ravikreddy ರವರ ಬ್ಲಾಗ್

ಏನೇ ಆಗಲಿ ಒಳ್ಳೆಯದನ್ನೇ ಮಾಡಿ; ವಾರಕ್ಕೆರಡು ದಿನ ಧಾರಾವಾಹಿಯಾಗಿ

ಪ್ರಾಮಾಣಿಕರಾದವರಿಗೂ, ಕ್ರಿಯಾಶೀಲರಾದವರಿಗೂ, ಸ್ವಾರ್ಥವಿಲ್ಲದ ಪರೋಪಕಾರಿ ಗುಣ ಇರುವವರಿಗೂ ಎಲ್ಲಾ ಸಮಯದಲ್ಲೂ ಆಶಾವಾದವನ್ನು ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲು. ಎಷ್ಟೋ ಬಾರಿ ಈ ಒಳ್ಳೆಯವರು ಸಿನಿಕತನಕ್ಕೆ ಒಳಗಾಗಿ ಎಲ್ಲವನ್ನೂ Negative ಆಗಿ ನೋಡಲು ಆರಂಭಿಸಿಬಿಡುತ್ತಾರೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕುವೆಂಪು ವಿರುದ್ಧ ದೇವುಡು "ಪಿತೂರಿ" ಮತ್ತು ಅಂತರ್ಜಾತಿ ವಿವಾಹ

ಡಾ. ಪ್ರಭುಶಂಕರರ "ಹೀಗಿದ್ದರು ಕುವೆಂಪು" ಲೇಖನದಲ್ಲಿನ ಈ ಕೆಳಗಿನ ಸಂದರ್ಭಕ್ಕೆ ಪೀಠಿಕೆ ಅಥವ ವಿವರಣೆ ಬೇಕಾಗಿಲ್ಲ, ಅಲ್ಲವೆ?

1967 ರ ಅಕ್ಟೋಬರ್. ಆ ವೇಳೆಗೆ ನಾನು ಕುವೆಂಪುರವರ ಮನೆಯವರಲ್ಲಿ ಒಬ್ಬನಾಗಿದ್ದೆ. ಒಂದು ಸಂಜೆ ನಾನು, ಕೆಲವೇ ವಾರಗಳಲ್ಲಿ ನನ್ನ ಪತ್ನಿಯಾಗಲಿದ್ದ ಡಾ. ಶಾಂತಾ ಅವರೊಡನೆ ಕುವೆಂಪು ಅವರ ಮನೆಗೆ ಹೋದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು

ಡಾ. ಪ್ರಭುಶಂಕರ ಒಳ್ಳೆಯ ಹಾಸ್ಯಪ್ರಜ್ಞೆಯ ಲೇಖಕರು. ಇವರ ಹಾಸ್ಯಪ್ರೀತಿ ಎಷ್ಟಿದೆಯೆಂದರೆ, "ಪ್ರಭು ಜೋಕ್ಸ್" ಎಂಬ ಸಣ್ಣ ಜೋಕು ಪುಸ್ತಕವನ್ನೂ ಪ್ರಕಟಿಸಿದ್ದಾರೆ. ಇವರ ಹಿಂದಿನ ತಲೆಮಾರಿನ ಲೇಖಕರಲ್ಲಿ ನಾ. ಕಸ್ತೂರಿ ಅಪಾರ ಹಾಸ್ಯಪ್ರಜ್ಞೆಯ, ಅನಾರ್ಥಕೋಶದ ಲೇಖಕರು. ಅವರ ಬಗ್ಗೆ ಪ್ರಭುಶಂಕರರು "ನಾ. ಕಸ್ತೂರಿಯವರು" ಲೇಖನದಲ್ಲಿ ಹೀಗೆ ಹೇಳುತ್ತಾರೆ:

" (ನಾ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...

ಕುವೆಂಪು ಮೂಢನಂಬಿಕೆಗಳ, ಜಾತೀಯತೆಯ, ಪುರೋಹಿತಶಾಯಿಯ ಕಡುವಿರೋಧಿಯಾಗಿದ್ದವರು; ಕರ್ನಾಟಕ ಕಂಡ ಮಹಾನ್ ದಾರ್ಶನಿಕರು. ನಮ್ಮಲ್ಲಿ ಯಾರಾದರೂ ಇಂತಹ ವಿಷಯಗಳ ಬಗೆಗೆ ತಮ್ಮ ವಿರೋಧ ವ್ಯಕ್ತಪಡಿಸಿದರೆ ತಕ್ಷಣವೆ ಆತ ಹಿಂದೂವಿರೋಧಿ ಅಥವ ಬ್ರಾಹ್ಮಣವಿರೋಧಿ ಎಂದು ಬ್ರ್ಯಾಂಡ್ ಮಾಡುವ ದುಷ್ಟಪರಂಪರೆ ಒಂದಿದೆ. ಕುವೆಂಪುರವರ ಬಗ್ಗೆಯೂ ಬ್ರಾಹ್ಮಣವಿರೋಧಿ ಎಂಬ ಆರೋಪವಿತ್ತು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ತಲ್ಲಣದ ಸಮಯದಲ್ಲಿ ಸಜ್ಜನಿಕೆ ಮತ್ತು ಪ್ರೀತಿಯನ್ನು ಹುಡುಕುತ್ತಾ...

2001, ಸೆಪ್ಟೆಂಬರ್ 11 ರ ದಾಳಿ ಆದನಂತರ ಇಲ್ಲಿಯವರೆಗೆ ಅಮೆರಿಕದ ನೆಲದಲ್ಲಿ ಯಾವೊಂದು ಭಯೋತ್ಪಾದಕ ದಾಳಿಗಳೂ ಆಗಿಲ್ಲ. ಈ ಮಧ್ಯೆ ಅಮೆರಿಕ ನ್ಯಾಯಯುತವಾಗಿಯೆ ಅಫ್ಘಾನಿಸ್ತಾನಕ್ಕೆ ನುಗ್ಗಿದ್ದಷ್ಟೆ ಅಲ್ಲದೆ ಅಪಾರ ವಿರೋಧದ ನಡುವೆ ಇರಾಕಿಗೂ ನುಗ್ಗಿತು. ಇದು ಇಸ್ಲಾಮಿಕ್ ಮೂಲಭೂತವಾದಿ ಭಯೋತ್ಪಾದಕರಲ್ಲಿ ದ್ವೇಷವನ್ನು ಮತ್ತಷ್ಟು ಹೆಚ್ಚಿಸಿತು. ಆದರೂ ಅಮೆರಿಕದ ನೆಲದ ಮೇಲೆ ಮತ್ತೆ ದಾಳಿ ಮಾಡಲು ಅವರ ಕೈಯ್ಯಲ್ಲಿ ಸಾಧ್ಯವಾಗಿಲ್ಲ. ಅಂದರೆ ಅವರು ಪ್ರಯತ್ನಿಸಲಿಲ್ಲ ಅಂತಲ್ಲ. ಅವರು ಪ್ರಯತ್ನಪಟ್ಟರೆ ಎನ್ನುವುದೂ ತಿಳಿಯದಷ್ಟು ಸೂಕ್ಷ್ಮವಾಗಿ ಅಮೆರಿಕದ ಭದ್ರತಾ ದಳಗಳ Intelligence ವಿಭಾಗಗಳು ಕಾರ್ಯನಿರ್ವಹಿಸಿವೆ. ಭಯೋತ್ಪಾದನೆಯನ್ನು ಸಂಪೂರ್ಣವಾಗಿ Law & Order ವಿಷಯವನ್ನಾಗಿಯೆ ನೋಡಿ ಅವರು ಈ ಜಯ ಸಾಧಿಸಿದ್ದಾರೆ.

ಕಳೆದ ವಾರ ಮುಂಬಯಿಯಲ್ಲಿ ಮತ್ತೆ ಅದೆಷ್ಟನೆಯದೊ ಬಾರಿ ಸಂಕುಚಿತ ಕೋಮುವಾದಿಗಳು ದಾಳಿ ಮಾಡಿದ್ದಾರೆ. ಅಪಾರವಾದ ಅಂತರರಾಷ್ಟ್ರೀಯ ಆಯಾಮ ಗಳಿಸಿಕೊಂಡ ಈ ದಾಳಿ ಮೂರ್ನಾಲ್ಕು ದಿನಗಳ ಹೋರಾಟದ ಬಳಿಕ ಅಂತ್ಯವಾಗಿದೆ. ಕರ್ತವ್ಯಪಾಲಕರ, ಅಮಾಯಕರ, ವಿದೇಶಿಗಳ, ಪ್ರವಾಸಿಗಳ, ಬಡವರ, ಶ್ರೀಮಂತರ, ಒಟ್ಟಿನಲ್ಲಿ ಮನುಷ್ಯರ ಹತ್ಯೆಯಾಗಿದೆ. ದೇಶದ ಒಂದೆರಡು ರಾಜ್ಯಗಳ ಚುನಾವಣೆಯೂ ಈ ಘಟನೆಯಿಂದ ನಿರ್ಧಾರಿತವಾಗಿ ಹೋಗಿದೆ. ಉತ್ತರದ ರಾಜ್ಯಗಳಲ್ಲಿ ಒಂದು ಮಟ್ಟದ ಸಾಮಾಜಿಕ ನ್ಯಾಯಕ್ಕೆ ಕಾರಣನಾದ ಮಾಜಿ ಪ್ರಧಾನಿಯೊಬ್ಬನ ಸಾವು ಸುದ್ದಿಯೆ ಅಲ್ಲದಷ್ಟು ರೀತಿಯಲ್ಲಿ ನಗಣ್ಯವಾಗಿ ಹೋಗಿದೆ.

ಹಾಗೆಯೆ, ರಕ್ತಹರಿಸಿದ ಇದೇ ದುಷ್ಟರ ದುಷ್ಟ ದಾಯಾದಿಗಳು ನವೋಲ್ಲಾಸದಿಂದ ಜಿಗಿದೆದ್ದಿದ್ದಾರೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

Pages

Subscribe to RSS - ravikreddy ರವರ ಬ್ಲಾಗ್