ಮೊರೆ

5

ಸರಿಸಿಬಿಡು ಮೂಢಮನ ಆವರಿತ ಪೊರೆಯಾ|


ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು||


ರೂಢಿರಾಡಿಯಡಿ ಸಿಲುಕಿ ತೊಳಲಾಡುತಿಹೆ ನಾನು|


ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||



 


ಬಲ್ಲಿದರ ನುಡಿಕೇಳಿ ನೇರಮಾರ್ಗದಿ ನಡೆದೆ|


ಬಸವಳಿದಿದೆ ಮನವು ಕಷ್ಟಗಳ ಕೋಟಲೆಗೆ ||


ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ|


ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||



 


ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ|


ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ||


ಹುಲುಮನುಜ ನಾನಾಗಿ ಭಾವಬಂಧಿಯು ನಾನು|


ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||


**********************


-ಕ.ವೆಂ.ನಾಗರಾಜ್.


(ನನ್ನ ಈ ರಚನೆಯನ್ನು 'ವೇದಸುಧೆ' ಅಂತರ್ಜಾಲ ತಾಣದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶ್ರೀಮತಿ ಲಲಿತಾ ರಮೇಶರು ಹಾಡಿದ್ದು, ಇದನ್ನು http://vedasudhe.blogspot.com/2011/01/blog-post_06.html  ಇಲ್ಲಿ ಕೇಳಬಹುದು.)

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ಸುಂದರ ಪ್ರಾರ್ಥನೆ!! ನಮಸ್ಕಾರಗಳೊಂದಿಗೆ... ಆತ್ರೇಯ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ನಮಸ್ಕಾರಗಳು, ಡಾ. ಮುಳಗುಂದರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಉತ್ತಮ ರಚನೆ ನೀತಿಯನ್ನು ಸಾರುವ ಅತಿಸರಳ ವಿಧಾನ ಅಭಿನಂದನೆಗಳು
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ವಂದನೆಗಳು, ನಾಗರತ್ನರವರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮೂಡಿಬರುತ್ತಿರಲಿ ಸದಾ ಈ ಚೆಂದದ ಸಾಲುಗಳು
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದ, ಚಿಕ್ಕೂ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅರ್ಥಗರ್ಬಿತ ಶಬ್ಧಗಳ ಸುಂದರ ಕವನ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಮೆಚ್ಚುಗೆಗೆ ಧನ್ಯ, ನಂದೀಶರೇ.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಕವಿ ನಾಗರಾಜರೆ, ಮನ ಮುಟ್ಟುವ ಸು೦ದರ ಸಾಲುಗಳು.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯ, ಮಂಜು.
ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.