pachhu2002 ರವರ ಬ್ಲಾಗ್

MS Wordನಲ್ಲಿ ಕನ್ನಡ Type ಮಾಡೋದು ಹೇಗೆ ?

ನಮಸ್ಕಾರ,

ನಮ್ಮ ಆಫೀಸಿನಲ್ಲಿ ಬರಹ ತಂತ್ರಾಂಶವನ್ನ install ಮಾಡೋಹಾಗಿಲ್ಲ.  ಹಾಗಾಗಿ ಕನ್ನಡದಲ್ಲಿ ಏನಾದರೂ ಬರೆಯೋದಕ್ಕೆ ತೊಂದರೆ ಆಗ್ತಾ ಇದೆ.  ಕನ್ನಡದಲ್ಲಿ Type ಮಾಡೋಕೆ ಬೇರೆ ಏನಾದರೂ ದಾರಿ ಇದ್ಯಾ ? ನಾನು ಯಾವುದೇ ತಂತ್ರಾಂಶವನ್ನ install ಮಾಡೋಹಾಗಿಲ್ಲ.  ಸಧ್ಯಕ್ಕೆ ನಾನು ಯಂತ್ರಂ ಲಿಂಕಿನ ಸಹಾಯದಿಂದ ಕನ್ನಡ ಬರೀತಾ ಇದ್ದೀನಿ.  ಆದರೂ ಅದನ್ನ ಸೇವ್ ಮಾಡೋದು ಮತ್ತೆ ಬರೆಯೋದು ಸ್ವಲ್ಪ ರಗಳೆ.  ನಿಮಗೇನಾದರೂ ಮಾರ್ಗ ಗೊತ್ತಿದ್ದಲ್ಲಿ ದಯವಿಟ್ಟೂ ಸಹಾಯ ಮಾಡಿ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ವಿಸ್ಮಯ

Pic from google dot com


ಚಿತ್ರ ಕೃಪೆ: google dot com


ವಿಸ್ಮಯ ನನ್ನ ಅಣ್ಣ ಮತ್ತು ಅತ್ತಿಗೆ ಕನಸನ್ನು ಸಾಕಾರ ಗೊಳಿಸಿ ಧರೆಗೆ ಬಂದ ಕೂಸು.  ಹೌದು ವಿಸ್ಮಯ ನನ್ನ ಅಣ್ಣನ ಮಗಳು.  ಮುದ್ದು ಮುದ್ದಾಗಿ ತೊದಲುಮಾತನಾಡುತ್ತಿರುವ ಅವಳಿಗೆ ಈಗ ೨ ವರುಷಗಳು ತುಂಬಿವೆ.  ಆಕೆಗೋಸ್ಕರ ಬರೆದ ನನ್ನ ಕೆಲವು ಸಾಲುಗಳಿವು.


ಪುಟ್ಟ ಕಂದ ಜಗಕೆ ಬರಲು ತಾಯ್ತಂದೆಗೆ ಹರುಷವು
ನವಮಾಸದ ನೋವುಗಳಲೂ ಅವರಿಗಾನಂದವು


ಮುದ್ದುಕಂದ ನೀತಂದೆ ಸಂತಸದ ದಿನಗಳ
ಮುಗ್ದ ನಗುವ ಬೀರಿ ನೀನು ತೊಯ್ದೆ ತಾಯ ಕಂಗಳ


ಕಣ್ಣಂಚಿನ ಕಣ್ಣೀರು ದುಃಖಕಲ್ಲ ಕಂದನೇ
ಆನಂದಕೆ ಮಾತಿಲ್ಲ, ಆನಂದಭಾಷ್ಪದರ್ಪಣೆ


ಹೊಟ್ಟೆಯೆಳೆದು ರಚ್ಚೆ ಹಿಡಿದು ತಾಯ ಹುಡುಕುತಾ ನೀನು
ಅಂಬೆಗಾಲನಿಟ್ಟು ಬರಲು ತಾಯ ಮೊಗದಿ ಹಾಲ್ಜೇನು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸಂಭ್ರಮದ ಶನಿವಾರ

ವಾರವೆಲ್ಲಾ ಬೆಳ್ಳಂಬೆಳಿಗ್ಗೆ ೪.೩೦ಕ್ಕೆ ಎದ್ದು ಎದ್ದೂ ಸಾಕಾಗಿ ಹೊಗಿತ್ತು. ವಾರಾಂತ್ಯಕ್ಕೆ ಕಾಯ್ತಾ ಇದ್ದೆ. ಅಂತೂ ಇಂತೂ ಶನಿವಾರ ಬಂದೇಬಿಡ್ತು. :) ಶನಿವಾರದ ಮೊದಲ ಕೆಲಸ ಅಂದ್ರೆ 10:00 ಘಂಟೇತನಕ ನಿದ್ದೆ ಮಾಡೋದು ;) ಆಮೇಲೆ ಮಿಕ್ಕಿದ ಕೆಲಸಗಳೆಲ್ಲಾ... ನನ್ನ ಅನಿಸಿಕೆಯಂತೇ ಬೆಳಗ್ಗೆ 9:30ರ ತನಕ ಗಡದ್ದಾಗಿ ನಿದ್ದೆ ಮಾಡ್ದೆ. ಆಮೇಲೆ ಮಾಮೂಲಿ ಯೋಚನೆ... ಇವತ್ತು ತಿಂಡಿ ಏನು ಮಾಡೋದು ಅಂತ. ಆಗ ನೆನ್ಪಾಗಿದ್ದೇ ನನಗೆ ಇಷ್ಟವಾದ ಮಾಡಲು ಸುಲಭವಾದ ತಿಂಡಿ- "ಗಂಜಿ". ಗಂಜಿಯ ಜೊತೆಗೆ ಮಿಡಿ ಉಪ್ಪಿನಕಾಯಿ, ಸ್ವಲ್ಪ ಮೊಸರು, ಸ್ವಲ್ಪ ಕುತ್ತುಂಬರಿ ಚಟ್ನಿ, ಇಷ್ಟಿದ್ಬಿಟ್ರೇ... ಸ್ವರ್ಗಕ್ಕೆ 3ರೇ ಗೇಣು... ಮಾಡುವುದು ಅತಿ ಸುಲಭ, So ಅದನ್ನೆ ಮಾಡಲು ಒಲೇಮೇಲೆ cooker ಇಟ್ಟು ಮನೆಗೆಲಸ ಶುರು ಮಾಡ್ಕೊಂಡೆ. ಮೊದಲನೇದು ಬಟ್ಟೆ ಒಗೆಯೋದು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಇವತ್ತು ಏನ್ ತಿಂಡಿ ಮಾಡ್ಲೀ....

ಇವತ್ತು ಏನ್ ತಿಂಡಿ ಮಾಡ್ಲೀ....


ಹೌದು, ಇದು ಮನೆಯಲ್ಲಿ ಅಡುಗೆ ಮಾಡುವವರ ಸಮಸ್ಯೆ. ಮನೆಯಲ್ಲಿ ಒಬ್ಬರೇ ಇದ್ದರೆ ಒಂದಲ್ಲಾ ಮತ್ತೊಂದು ಮಾಡಿ ಅವತ್ತಿನ ದಿನವನ್ನ ಕಳೆದುಬಿಡಬಹುದು.  ಆದರೆ ಮನೆಯಲ್ಲಿ ಜಾಸ್ತಿ ಜನರಿದ್ದರೆ ಬರೋದೇ ಸಮಸ್ಯೆ ನೋಡಿ... ಅವಲಕ್ಕಿ ಮಾಡೋಣ ಅಂದ್ರೆ ಒಬ್ಬರಿಗೆ ಹುಳಿಯವಲಕ್ಕಿಯೇ ಆಗಬೇಕು.  ಮತ್ತೊಬ್ಬರಿಗೆ ಅವಲಕ್ಕಿ ಒಗ್ಗರಣೆಯೇ ಆಗಬೇಕು.  ಚಪಾತಿ ಮಾಡಿದರೆ ಒಬ್ಬರಿಗೆ ತೆಂಗಿನ ಚಟ್ನಿಯೇ ಬೇಕಾದರೆ ಮತ್ತೊಬ್ಬರಿಗೆ ತರಕಾರಿ ಸಾಗುವೇ ಸೊಗಸು.


ಅಬ್ಬಬ್ಬಾ!!!!  ಅದಿರಲಿ ಬಿಡಿ.  ಮೊದಲು ಏನು ತಿಂಡಿ ಮಾಡೋದು ಅಂತ ನಿರ್ಧಾರ ತೆಗೆದುಕೊಳ್ಳೋದಿಕ್ಕೇ ಸಮಯ ಬೇಕು.  ಪೊಂಗಲ್ ಮಾಡೋಣಾ ಅಂದ್ರೆ ಮನೇಲಿ ಹೆಸರುಬೇಳೆನೇ ಇರೋಲ್ಲ.  ಚಟ್ನಿ ಮಾಡೋಣ ಅಂದ್ರೆ ತೆಂಗಿನ ಕಾಯಿ ಖಾಲಿ!!!  ಉಪ್ಪಿಟ್ಟು ಮಾಡೋಣ ಅಂದ್ರೆ ಅದು ಕಾಂಕ್ರೀಟ್ ಯಾರು ತಿಂತಾರೆ ಅನ್ನೋ ಧೋರಣೆ.  ದೋಸೆ ಮಾಡಿದ್ರೆ ಅಯ್ಯೋ!!! ಇವತ್ತೂ ದೋಸೇನಾ... ಅನ್ನೋ ರಾಗ....

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮುಳ್ಳಯ್ಯನ ಗಿರಿ-ಕೆಮ್ಮಣ್ಣುಗುಂಡಿ ಚಾರಣ

ನವೆಂಬರ್ ೨೯,೩೦ ೨೦೦೮


ದಿನಪೂರ್ತಿ ಕಂಪ್ಯೂಟರಿನ ಮುಂದೆ ಕೆಲ್ಸಮಾಡಿ, ಮನೆಗೆ ಹೋಗಿ ಮನೆಲೂ ಕೆಲ್ಸ ಮಾಡಿ ಸಕತ್ ಬೇಜಾರಾಗೋಗಿತ್ತು. ಇದರ ನಡುವೆ ಒಂದು ಪುಟ್ಟ Break ಬೇಕಾಗಿತ್ತು. ಯಾವರೀತಿ Timepass ಮಾಡಿದ್ರೆ ಚೆನ್ನಾ ಅಂತ ಲೆಕ್ಕಾಚಾರ ಹಾಕ್ತಾ ಇರೋಹಾಗೇ ಮನೋಹರ ನಂಗೆ call ಮಾಡಿದ್ದ. ಒಂದು Trekking ಇದೆ, ಬರ್ತೀಯಾ ? ಬರೋಹಾಗಿದ್ರೆ ನನ್ನ Accountಗೆ ದುಡ್ಡು Transfer ಮಾಡ್ಬಿಡು ಅಂದ. ನಿಸರ್ಗದ ನಡುವೆ ಇರೋ ಅವಕಾಶ ತಾನಾಗೇ ಸಿಕ್ಕಿರೋವಾಗ ತಡಮಾಡದೇ ಮನೋಹರನಿಗೆ ಈ ಚಾರಣದ ವಿಷಯ ತಿಳಿಸಿದ್ದಕ್ಕೆ ಮನದಲ್ಲೇ Thanks ಹೇಳ್ತಾ ಚಾರಣಕ್ಕೆ ಬೇಕಾಗುವ ಮೊತ್ತವನ್ನ ಮುಂಗಡವಾಗಿ ಇಂಟರ್ನೆಟ್ಟಿನಿಂದ ಸುಲಭವಾಗಿ ಮನೋಹರನ ಖಾತೆಗೆ ಜಮಾ ಮಾಡಿ ನಾನು ಚಾರಣಕ್ಕೆ ಬರುವುದನ್ನ ಖಾತ್ರಿ ಪಡಿಸಿಕೊಂಡೆ.


ಮನೋಹರ್ ಮತ್ತೆ ಹರ್ಷ ಗುಂಪಿನೊಡನೆ ಇದು ನನ್ನ ಎರಡನೇ ಚಾರಣ. ಚಾರಣಕ್ಕೆ ಹೋಗಬೇಕಾಗಿದ್ದ ಜಾಗ "ಮುಳ್ಳಯ್ಯನ ಗಿರಿ", ಅಲ್ಲಿಂದ ನಾವು ಕೆಮ್ಮಣ್ಣುಗುಂಡಿಗೆ ಬಂದು ನಮ್ಮ ಚಾರಣವನ್ನ ಅಂತ್ಯಗೊಳಿಸೋದು ಅಂತ ಅವರಿಬ್ಬರೂ Plan ಮಾಡಿದ್ರು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

Pages

Subscribe to RSS - pachhu2002 ರವರ ಬ್ಲಾಗ್