ಹೊಟ್ಟೆನೋವು ಮತ್ತು ಲೇಮನ್ ಸೋಡಾ: ಹೀಗೂ ಒಂದು ಪ್ರೇಮಕಥೆ

0

“ನೀನು ಬರ್ತೀಯೋ ಇಲ್ವೋ? ಏನೋ ಅನ್ನೋದನ್ನ ನನಗೆ ಹತ್ತೇ ಹತ್ತು ನಿಮಿಷದಲ್ಲಿ ಹೇಳು, ನಾನು ಹೊರಗಡೆ ನಿನಗೋಸ್ಕರ ಕಾಯ್ತಾ ಇರ್ತೀನಿ”, ಎಂದು ಭೂಸುಗೂಡುತ್ತಾ ಹರ್ಷ ಲೈಬ್ರರಿಯಿಂದ ಹೊರಗಡೆ ಬಂದು ಗಿಡದ ನೆರಳಿಗೆ ನಿಂತ.

‘ಏನೋ ಇವಳೊಬ್ಬಳಿಗೆ ಮಾತ್ರ ಇಂಟರ್ನಲ್ ಇರೋ ಹಾಗೆ ಮಾಡ್ತಳೆ, ಬೇರೆಯವರಿಗೇನು ಇಲ್ವಾ’. ಯಾವತ್ತೂ ತನ್ನ ಬೈಕ ಮುಟ್ಟಿಸೋಕೆ ಬಿಡದೆ ಇರೋ ಪಕ್ಯಾ (ಪ್ರಕಾಶ) ಇವತ್ತು ನನ್ಮಗ ಯಾವ ಮೂಡಲ್ಲಿದ್ನೊ, “ಮಾಮಾ, ನನ್ನ ಹುಡಿಗಿನ ಎಲ್ಲಾದ್ರೂ ಸುತ್ತಾಡಿಸ್ಕೊಂಡು ಬರ್ತೀನಿ ಬೈಕ ಕೊಡೋ” ಎಂದ ಕೂಡಲೇ ಕೊಟ್ಟೆ ಬಿಟ್ಟ, ಪೆಟ್ರೋಲ್ ಟ್ಯಾಂಕ ಬೇರೆ ಫೂಲ ತುಂಬಿಸಿದ್ದಾನೆ. ಇವಳು ನೋಡಿದ್ರೆ ‘ಇವತ್ತು ಬ್ಯಾಡಾ, ಮತ್ಯಾವತ್ತರ ಹೋಗೋಣೂ’ ಅನ್ನುತ್ತಿದ್ದಾಳೆ.

ಮೊನ್ನೆ ಇವಳು ಕರೆದು ಕೂಡ್ಲೇ ಆ ಹುಸೆನ್ಯಾ “ಚಿಕನ್” ಮಾಡಿಸಿಕೊಂಡು ಬರವೊನಿದ್ರು, ನನ್ನ ಫೆವರಿಟ್ ಚಿಕನ್ ತಿನ್ನುದು ಬಿಟ್ಟ ಇವಳ ಜೊತೆ ಆ ಕೃಷ್ಣನ ಗುಡಿಗೆ ಹೋದ್ಯಾ, ಅಲ್ಲಿ ಆ ಸುಂಬಳ ಬುರುಕಿ ಸೂಜಿ ಸಿಕ್ಕ ಕೂಡ್ಲೇ, ಆಕಿ ಜೋಡಿ ಬಂದಿದ್ದ ಅವಳ ಅಕ್ಕನ 3 ವರ್ಷದ ಮಗುವಿನ ಜೊತೆ ನನ್ನನ್ನೇ ಮರೆತು ಒಂದು ಗಂಟೆ ಆಟ ಆಡಿದ್ಲು, ಖರೇಣಾ ಒಂದ ಗಂಟೆ, ನಾನು ವಾಚನ್ನೇ ನೊಡ್ಕೋತ ಕೂತಿದ್ದ್ಯ. ಕೊನಿಗಿ ಆ ಸುಂಬಳ ಸೂಜಿ ಆಕಿ ಮನಿಗಿ ಬಾ ಅಂತ ಕರೆದ್ರ ಹೊರಟೆ ಬಿಟ್ಲು, “ನೀನು ರೂಮಿಗೆ ಹೋಗೋ, ನಾನು ಈಕೀ ಮನೆಯಿಂದ ಸೀದಾ ಹಾಸ್ಟೆಲಗೆ ಹೋಗ್ತೀನಿ” ಅಂತ ಹೇಳಿ ಆ ಮಗುವನ್ನೆತ್ತಿಕೊಂಡು ಅದಕ್ಕೆ ಮುತ್ತು ಕೊಡುತ್ತಾ ಹೋದಳು, ನನಗದೆಷ್ಟು ಉರಿತು…. ಚಿಕನ್ ಆದ್ರೂ ಸಿಗುತ್ತೆ ಅಂತ ರೋಮಿಗೆ ಬಂದ್ರೆ ಆ ನನ್ಮಕ್ಳು ಪಕ್ಯಾ, ಶಂಕರ್ಯಾ, ರಾಜ್ಯಾ ಕೂಡಿಕೊಂಡು ಡಬ್ಬಿ ನೆಕ್ಕೋತ ಕುಂತಿದ್ರು. ಅದಕ್ಕೆ ಮೇಲಾಗಿ ಆ ಪಕ್ಯಾ, “ಏನೋ ಮಾಮಾ, ನಿನ್ನ ಸುಮ್ಮಿನ ಎಲ್ಲಿಗ್ಯೋ ಕರ್ಕೊಂದ ಹೊಕ್ಕಿನಿ ಅಂತ ಹೇಳಿ ಇಷ್ಟ ಜಲ್ದಿ ಹೊಳ್ಳಿ ಬಂದ್ಯಲ್ಲೇ” ಅಂತ ನಗ್ತಾ ಕೇಳಿದಾಗ ಮೈಯೆಲ್ಲ ಉರ್ಕೊಂಡು ಬಂದು… ಏನು ಮಾಡಾಕಾಗ್ಡೆ ತಲೆನೋವು ಅಂತ ಮುಸುಕೇಳೆದುಕೊಂಡು ಮಲಗಿದೆ.

ಅಂತಾದ್ರಲ್ಲಿ ಇವತ್ತು ಬೈಕ್ ತಗೊಂಬಂದು, ಹೊರಗಡೆ ಹೋಗೋಣ ಬಾ ಅಂದ್ರೆ ಇವಳೊಬ್ಬಳು. ಹಾಂ.. ಬರ್ತಾಯಿದ್ದಾಳೆ.. ಅವಳ ಹೆಜ್ಜೆ ಸಪ್ಪಳ ಎಲ್ಲಿದ್ರು ಗುರ್ತಿಸಿಬಿಡ್ತೀನಿ.. ಅವನು ಮುಖದ ಮೇಲಿನ ಸಿಟ್ಟು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗಲೆ ಅವಳು ಅವನ ಹತ್ತಿರಕ್ಕೆ ಬಂದು ನಿಂತಳು, “ದೋರೆ ಯಾಕೋ ಸಿಟ್ ಮಾಡ್ಕೋತಿಯ, ಇವತ್ತೊಂದಿನ ಬೇಡ್ವೋ, ಪ್ಲೀಜ್..” ಎಂದಳು. ಅದಕ್ಕವನು “ಎಲ್ಲ ನೀನು ಅಂದಕೊಂಡಂಗೆ ನಡಿಬೇಕಾ… ನೀನು ಕರೆದಾಗಲೆಲ್ಲ ನಾನು ಬಂದಿಲ್ಲಾ? ನೀನು ಹೇಳಿದ ಹಾಗೆಲ್ಲಾ ಕೇಳಿಲ್ಲಾ? ಇವತ್ತು ನನ್ನದೊಂದು ಸಣ್ಣ ಆಸೇನು ನೆಡೆಸೋದಿಲ್ವ?” ಅಂದನು.

“ನಾನ್ಯಾವತ್ತು ನಿನಗೆ ಬೇಡ ಅಂದೀದಿನೋ ನನ್ರಾಜಾ, ಇವತ್ತೊಂದಿನ ಬೇಡ್ವೋ, ಪ್ಲೀಜ್ ತುಂಬಾ ಹೊಟ್ಟೆ ನೋವು” ಎಂದವಳು ಪಿಸುಗುಟ್ಟಿದಳು.

“ಊಟಾ ಮಾಡಿ, ಹಂಗ ಒದ್ಕೊತ ವಂದ ಕಡೆ ಕುಂತರ ಅಜೀರ್ಣ ಆಗಿ ಇನ್ನೇನಾಗ್ತದ, ನಡಿ ಹೊರಗ ಒಂದ ರೌಂಡ ಬೈಕ ಮ್ಯಾಲೆ ಹೋಗಿ ಬರುಣ, ಹಂಗ ಒಂದೊಂದು ಸೋಡಾ ಕುಡ್ದ ಬರುಣು, ಹೊಟ್ಟೆ ನೋವು ಕಡಿಮಿ ಅಕ್ಕೈತಿ ಬಾ” ಅಂದ. ಅದಕ್ಕವಳು ಹಣೆ ಚಚ್ಚಿಕೊಳ್ಳುತ್ತಾ ” ಆ ತರಾ ಹೊಟ್ಟೆನೋವು ಅಲ್ವೋ, ಇವತ್ತೇ ಲ್ಯಾಸ್ಟ ಡೇ, ನಾಳೆ ನೀನು ಹೇಳಿದ ಕಡೆ ಹೋಗೋಣ” ಎಂದಳು.

“ನಿಂದೇನೆ ಸ್ಪೆಷಲ್ ಅದು, ಹೊಟ್ಟೆನೋವಿಗೂ ಡೇಟ್ಸ್ ಕೊಟ್ಟಿಯೆನ? ಇವತ್ತ ಲ್ಯಾಸ್ಟ ಡೇ ಅಂತ. ನೀನಗ ನಂಜೋತಿ ಬರಾಕ ಮನಸಿಲ್ಲ ಅದಕ್ಕ ನೀ ಹಿಂಗ ಹೇಳಾಕತ್ತಿ, ನಾನು ಮುಂದ ಹೋಗಿ ಆ ಕ್ಯಾಂಟಿನ ಹತ್ರ ನಿಂತಿರ್ತೀನಿ ನೀನಗ ನನ್ನ ಮ್ಯಾಲೆ ಓಂಚೂರರ ಪ್ರೀತಿ ಇದ್ರ ಬರ್ತೀ, ಇಲ್ಲ ಅಂದ್ರ ನಿನಗ ನನ್ನ ಮ್ಯಾಲೆ ಪ್ರೀತಿನ ಇಲ್ಲ ಅಂತ ತಿಳ್ಕೊಂಡೂ ಇನ್ಮ್ಯಾಲೆ ನಿನ್ನ ತಂಟೆಗೆ ಬರುದಿಲ್ಲ” ಎಂದು ಹೇಳಿ ಬೈಕ್ ಹತ್ತಿಬಿಟ್ಟು ಸೀದಾ ಹೊರಟೆ ಬಿಟ್ಟ.

ಲೈಬ್ರರಿಯ ಒಳಗಡೆ ಹೋದ ಅವಳು ತನ್ನೆಲ್ಲ ಪುಸ್ತಕಗಳನ್ನು ಎತ್ತಿಟ್ಟುಕೊಂಡು ಸೀದಾ ಕ್ಯಾಂಟೀನಿನ ಬಳಿ ಬಂದಳು. ಅವನಿನ್ನೂ ಮುಖದ ಮೇಲೆ ಸಿಟ್ಟಿಟ್ಟುಕೊಂಡೆ ಕುಳಿತಿದ್ದ. ಬಂದವಳೇ ಸೀದಾ ಅವನ ಹಿಂದೆ ಕುಳಿತುಕೊಂಡು ಅವನ ಬೆನ್ನಿಗೆ ಒಂದು ಗುದ್ದು ಕೊಟ್ಟು, “ನಡಿ ಎಲ್ಲಿಗೆ ಕರಕೊಂಡು ಹೋಗ್ತೀಯೋ ಹೋಗು” ಎಂದಳು.

ಬೈಕನ್ನು ಸ್ಟಾರ್ಟ್ ಮಾಡಿದ ಅವನು “ಅಮ್ಮೌವ್ರೆನೋ ಹೊಟ್ಟೆನೋವು ಅಂತಿದ್ರಿ, ಲೇಮನ್ ಸೋಡಾ ಕುಡಿಯುನೇನು?” ಎಂದ.

ಅವಳು ಅವನ ತಲೆಗೊಂದು ಏಟು ಹಾಕಿ, “ಅದು ಆ ತರಾ ಹೊಟ್ಟೆನೋವಲ್ವೋ ಕೋತಿ, ಪೀರಿಯಡ್ಸು. ಇವತ್ತೇ ಕೊನೇ ದಿನ” ಎಂದಳು. ಅವನು ಅವಳನ್ನೊಮ್ಮೆ ಬೈಕನ ಕನ್ನಡಿಯಲ್ಲಿ ಅವಳನ್ನು ನೋಡಿ, ನಾಚಿ ಮುಗುಳ್ನಗೆ ಬೀರಿದ. ಅವಳು ಅವನನ್ನು ಗಟ್ಟಿಯಾಗಿ ತಬ್ಬಿ, “ದೋರೆ ಇಗ್ಲೇ ಹೀಗಾದ್ರೆ, ಮದುವೆಯಾದ ಮೇಲೆ ಈ ಮೂರು ದಿನ ಹೇಗೋ?” ಎಂದಳು. ಅವನು ಬೈಕಿನ ಕಿವಿ ಜೋರಾಗಿ ತಿರುವಿ ವೇಗವನ್ನು ಹೆಚ್ಚಿಸಿದ. ;)

ಸರಣಿ: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಪ್ರತಿಕ್ರಿಯೆಗಳು

>>ನಾನು ಮುಂದ ಹೋಗಿ ಆ ಕ್ಯಾಂಟಿನ ಹತ್ರ ನಿಂತಿರ್ತೀನಿ ನೀನಗ ನನ್ನ ಮ್ಯಾಲೆ ಓಂಚೂರರ ಪ್ರೀತಿ ಇದ್ರ ಬರ್ತೀ, ಇಲ್ಲ ಅಂದ್ರ ನಿನಗ ನನ್ನ ಮ್ಯಾಲೆ ಪ್ರೀತಿನ ಇಲ್ಲ ಅಂತ ತಿಳ್ಕೊಂಡೂ ಇನ್ಮ್ಯಾಲೆ ನಿನ್ನ ತಂಟೆಗೆ ಬರುದಿಲ್ಲ”<<

ನೀವು ಪ್ರೀತಿಸುವ - ನಿಮ್ಮನ್ನು ಪ್ರೀತಿಸುವವರ ಪ್ರೀತಿಯನೂ ಒರೆಗೆ ಹಚ್ಚುವಿರೋ...?
:(

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಹುಚ್ಚುಖೋಡಿ ಮನಸು.. ಅದು ಹದಿಹರೆಯದ ವಯಸು...

ಆ ವಯಸ್ಸೆ ಹಂಗಲ್ವೇನ್ರಿ ಹೆಗ್ಡೆಯವ್ರೆ, ಅಲ್ಲಿ ನಮ್ಮ ಸಿದ್ಧಾಂತ, ರೀತಿಗಳೆನೂ ಇಲ್ಲ, "ನನ್ನ ಪ್ರೀತಿ ನನಗಷ್ಟೆ ಇರಲಿ, ಸದಾ ಸಿಗುತ್ತಲೆ ಇರಲಿ" ಎಂಬ ಹುಂಬ ಮನಸ್ಸಿನ ಹಂಬಲವಷ್ಟೆ.

ಪ್ರೀತಿಯಿರಲಿ
ಶೆಟ್ಟರು

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಬಾಳ ಚೆಂದ ಬರ್ದಿಯೋ.ಓದಿ ಮಜಾ ಮಾಡಿದೆ .

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮಸ್ತ ಮಜಾ ಮಾಡಿ

ಪ್ರೀತಿಯಿರಲಿ
ಶೆಟ್ಟರು

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಹುಡ್ಗಿ ಅಂದ್ರೆ ಹಾಗೆ ಶೆಟ್ಟರೇ, ಬಾಯಲ್ಲಿ ಇರೋ ತುಪ್ಪ .. ಕುಡಿಯೋಕ್ಕು ಅಗಲ್ಲ ಬಿಡಕ್ಕು ಅಗಲ್ಲ .. ನಸೀಬ್ :)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅನುಭವ ಇರುವಲ್ಲಿ ಅಮೃತವಿದೆ..!!!! ;)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಪಾಪ್ ಬಿಡ್ರಿ.......ಆ ಹುಡ್ಗಿ ಹೊಟ್ಟಿ ನೋವು ಅಂತಾ ಹೇಳಿದ್ರು ಬರಂಗ್ ಮಾಡಿದ್ರಲ್ಲ....ಚೂರರ ಕರುಣಿ ಬ್ಯಾಡೇನ್ರಿ......ತೀರ ಹಿಂಗೆಲ್ಲ ಪ್ರೀತಿ ಪರೀಕ್ಷಿ ಮಾಡದೇನ್ರಿ......ನಿಮಿಗೆಲ್ ಅರ್ಥ ಆಗ್ಬೇಕೇಳ್ರಿ..ಹೆಣ್ಮಕಳ್ ಕಷ್ಟ....

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮಾಲತಿಯವರೇ,

ನಿಮ್ಮ ಕಂಪ್ಲೇಂಟನ್ನ ಹರ್ಷನಿಗೆ ಮುಟ್ಟಸ್ತಿನ್ರಿ... :)

ಇನ್ನು ನೀವು ಹೇಳಿದ್ದು ನಿಜ ನಮ್ಗೆಲ್ಲರ್ಥ ಆಗ್ಬೇಕು "ಹೆಣ್ಮಕಳ್ ಕಷ್ಟ...."

ದಿನಾ ಗಡ್ಡ ಕೆರ್ಕೊಳ್ಳೊದೆ ಬಲು ಕಷ್ಟ ;) ಇನ್ನು ಇವನ್ನೆಲ್ಲಾ ಅರ್ಥ ಮಾಡ್ಕೊಳ್ಳೊಕೆ ಸಮಯಾನೆ ಸಿಗಲಿಲ್ಲ

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.