pallavi.dharwad ರವರ ಬ್ಲಾಗ್

ಸಂಪದಿಗರಿಗೆ ವಿದಾಯ...

ಆತ್ಮೀಯ ಸಂಪದಿಗರಿಗೆ,

ಕಾರಣಾಂತರಗಳಿಂದ ಸಂಪದದಲ್ಲಿರುವ ನನ್ನ ಬ್ಲಾಗ್‌ಗೆ ವಿದಾಯ ಹೇಳುತ್ತಿದ್ದೇನೆ. ಇದಕ್ಕೆ ಖಿನ್ನತೆ ಖಂಡಿತ ಕಾರಣವಲ್ಲ.

ಇಷ್ಟು ದಿನಗಳ ಕಾಲ ನನ್ನ ಬರಹಗಳನ್ನು ಪ್ರಕಟಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಿದ ಹರಿಪ್ರಸಾದ ನಾಡಿಗ್‌, ಮೆಚ್ಚುಗೆ ವ್ಯಕ್ತಪಡಿಸಿದ ಸಂಪದಿಗರು, ಪ್ರತಿಕ್ರಿಯೆ ಬರೆದು ಪ್ರೋತ್ಸಾಹಿಸಿದ ಎಲ್ಲರಿಗೂ ಋಣಿ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಚೇರಿ ಎಂಬ ನರಕ-೨

"ಬಹಳ ಕಷ್ಟ"

ಹಾಗ೦ತ ನಾವೆಲ್ಲಾ ಎಷ್ಟು ಸಾರಿ ಅ೦ದುಕೊ೦ಡಿಲ್ಲ? ಸೀಟು ಹಿಡಿಯುವುದರಿ೦ದ ಹಿಡಿದು ಪ್ರಶಸ್ತಿ ಪಟ್ಟಿಯಲ್ಲಿ ಸೀಟು ಗಿಟ್ಟಿಸುವವರೆಗೆ, ಬರೆದ ಲೇಖನ ಪ್ರಕಟವಾಗುವದರಿ೦ದ ಹಿಡಿದು ಪತ್ರಿಕೆಯೊ೦ದನ್ನು ಯಶಸ್ವಿಯಾಗಿ ನಡೆಸುವ ತನಕ ಪ್ರತಿಯೊ೦ದು ಕೆಲಸವೂ ಕಷ್ಟಕರವೇ. ಬರೀ ಕಷ್ಟವಲ್ಲ. "ಬಹಳ ಕಷ್ಟ".

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...

ಇದೊಂದು ಹಳೆಯ ಫೋಟೊ. ಪಿಯುಸಿಯಲ್ಲಿ ತೆಗೆಸಿಕೊಂಡಿದ್ದು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಆ ಮರ !

ವರ್ಷಗಳ ಹಿಂದೆ ನೆಟ್ಟಿದ್ದ ಗಿಡ
ಇವತ್ತು ಮರ

ಅಕ್ಕರೆಯಿಂದ ನೀರೆರೆದು, ಬೇಲಿ ಹಾಕಿ
ಅದಕ್ಕೊಂದು ಬೋರ್ಡು ಬಿಗಿದು
ಬೀಗಿದ್ದರು

ನಿತ್ಯ ಕಣ್ಣಾಡಿಸಿ, ನೀರು ಹನಿಸಿ
ಮೇಯಲು ಬಂದ ಪಶುಗಳ ಓಡಿಸಿ
ಕಾಯ್ದಿದ್ದರು

ಗಿಡ ಮರವಾಯಿತು
ರಸ್ತೆ ಪಕ್ಕ ಸಮೃದ್ಧವಾಯಿತು
ಕತ್ತೆತ್ತಿ ವಿದ್ಯುತ್‌ ತಂತಿ
ನೆಕ್ಕಲು ಹೊರಟಿತು

ತೋಳಗಲಿಸಿ ಬೆಳೆದು
ರಸ್ತೆಯ ಮೇಲೆ ಇಣುಕಲು

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಚೇರಿ ಎಂಬ ನರಕ-೧

ನನ್ನ ಬರಹಕ್ಕೆ ಪ್ರತಿಕ್ರಿಯೆ ಹಾಕುತ್ತಾ ಶ್ರೀದೇವಿ ಕಳಸದ ಅವರು ಒಂದು ಸವಾಲು ಒಡ್ಡಿದ್ದಾರೆ. ಅದು ಸವಾಲೆಂದರೇ ಸರಿ. ಏಕೆಂದರೆ, ಅವರ ಪ್ರಕಾರ ನಾನು, ಜಿಟಿಜಿಟಿ ಮಳೆಯಲ್ಲಿ ಬೆಚ್ಚಗೇ ಕೂತು, ಭಾವನಾತ್ಮಕ ಪ್ರಪಂಚದಲ್ಲಿ ವಿಹರಿಸುತ್ತಿದ್ದೇನಂತೆ. ಲೋಕದ ಕಷ್ಟಗಳ ಬಗ್ಗೆ ನನಗೆ ಗೊತ್ತಿಲ್ಲವಂತೆ. ’ನಾವಾದರೆ, ಕಚೇರಿಯಲ್ಲಿ ಕೆಲಸ ಮಾಡಿ, ಹೈರಾಣಾಗಿ ಮನೆಗೆ ಬರುತ್ತೇವೆ. ಹೀಗಾಗಿ, ಬರವಣಿಗೆಯಲ್ಲಿ ಪೂರ್ತಿ ತೊಡಗಿಸಿಕೊಳ್ಳಲು ಆಗುತ್ತಿಲ್ಲ’ ಎಂಬುದು ಅವರ ದೂರು.

ಈ ದೂರಿಗೆ ಅಥವಾ ಅಸಮಾಧಾನಕ್ಕೆ ನಾನೊಬ್ಬಳೇ ಉತ್ತರ ಬರೆಯುವುದು ಸೂಕ್ತವಲ್ಲ ಅಂದುಕೊಂಡಿದ್ದೇನೆ. ಸಂಪದದ ನಿಯಮಿತ ಬರಹಗಾರ್ತಿಯರಾದ ಕಲ್ಪನಾ, ರೂಪಾ, ಜಯಲಕ್ಷ್ಮೀ ಕೂಡಾ ಈ ಪ್ರಶ್ನೆಯನ್ನು ತಮಗೇ ಸಂಬಂಧಿಸಿದ್ದು ಎಂಬಂತೆ ತೆಗೆದುಕೊಂಡು ಉತ್ತರ ನೀಡಬೇಕೆಂದು ನನ್ನ ವಿನಂತಿ.

ಕಚೇರಿಯಲ್ಲಿ ನಾನು ಕೆಲಸ ಮಾಡಿಲ್ಲ. ಅಲ್ಲಿಯ ಸಮಸ್ಯೆಗಳ ಬಗ್ಗೆ ನನಗೆ ನೇರ ಅನುಭವವಿಲ್ಲ. ಆದರೆ, ಕಚೇರಿಯ ವಾತಾವರಣ ಗೊತ್ತಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಿಲ್ಲ. ಏಕೆಂದರೆ, ಕಾಲೇಜಿನ ದಿನಗಳಲ್ಲಿ ಆಗಷ್ಟು, ಈಗಷ್ಟು ಕಚೇರಿಯ ರಗಳೆಯನ್ನು ಅನುಭವಿಸಿದ್ದಾಗಿದೆ. ಅಡ್ಮಿಶನ್‌ ಸಮಯದಲ್ಲಂತೂ ಗುಮಾಸ್ತರು ಜೀವ ಹಿಂಡುತ್ತಿದ್ದರು. ನಮ್ಮವೇ ಮಾರ್ಕ್ಸ್‌‌ಕಾರ್ಡ್‌‌ಗಳ ಮೇಲೆ ಮುಖ ಗೊತ್ತಿಲ್ಲದ ಗೆಜೆಟೆಡ್‌ ಆಫೀಸರ್‌ನ ಅಟೆಸ್ಟೇಶನ್‌ ಮಾಡಿಸಿ ತರಬೇಕಿತ್ತು. ಸರಕಾರಿ ಕಚೇರಿಗಳ ಕ್ರೂರತೆ ಮತ್ತು ಕೆಟ್ಟ ವೃತ್ತಿಪರತೆ ಹೇಗಿರುತ್ತದೆ ಎಂಬುದು ನನ್ನ ಅನುಭವಕ್ಕೆ ಬಂದಿದ್ದು ಆಗ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

Pages

Subscribe to RSS - pallavi.dharwad ರವರ ಬ್ಲಾಗ್