ ಆಕಾಂಕ್ಷೆ ಕಡೆ ನೆಟ್ಟಿರುವ ಕಾರಣ ನಾವು ಪದೇ ಪ ದೇ ಇಂಥ ಸನ್ನಿವೇಶಗಳನ್ನು, ಮುಜುಗುರಗಳನ್ನು ಎದುರಿಸುವ ದೌರ್ಭಾಗ್ಯ ಬರುತ್ತದೆ. ಮಾತ್ರವಲ್ಲ ಓರ್ವ ದೂರ ದೃಷ್ಟಿಯುಳ್ಳ ನಾಯಕನ ಕೊರತೆ ಸಹ ಎದ್ದು ಕಾಣುತ್ತದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.2 (6 votes)
To prevent automated spam submissions leave this field empty.

ನಿಮ್ ವೋಟ್ ಯಾರ್ಗೆ?

ಕರ್ನಾಟಕದಲ್ಲಿ ಚುನಾವಣೆಯ ಜ್ವರ ಇಳಿದು, ಮತಗಣನೆಯ ಚಳಿ ಶುರುವಾಗಲಿದೆ. ಆಪ್ತ ಮಿತ್ರನೊಬ್ಬನಿಗೆ ಕುಶಲ ವಿಚಾರಿಸಲು ಫೋನಾಯಿಸಿದಾಗ ಊಟ ಈಗತಾನೆ ಆಯ್ತಪಾ, ವೋಟ್ ಹಾಕೋಕೆ ಹೋಗ್ಬೇಕು ಎಂದು ಚುನಾವಣೆಯ ಮೂಡ್ ಗೆ ತಂದ ಸಂಭಾಷಣೆಯನ್ನು. ಚಿಕ್ಕಂದಿನಿಂದಲೂ ನನಗೆ ರಾಜಕೀಯದ ಹುಚ್ಚು. ಅಪ್ಪ ಪಕ್ಕಾ ಕಾಂಗ್ರೆಸ್ಸಿಗರಾದರೆ ನಾನು ಜನತಾ ಪಕ್ಷ. ಆಗ ಇದ್ದಿದ್ದು ಒಂದೇ ಜನತಾ ಪಕ್ಷ. ಈಗ ಭಾರತೀಯ ಜನತಾ ಪಕ್ಷ, ಕರ್ನಾಟಕ ಜನತಾ ಪಕ್ಷ, 'ಸೆಕ್ಯೂಲರ್' ಜನತಾ ಪಕ್ಷ, ಬೈನಾಕ್ಯುಲರ್ ಜನತಾ ಪಕ್ಷ...ಹೀಗೆ ತರಾವರಿ ಪಕ್ಷಗಳು. ಜನರ ಸೇವೆ ಗಾಗಿಯೇ ತಮ್ಮ ಬಾಳನ್ನು ಮುಡಿಪಾಗಿಸಿಕೊಂಡ ಪಕ್ಷಗಳು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

Pages

Subscribe to RSS - abdul ರವರ ಬ್ಲಾಗ್