vinutha.mv ರವರ ಬ್ಲಾಗ್

ಕಲಾಲೋಕದಲ್ಲಿ ಕಳೆದ ಕಾಲ...

"ಯಾರ್ರೀ ಶಿವಾನಂದ (?!) ಇಲ್ಲೇ ಇಳೀರಿ, ಮುಂದಕ್ಕೆ ಹೋಗಲ್ಲ, ಬ್ಲಾಕ್ ಮಾಡಿದಾರೆ" ಕಂಡಕ್ಟರ್ ಕೂಗಿದಾಗ ದಡಬಡನೆ ಇಳಿದೆ! ರಸ್ತೆ ದಾಟುತ್ತಿದ್ದಂತೆಯೇ ಕಾಣುತ್ತಿತ್ತು "ಸಂತೆ". ಥೇಟ್ ನಮ್ಮೂರಿನ ಸೋಮವಾರದ ಸಂತೆಯನ್ನೇ ಹೋಲುವಂತದ್ದು! ಆದರಲ್ಲಿದ್ದುದು ಹೊಟ್ಟೆಯ ಹಸಿವನ್ನಿಂಗಿಸುವ ಹಣ್ಣು-ತರಕಾರಿಗಳ ಸಂತೆಯಲ್ಲ, ಕಣ್ಣಿನ ದಾಹ ತಣಿಸುವ, ಮನಸ್ಸನ್ನು ಅರಳಿಸುವ "ಚಿತ್ರ ಸಂತೆ".

ಈ ರಾಜಕಾರಣಿಗಳು ಈ ತರಹದ ಸಮಾರಂಭಗಳಿಗೆ ಏತಕ್ಕಾದರೂ ಬರುತ್ತಾರೋ ತಿಳಿಯೆ! ಆ ಟೋಪಿ ಸಚಿವರಿಗೆ ತಾವೆಲ್ಲಿ ಮಾತನಾಡುತ್ತಿದ್ದೇವೆ ಎಂಬುದರ ಅರಿವಾದರೂ ಇತ್ತೋ ನಾಕಾಣೆ. ಆ ಮಹಾಸಾಮ್ರಾಟರ ಹೆಸರಿನ ಸಚಿವರು ಕಲಾಕೃತಿಗಳನ್ನು ವೀಕ್ಷಿಸುವಾಗ ಯಾವುದೋ ಕೇಸಿನ ವಿಚಾರದ ಚರ್ಚೆಯಲ್ಲಿ ತಲ್ಲೀನರಾಗಿದ್ದರು. ಆದರೂ ಈ ಪುಡಾರಿಗಳ ಬೆಂಬಲವಿಲ್ಲದೆ ಇಂತಹ ಕಾರ್ಯಕ್ರಮಗಳು ನಡೆಯುವುದು ಅಸಾಧ್ಯವಾಗಿರುವುದು ನಮ್ಮ ಪುಣ್ಯಫಲ! ಇವೆಲ್ಲದರ ನಡುವೆಯೂ ಯಾರೋ ಪುಣ್ಯಾತ್ಮರು ಮಹಾನ್ ಕಲಾವಿದ ರೋರಿಕ್ ರವರನ್ನು ನೆನಪಿಸಿಬಿಟ್ಟರು! ಅಂತಹ ಭಾರೀ ಜನಜಂಗುಳಿಯನ್ನೂ ಭೇದಿಸಿ ನೆನಪು ವಿಶಾಲವಾದ ಬಾಲ್ಯದಂಗಳದಲ್ಲಿ ನಿಲ್ಲಿಸಿಬಿಟ್ಟಿತ್ತು!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.6 (21 votes)
To prevent automated spam submissions leave this field empty.

ಅಂಗವಿಕಲರು ವಿಕಲಚೇತನರೇ?

                                              "ಓ ನನ್ನ ಚೇತನ
                                               ಆಗು ನೀ ಅನಿಕೇತನ.."


ಮತ್ತೆ ಮತ್ತೆ ಹಾಡಿಸಿಕೊಳ್ಳುವ, ಎಂತಹ ವೈಫಲ್ಯದ ಪರಿಸ್ಥಿತಿಯಲ್ಲೂ ವ್ಯಕ್ತಿಯನ್ನು ಹುರಿದುಂಬಿಸಬಲ್ಲ, ಹುಲುಮಾನವನಿಂದ ವಿಶ್ವಮಾನವನನ್ನಾಗಿ ರೂಪಿಸಬಲ್ಲ ಅದ್ಭುತವಾದ ಸಾಲುಗಳು! ಆದರೆ ನಮ್ಮ ಆಧುನಿಕ ನುಡಿತಜ್ಞರ ಪ್ರಕಾರ, ಅಂಗವಿಕಲ == ವಿಕಲಚೇತನ (== physically challenged == specially abled). ಆಹಾ! ಎಂತಹ ಭಾಷಾ ಪ್ರಾವೀಣ್ಯತೆ! ನಿಜಕ್ಕೂ ಕುವೆಂಪು ಚೇತನ ಇಂದಿಗೆ ನಿರ್ನಾಮವಾಯಿತು. "ಚೇತನ" ವನ್ನು ನಾಮಪದವಾಗಿ ಬಳಸಿದಾಗ - ಮನಸ್ಸು, ಬುದ್ಧಿ, ಪ್ರಜ್ಞೆ ಎಂತಲೂ, ಗುಣವಾಚಕವಾಗಿ ಬಳಸಿದಾಗ - ಇಂದ್ರಿಯಗ್ರಹಣ ಶಕ್ತಿಯುಳ್ಳ, ಪ್ರಜ್ಞೆಯುಳ್ಳ, ಸಜೀವವಾದ ಎಂಬ ಅರ್ಥವೆಂದು ವೆಂಕಟಸುಬ್ಬಯ್ಯನವರ ಪ್ರಿಸಂ ನಿಘಂಟು ಹೇಳುತ್ತದೆ. ಹೀಗಿರಲು, ಕೆಲವು ಅಂಗಗಳು ಊನವಾಗಿರುವವ ವಿಕಲಚೇತನ!! ಎಷ್ಟು ಅರ್ಥಹೀನ ಹಾಗೂ ಅಮಾನವೀಯ! ಬಹುಶ: ಆ ಭಾಷಾಪರಿಣತರೊಮ್ಮೆ ಅಂತರರಾಷ್ಟ್ರೀಯ ಅಂಗವಿಕಲರ ಒಲಂಪಿಕ್ಸ್ (IWAS - 2009) ಕ್ರೀಡಾಕೂಟವನ್ನೊಮ್ಮೆ ವೀಕ್ಷಿಸಿದ್ದರೆ ಇಂತದೊಂದು ಪದದ ರಚನೆಯೇ ಆಗುತ್ತಿರಲಿಲ್ಲವೇನೋ!‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (15 votes)
To prevent automated spam submissions leave this field empty.

ಮಹಾಶ್ವೇತ

"ಶರಣ್ರೀ.. ಏನ್ರೀ ಭಾಳ ಬಿಜಿ ಇರಂಗದ. ಕಾಣಂಗೇ ಇಲ್ವಲ್ಲಪ್ಪ ಮಂದಿ!"


"ಹಂಗೇನಿಲ್ರೀ... ಹಿಂಗೇ ನಡೀಲಿಕ್ಹತ್ತದ. ನೀವೇ ಭಾಳ ಬಿಜಿ ಇದ್ದೀರಿ ಕಾಣ್ತದ. ಮುಂಜಾನಿನೂ ಕಾಣಂಗಿಲ್ಲ, ಸಂಜಿಮುಂದೂ ಕಾಣಂಗಿಲ್ಲ. ರೂಮ್ ಏನಾರ ಬದ್ಲಿ ಮಾಡೀರೇನ್ ಮತ್ತ?"


"ಇಲ್ರೀ, ಊರ್ಕಡೀಗೆ ಹೋಗಿದ್ನಾ.."


"ಮನ್ಯಾಗ ಎಲ್ರೂ ಆರಾಮಿದಾರಲ್ರೀ ಮತ್ತ? ಇಲ್ಲಾ... ಹೋಳ್ಗೀ ಊಟ ಏನಾದ್ರೂ ಹಾಕಸ್ತೀರೇನಪ್ಪ ಮತ್ತ?"


"ಅದನ್ನೇನ್ ಕೇಳ್ತೀರಿ.. ಭಾರಿ ದೊಡ್ಡ್ ಕಥಿನ ಅದ ಅದು. ನಿಮ್ ಪುಸ್ತಕಾನ ಚೀಲಕ್ಹಾಕಿ ಕುಂದರ್ರೀ ಮೊದ್ಲು. ನಾ ಹೇಳ್ತೀನಂತ.."


"ಶುರು ಹಚ್ಕೊಳ್ರೀ ನಿಮ್ ಕತಿನ.. ಮಳಿ ಬಂದ್ ನಿಂತದ. ಕಡೀಮಿ ಅಂದ್ರೂ ಎರಡೂವರಿ ತಾಸಾಗ್ತದ ಮನಿ ಮುಟ್ಲಿಕ್ಕ"


"ಬೇಸ್ತ್ವಾರ ಮನಿಗೆ ಫೋನ್ ಹಚ್ಚಿದ್ನಾ ನಮ್ಮಾವಾರು ಫೋನ್ ತಕ್ಕೊಂಡ್ರೀ.. ಎರಡ್ ದಿನ ಸೂಟಿ ತಗೊಂಡ್ ಬಾರ್ಪಾ ಊರಿಗೆ, ಹಿಂಗೆ ಕೆಲ್ಸದ ಅಂದ್ರೀ.. ನಂಗೂ ಈ ಕೆಲ್ಸಬೊಗ್ಸಿ, ಆ ಬಾಸು ಎಲ್ಲ ಸಾಕಾಗಿತ್ತಾ, ಸಿಕ್ ಲೀವ್ ಬೇರೆ ಬೇನಾಮಿ ಬಿದ್ದಿದ್ವಲ್ರೀ, ಅವ್ನೇ ಪ್ಲಾನ್ ಮಾಡ್ಕೊಂಡು ಹೊರೆಟ್ನಾ.."

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.6 (11 votes)
To prevent automated spam submissions leave this field empty.

ಅರ್ಥ

ಭಾರತದ ಸಾಮಾನ್ಯ ಕುಟುಂಬಗಳಲ್ಲಿ ಆರ್ಥಿಕ ಕಾರಣಗಳಿಂದ ಹುಟ್ಟುತ್ತಿರುವ ಸಣ್ಣ ಜಗಳಗಳು ಮನೆಯಲ್ಲಿರುವ ಮಕ್ಕಳ ಮನಸ್ಸುಗಳಲ್ಲಿ ಗೊಂದಲಗಳನ್ನು ಏಳಿಸುತ್ತಿವೆ. ಮನೆಯಲ್ಲಿ ನೆಮ್ಮದಿ ಕಾಣದ ಮಕ್ಕಳು ಹಿಂಸೆಯಲ್ಲಿ ಆನಂದ ಕಾಣುವಂತಹ ಸ್ಥಿತಿಯುಂಟಾಗುತ್ತಿದೆ. ಇದರಿಂದಾಗಿ ನಮ್ಮ ಯುವಜನಾಂಗವು ಆತಂಕವಾದ ಕಡೆಗೆ ಅಥವಾ ಕೋಮುವಾದಿತ್ವ ಅಥವಾ ಮೂಲಭೂತವಾದಿತ್ವದ ಕಡೆಗೆ ತಿರುಗುತ್ತಿದ್ದಾರೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹರಟೆಯೊ೦ದು ತೆರೆದಿಟ್ಟ ಚಿತ್ರಣಗಳು...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.6 (5 votes)
To prevent automated spam submissions leave this field empty.

Pages

Subscribe to RSS - vinutha.mv ರವರ ಬ್ಲಾಗ್