ಆಹಾ, ನಾವ್ ಆಳುವವರು!

5



           ಆಹಾ, ನಾವ್ ಆಳುವವರು!





ಆಹಾ, ನಾವ್ ಆಳುವವರು
ಓಹೋ ನಾವ್ ಅಳಿಸುವವರು ||ಪ||


ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|

ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|


ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|


ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|


ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|


ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|


ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|

ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ಸೂಪರ್ ಕವನ ಕವಿಗಳೇ ಶರಣು ಎಲ್ಲರೂ ನಮ್ಮವರೇ ಎನ್ನುವೆವು ಎಲ್ಲವ ತಿಂದೂ ತೇಗುವೆವು
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಶರಣು, ಗೊಪಿನಾಥರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಆಹಾ, ಸಕ್ಕತ್ ಕವನ.. ನಾಗರಾಜರೇ.. ನಮಸ್ಕಾರಗಳೊ೦ದಿಗೆ, ನಿಮ್ಮವ ನಾವಡ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ನಾವಡರೇ, ನಮಸ್ಕಾರಗಳು.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.