anivaasi ರವರ ಬ್ಲಾಗ್

ಕ್ರೌರ್ಯ ಮತ್ತು ಬಲಿ

ಸಾಹಿತ್ಯಕ್ಕೆ ಕೊಡುವ ನೊಬೆಲ್ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದ ೮೯ ವರ್ಷದ ಅಲೆಕ್ಸಾಂಡರ್‍ ಸೋಲ್ಸನಿತ್ಸಿನ್ ಅಸುನೀಗಿದ್ದಾನೆ.

ಇನ್ನೊಂದು ಕಾಲದವನೋ ಎನಿಸುವಂತವನು. ಆದರೆ ಎಲ್ಲ ಕಾಲಕ್ಕೂ ಸಲ್ಲುವಂತಹದನ್ನು ಉಳಿಸಿ ಹೋದವನು. ಸ್ಟಾಲಿನ್ನನ ಕ್ರೌರ್ಯವನ್ನು ಬಯಲಿಗೆಳೆದು ಲೋಕಕ್ಕೆ ತಿಳಿಸಿದವನು. ಕಡೆಯವರೆಗೂ ಪ್ರಭುತ್ವದ ಜತೆ ಮುಜುಗರದ ಸಂಬಂಧವನ್ನ ಉಳಿಸಿಕೊಂಡವನು. ಬೋರಿಸ್ ಎಲ್ಸಿನ್ ನೀಡಲು ಬಂದ ರಷ್ಯಾದ ಅತಿ ಉನ್ನತ ಪದವಿ "ಆರ್ಡರ್‍ ಆಪ್ ಸೇಂಟ್ ಆಂಡ್ರೂ"ವನ್ನು ತಿರಸ್ಕರಿಸಿದವನು. ಅವನ "ಒನ್ ಡೇ ಇನ್ ದ ಲೈಫ್ ಆಫ್ ಇವಾನ್ ಡೆನಿಸೋವಿಚ್" ಒಮ್ಮೆ ಓದಿದರೆ ಸಾಕು, ಮತ್ತೆ ಮತ್ತೆ ಕಾಡುವಂತಹದು. ಸದಾ ಜತೆಗೆ ಉಳಿಯುವಂತಹದು. ಅಮೇರಿಕಾದ ರಾಜಕೀಯ ಹಂದರವನ್ನೂ ಒಪ್ಪಲಾರದೆ - ರಷ್ಯಾ ತನ್ನ ಜಾಡನ್ನು ತಾನೇ ಕಂಡುಕೊಳ್ಳಬೇಕೆಂದು ಒತ್ತಿ ಒತ್ತಿ ಹೇಳಿದವನು. ಎಲ್ಸಿನ್ ಮಹಾ ಗಡಿಬಿಡಿಯಲ್ಲಿ ರಷ್ಯಾದ ಆರ್ಥಿಕ ಸ್ಥಿತಿಯನ್ನು ಹಾಳುಗೆಡವಿದ್ದನ್ನು ಹೀಗಳೆದವನು. ತನ್ನ ಅದಮ್ಯ ಚೇತನದಿಂದ ಈ ಜಗತ್ತಿನ ಅತ್ಯಂತ ಕ್ರೂರ ಪ್ರಭುತ್ವಕ್ಕೆ ಸೆಡ್ಡು ಹೊಡೆದು-ಕೊಲ್ಲುತ್ತಾರೆ ಎಂದುಕೊಳ್ಳುತ್ತಲೇ ಬದುಕಿದವನು. ಬರೆದದ್ದು ನಾಶಮಾಡುತ್ತಾರೆ ಎನ್ನುತ್ತಲೇ ಉಳಿಸಿಕೊಂಡವನು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಸೋಜಿಗ

ಸೋಜಿಗ

ಪ್ರಾಮಾಣಿಕತೆಗೆ
ಬೇಕಾದ ಮನಸ್ಥಿತಿ
ಸಂಸ್ಕೃತಿ ಚರಿತ್ರೆ ದೇಶ ಕಾಲಕ್ಕೆಲ್ಲಾ
ತಳುಕು ಹಾಕಿಕೊಂಡಿದೆ ಅನ್ನುವುದನ್ನು
ಅಪ್ರಾಮಾಣಿಕರೆಲ್ಲಾ ತೀವ್ರವಾಗಿ ಅಲ್ಲಗಳೆಯುತ್ತಾರಲ್ಲಾ...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸಿಟಿಯ ಮೇಲಣ ಗುಳ್ಳೆ

ಸಿಡ್ನಿಯಲ್ಲಿ ಹಾಡುತ್ತಲೋ, ಯಾವುದಾದರೂ ವಾದ್ಯ ನುಡಿಸುತ್ತಲೋ, ಅಥವಾ ವೇಷ ಹಾಕಿಕೊಂಡೋ, ಸರ್ಕಸ್ ಮಾಡುತ್ತಲೋ ಬಸ್ಕ್ ಮಾಡುವುದು ಸದಾ ನೋಡುತ್ತೇವೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಅವನು ಇವನು ನೀಲುಗಳು

ಕೇಳಿದ್ದು ಹೇಳಿದ್ದು

"ಬಾಗಿಲು ತಟ್ಟಿದ ಸದ್ದಾಯಿತು" ಅಂದ ಅವನು.
"ಸದ್ದು ಬಾಗಿಲ ತಟ್ಟಿತು" ಅಂದ ಇವನು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಧರ್ಮಿಷ್ಟರ ದಂಧೆ

"ಮಕ್ಕಳಿಗೆ ಧರ್ಮವನ್ನು ಬೋಧಿಸುವುದು ಚೈಲ್ಡ್ ಅಬ್ಯೂಸ್!" ಎಂದು ತುಂಬಿದ ರೈಲಿನಲ್ಲಿ ಒಬ್ಬ ತನ್ನೊಡನಿದ್ದವಳಿಗೆ ಜೋರಾಗಿ ಬೋಧಿಸಿದ. ಸುತ್ತಮುತ್ತಲಿದ್ದವರು ಸಣ್ಣಗೆ ಮಿಸುಕಾಡಿದರು. ಕೆಲವರು ಒಪ್ಪಿದವರಂತೆ ಕಂಡರೂ ಸಣ್ಣಗೆ ಗಂಟಲು ಸರಿಮಾಡಿಕೊಂಡು ಬೇರತ್ತ ತಿರುಗಿದರು. ಒಪ್ಪಿಗೆಯಾಗದವರು ಒಂದೆರಡು ಕ್ಷಣ ದುರುದುರು ಎಂದು ನೋಡಿ "ಹಾಳಾಗಿ ಹೋಗಲಿ" ಎಂಬಂತೆ ಇನ್ನೊಂದತ್ತ ತಿರುಗಿದರು.

ಈ ಒಂದು ವಾರದಲ್ಲಿ ಸಿಡ್ನಿಯ ಮಂದಿಗೆ ತಮ್ಮ ನಂಬಿಕೆಯ ಬಗ್ಗೆಯಷ್ಟೇ ಅಲ್ಲ - ಆದರೆ ಕ್ಯಾತಲಿಕ್ ಎಂಬ ಬಹುದೊಡ್ಡ  ಸಂಯೋಜಿತ ಧರ್ಮದ ಬಗ್ಗೆ ತಲೆಯಲ್ಲಿ ಹಲವು ಯೋಚನೆ ಅನುಮಾನ ಅಭಿಮಾನ ಎಲ್ಲ ಮೂಡಿ ಮುಳುಗುತ್ತಿದೆ. ನೂರಾರು ಸಾವಿರ ಮಂದಿ ಸೇರಬೇಕೆ ಅದೂ ಈ ಕಾಲದಲ್ಲಿ ಅಂದಾಗ ಇಸ್ಲಾಂ ಧರ್ಮದ ಹಜ್ ಯಾತ್ರೆಯನ್ನು ನೆನಪಿಸುತ್ತಾರೆ. ಹಿಂದೂಗಳ ಪ್ರತಿ ಹಬ್ಬಕ್ಕೂ ಹತ್ತಾರು ಸಾವಿರವಾದರೂ ಸೇರುವುದನ್ನೂ, ಕುಂಭಮೇಳಕ್ಕೆ ಕೋಟಿ ಕೋಟಿಯಲ್ಲಿ ಸೇರುವುದನ್ನು ಎತ್ತಿ ತೋರಿಸುತ್ತಾರೆ. ಒಬ್ಬರಿಗಿರುವ ನಂಬಿಕೆ ಇನ್ನೊಬ್ಬರಿಗೆ ಬೇಡವೇ ಎಂಬಂತೆ ಮುಖ ನೋಡುತ್ತಾರೆ.

ಜಾಗತಿಕ ಯುವ ದಿನ ಎಂದು ಕ್ಯಾತಲಿಕ್ ಚರ್ಚ್ ಹಮ್ಮಿಕೊಳ್ಳುವ ಈ ಉತ್ಸವ ಎರಡು ವರ್ಷಕೊಮ್ಮೆ ನಡೆಯುತ್ತದಂತೆ. ಸಿಡ್ನಿಗೆ ನೂರಾರು ಸಾವಿರ ಮಂದಿ ಬಂದಿಳಿದು ಗದ್ದಲ ಶುರುಮಾಡಿದ್ದಾರೆ. ಸಿಡ್ನಿಯ ಮುಖ್ಯ ಬೀದಿಗಳೆಲ್ಲಾ ಮುಚ್ಚಲಾಗಿದ್ದು ಧರ್ಮಿಷ್ಟರಿಗೆ ಓಡಾಡಲು ಅನುಕೂಲ ಮಾಡಿಕೊಡಲಾಗಿದೆ. ಸಿಡ್ನಿಯ ನಡುವಲ್ಲಿರುವ ಚಂದವಾದ ಡಾರ್ಲಿಂಗ್ ಹಾರ್ಬರಿನಲ್ಲಿ ಪೋಪಜ್ಜನ ಮಾಸ್ ಅಂತೆ. ನಂತರ ಸಿಡ್ನಿಯನ್ನು ಆವರಿಸಿರುವ ಸಾಗರದ ಒಳನೀರುಗಳಲ್ಲಿ ಪೋಪಜ್ಜನ ಬೋಟಕೇಡ್ ಅಂತೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

Pages

Subscribe to RSS - anivaasi ರವರ ಬ್ಲಾಗ್