ಶ್ರಾವ್ಯ (ಆಡಿಯೋ) - Podcasts

ಸಂಪದ ಶ್ರಾವ್ಯ, ೧೩ನೇ ಸಂಚಿಕೆ; ನಮ್ಮೊಂದಿಗೆ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ

ಪ್ರಿಯ ಸಂಪದಿಗರೇ,

ಕನ್ನಡದ ಬಹುಮುಖ್ಯ ಕವಿ ಎಚ್.ಎಸ್.ವೆಂಕಟೇಶ ಮೂರ್ತಿಯವರೊಂದಿಗೆ ಸಂಪದ ತಂಡ ನಡೆಸಿದ ಸಂದರ್ಶನ ಪಾಡ್ ಕಾಸ್ಟ್ ರೂಪದಲ್ಲಿ ನಿಮ್ಮ ಮುಂದಿದೆ. ತುಂಬ ದಿನಗಳ ಹಿಂದೆಯೇ ಸಂದರ್ಶನ ನಡೆಸಿದ್ದೆವಾದರೂ ಕಾರಣಾಂತರಗಳಿಂದ ಪ್ರಕಟಣೆ ತೀರ ತಡವಾಯಿತು.

ಕೆಳಗೆ ನೀಡಿರುವ ಲಿಂಕು ಬಳಸಿ ಪಾಡ್ ಕಾಸ್ಟನ್ನು ಡೌನ್ ಲೋಡ್ ಮಾಡಿಕೊಂಡು ಕೇಳಬಹುದು ಇಲ್ಲವೇ ಸಂಪದದಲ್ಲೇ ಕೇಳಬಹುದು.

- ಸಂಪದ ನಿರ್ವಹಣೆ ತಂಡ

ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಅವರು ನವ್ಯೋತ್ತರ ಕನ್ನಡ ಕಾವ್ಯದ ಪ್ರಮುಖ ವಾಹಿನಿಗಳಲ್ಲಿ ಒಂದು ಪ್ರಮುಖ ಧಾರೆಯಾಗಿದ್ದಾರೆ. ಅವರ ಕಾವ್ಯ ಮಾರ್ಗ ಕೇವಲ ತೀವ್ರತೆಯೊಂದನ್ನೇ ಅಲ್ಲದೇ ಪ್ರಮಾಣದ ಕಾರಣದಿಂದಲೂ ಮಹತ್ವದ್ದಾಗಿದೆ. ೧೯೬೮ರಲ್ಲಿ ತಮ್ಮ ಮೊದಲ ಕವನ ಸಂಕಲನ ‘ಪರಿವೃತ್ತ’  ಪ್ರಕಟಿಸಿದ ಅವರು ೨೦೦೮ರಲ್ಲಿ ಉತ್ತರಾಯಣ ಸಂಕಲನ ಪ್ರಕಟವಾದಾಗ ಅದು ಅವರ ೬೪ನೇ ಕೃತಿಯಾಗಿತ್ತು ಅಂದರೆ ಅವರ ಒಟ್ಟೂ ಬರವಣಿಗೆಯ ಗಾತ್ರ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಪರಂಪರೆಯ ಸತ್ವದೊಡನೆ ಸ್ವಂತದ ಅನುಭವಗಳನ್ನು ಅನುಸಂಧಾನ ಮಾಡುತ್ತ ಪ್ರಾಚೀನ ಮತ್ತು ವರ್ತಮಾನಗಳ ಸಹಯೋಗವನ್ನು ಅವರು ಸಾಧಿಸಿದ್ದಾರೆ. ನಾಟಕಗಳನ್ನು, ಮಕ್ಕಳ ಕಾದಂಬರಿ ಮತ್ತು ವಿಮರ್ಶೆಗಳನ್ನು ಹಾಗೇ ಕವನ ಸಂಕಲನಗಳನ್ನು ಕಾಲದಿಂದ ಕಾಲಕ್ಕೆ ಪ್ರಕಟಿಸುತ್ತ ಬಂದಿರುವ ಎಚೆಸ್ವಿ, ಆ ಮುಖೇನ ಎಂಬ ಅಂಕಣಬರಹವನ್ನು ಉದಯವಾಣಿಗೆ ಬರೆಯುತ್ತಿದ್ದುದನ್ನೂ ಮರೆಯುವ ಹಾಗಿಲ್ಲ. ಚಿನ್ನಾರಿ ಮುತ್ತ ಚನಚಿತ್ರ ಕೂಡ ಅವರ ಕೊಡುಗೆಯೇ. ಭಾಷೆಯ ಲವಲವಿಕೆ, ಜೀವಂತಿಕೆ, ಸಹಜೋಲ್ಲಾಸ, ಚಿತ್ರಕಶಕ್ತಿ, ಲಾಲಿತ್ಯ, ವಸ್ತು ನಿರ್ವಹಣೆಯ ನಾವೀನ್ಯ, ಹೀಗೆ ಅವರ ಕಾವ್ಯೋದ್ಯೋಗವನ್ನು ಬೇರೆ ಬೇರೆ ನೆಲೆಗಳಿಂದ ವಿಷ್ಲೇಷಿಸಬಹುದಾದರೂ, ಅವರು ತಮ್ಮ ಸಂಕಲನಗಳ ಮೂಲಕ ಹುಡುಕುತ್ತಿರುವ ಹೊಸಹಾದಿಯನ್ನು ಗಮನಿಸುವುದೇ ಒಂದು ಸೊಗಸು.

field_vote: 
Average: 4.6 (5 votes)
To prevent automated spam submissions leave this field empty.
ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ...

field_vote: 
Average: 4 (8 votes)
To prevent automated spam submissions leave this field empty.

ಬೆಳಗಾವಿ ಮತ್ತು ಗಡಿಯಲ್ಲಿರುವ ಕೆಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ನಿರ್ಣಯವೊಂದನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಿತ್ತು. ಇದಕ್ಕೆ ಕರ್ನಾಟಕಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ.(ಈಗ ಕರ್ನಾಟಕ ಸರಕಾರ ಬೆಳಗಾವಿ ಮಹಾನಗರ ಪಾಲಿಕೆಯನ್ನು ರದ್ದು ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿದೆ.) ಇತ್ತೀಚೆಗೆ ಬೆಳಗಾವಿ ನಗರ ಪಾಲಿಕೆಯ ಮೇಯರ್ ವಿಜಯ್ ಪಾಂಡುರಂಗ ಮೋರೆ ಬೆಂಗಳೂರಿಗೆ ಬಂದು ಶಾಸಕರ ಭವನದಲ್ಲಿ ಇಳಿದುಕೊಂಡಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 'ಮಿಂಚಿನ ದಾಳಿ' ನಡೆಸಿ ವಿಜಯ್ ಮೋರೆಯವರ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿ ತಮ್ಮ ಕನ್ನಡಾಭಿಮಾನವನ್ನು ತೋರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಹಿಂಸಾತ್ಮಕ ಪ್ರತಿಭಟನೆ ಈಗ ಬಿಸಿಯೇರಿದ ಚರ್ಚೆಗಳಿಗೆ ಕಾರಣವಾಗಿದೆ.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

ಸಂಪದ ಶ್ರಾವ್ಯ, ೧೪ನೇ ಸಂಚಿಕೆ: ವೈದೇಹಿಯವರೊಂದಿಗೆ...

ವೈದೇಹಿಯವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ಸಂದರ್ಭದಲ್ಲಿ ಸಂಪದ ತಂಡ ಅವರನ್ನು ಸಂದರ್ಶಿಸಿತ್ತು. ಅದಾಗಿ ಈಗಾಗಲೇ ಎರಡು ವರ್ಷಗಳು ಸಂದಿವೆ. ಕಾರಣಾಂತರಗಳಿಂದ ಪಾಡ್ ಕಾಸ್ಟ್ ಪ್ರಕಟಿಸಲು ಸಾಧ್ಯವಾಗಿರಲಿಲ್ಲ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿನ ವೈದೇಹಿಯವರ 'ಇರುವಂತಿಗೆ' ಮನೆಯಲ್ಲಿ ನಡೆಸಿದ ಆಪ್ತ ಮಾತುಕತೆ ಈಗ ನಿಮ್ಮ ಮುಂದಿದೆ.

ರಳ ವ್ಯಕ್ತಿತ್ವದ ವೈದೇಹಿಯವರು ತಮ್ಮ ಸಾಹಿತ್ಯ ಜೀವನ ರೂಪುಗೊಂಡ ಬಗೆ, ತಮ್ಮ ಬಾಲ್ಯ, ಯೌವನದ ದಿನಗಳ ನೆನಪುಗಳನ್ನು ಸಂಪದದೊಂದಿಗೆ ಹಂಚಿಕೊಂಡಿದ್ದಾರೆ. ಸಂಪದದ ಪರವಾಗಿ ಹರಿಪ್ರಸಾದ್ ನಾಡಿಗ್, ಸುಮಾ ನಾಡಿಗ್, ಉದಯವಾಣಿಯ ಉಪಸಂಪಾದಕ ಚಂದ್ರಶೇಖರ ಮಂಡೆಕೋಲು, ಉಡುಪಿಯ ಕನ್ನಡ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕ ಪ್ರತಾಪಚಂದ್ರಶೆಟ್ಟಿ ಹಳ್ನಾಡು ಮತ್ತು ಸಾತ್ವಿಕ್ ಎನ್ ವಿ ವೈದೇಹಿಯವರ ಮನೆಗೆ ಭೇಟಿ ನೀಡಿದ್ದರು. ಎಲ್ಲರನ್ನು ಆತ್ಮೀಯತೆಯಿಂದ ಸ್ವಾಗತಿಸಿದ ವೈದೇಹಿಯವರೊಂದಿಗೆ ಅವರ ಪತಿ ಶ್ರೀನಿವಾಸಮೂರ್ತಿ ಕೂಡ ಇದ್ದರು. ಅಂದು ಭೇಟಿ ಕೊಟ್ಟ ಎಲ್ಲರಿಗೂ ವೈದೇಹಿಯವರೇ ಖುದ್ದಾಗಿ ಒತ್ತು ಶಾವಿಗೆ ಸಿದ್ಧ ಪಡಿಸಿದ್ದು ವಿಶೇಷವಾಗಿತ್ತು. 

ಲೇಖನ ವರ್ಗ (Category): 

ಕಯ್ಯಾರ ಕಿಞ್ಞಣ್ಣ ರೈ

field_vote: 
Average: 3.9 (29 votes)
To prevent automated spam submissions leave this field empty.

ಓದುಗರೆ, ಸಂಪದ ಸಂದರ್ಶನಗಳ ಸರಣಿಯ ೧೨ನೇ ಸಂ‌ಚಿಕೆ ಇಗೋ ನಿಮ್ಮ ಮುಂದಿದೆ.

ಕಾಸರಗೋಡಿನ ಕನ್ನಡಪರ ಹೋರಾಟದಲ್ಲಿ ಕೇಳಿ ಬರುವ ಮೊದಲ ಹೆಸರು ಕಯ್ಯಾರ ಕಿಞ್ಞಣ್ಣ ರೈ. ಕಾಸರಗೋಡು ಜಿಲ್ಲೆಯು ಕರ್ನಾಟಕದ ಭಾಗವಾಗಿದ್ದ ಕಾಲದಿಂದಲೂ ತಮ್ಮ ಸಾಹಿತ್ಯ, ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡವರು. ಇಂತಹ ಕಯ್ಯಾರರಿಗೆ ತುಳು ಭಾಷೆ ಹೆತ್ತ ತಾಯಿಯಾದರೆ, ಕನ್ನಡ ಭಾಷೆ ಸಾಕುತಾಯಿ. ಕಯ್ಯಾರರು ತಮ್ಮನ್ನು ಬೆಳೆಸಿದ ಈ ಇಬ್ಬರು ತಾಯಂದಿರನ್ನು ಇಂದಿಗೂ ಸ್ಮರಿಸಿಕೊಳ್ಳುತ್ತಲೇ ಮಾತನ್ನು ಆರಂಭಿಸುತ್ತಾರೆ.

ಕಯ್ಯಾರ ಕಿಞ್ಞಣ್ಣ ರೈ - Kayyara-Kinyanna-Rai

ಬದಿಯಡ್ಕ ಸಮೀಪದ ಪೆರಡಾಲ ಎಂಬ ಗ್ರಾಮದಲ್ಲಿರುವ ಕವಿತಾ ಕುಟೀರದಲ್ಲಿ ಇವರ ವಾಸ. ೯೬ ರ ಪ್ರಾಯದಲ್ಲೂ ಜಿಗಿಯುವ ಜೀವನ ಉತ್ಸಾಹ. ಕಿಞ್ಞಣ್ಣ ಎಂದರೆ  ತುಳುವಿನಲ್ಲಿ ಕಿರಿಯವನು ಎಂದರ್ಥ. ಹೆಸರಿಗೆ ತಕ್ಕಂತೆ ಕಯ್ಯಾರರು ಬಹು ವಿಧೇಯ ವ್ಯಕ್ತಿತ್ವವುಳ್ಳ ಚೇತನ.

ಕನ್ನಡನಾಡಿನ ಭಾಗವಾಗಿದ್ದ ಕಾಸರಗೋಡು ಕೇರಳಕ್ಕೆ ಸೇರಿದಾಗ ಕನ್ನಡಿಗರನ್ನು ಸಂಘಟಿಸಿ ಹೋರಾಟ ಮಾಡಿದರೂ ಸಿಗದ ಯಶಸ್ಸು, ಅದರ ಹಿಂದಿನ ಹಲವು ಕಾರಣಗಳು, ಕರ್ನಾಟಕ ಸರ್ಕಾರ ಇದಕ್ಕಾಗಿ ಮಾಡಬೇಕಾದ ಕಾರ್ಯಗಳ ಕುರಿತ ಹಾಗೆ ಸಂಪದದೊಂದಿಗೆ ಮಾತನಾಡಿದ್ದಾರೆ. ಬನ್ನಿ ಈ ಹಿರಿಯರ ಅನುಭವ, ಹೋರಾಟದ ಬದುಕಿನ ಕುರಿತು ಅವರಿಂದಲೇ ಕೇಳಿ ತಿಳಿಯೋಣ. 

ಲೇಖನ ವರ್ಗ (Category): 

೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

field_vote: 
Average: 3.8 (11 votes)
To prevent automated spam submissions leave this field empty.
ನಾಗೇಶ ಹೆಗಡೆಯವರೊಂದಿಗೆ ಪ್ರಶಾಂತ ಪಂಡಿತ್

ವಿಜ್ಞಾನ, ಪತ್ರಿಕಾ ಮಾಧ್ಯಮ, ಪರಿಸರ ಹೋರಾಟ, ಸೃಜನಶೀಲ ಬರವಣಿಗೆ ಹೀಗೆ ಮೇಲ್ನೋಟಕ್ಕೆ ಒಂದಕ್ಕೊಂದು ಸಂಬಂಧವಿಲ್ಲದಂತೆ ತೋರುವ ಕಾರ್ಯಕ್ಷೇತ್ರಗಳಲ್ಲಿ ಕಳೆದ ಸುಮಾರು ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ನಾಗೇಶ ಹೆಗಡೆ ನಮ್ಮ ನಡುವಿನ ಅಪರೂಪದ ಚಿಂತಕ. ಅವರ ಬರಹಗಳನ್ನು ಓದುತ್ತಾ ಬೆಳೆದಿರುವ ನನಗೆ ಅವರು ಕನ್ನಡದ ಸಂದರ್ಭದಲ್ಲಿ ಶಿವರಾಮ ಕಾರಂತ, ಗೌರೀಶ ಕಾಯ್ಕಿಣಿ, ಮೂರ್ತಿರಾಯರ ವೈಚಾರಿಕ ಪರಂಪರೆಯ ಮುಂದುವರಿಕೆಯಾಗಿ ಕಾಣುತ್ತಾರೆ. ಆದರೆ ಈ ಹಿರಿಯರಂತೆ ಕತೆ, ಕಾವ್ಯ, ಕಾದಂಬರಿಗಳನ್ನು ಬರೆಯದ ನಾಗೇಶ ಹೆಗಡೆ ಸಾಹಿತ್ಯದ ಎಲ್ಲಾ ಪ್ರಕಾರಗಳ ಸತ್ವವನ್ನು ಹೀರಿ ಭಾಷೆಯ ಸೊಗಡನ್ನೂ ಶಕ್ತಿಯನ್ನೂ ವೈಜ್ಞಾನಿಕ ಬರಹಗಳಲ್ಲಿ ತಂದವರು. ವೈಚಾರಿಕ ಲೇಖನ, ವೈಜ್ಞಾನಿಕ ಪ್ರಬಂಧಗಳನ್ನು ಹೀಗೂ ಬರೆಯಬಹುದು ಎಂದು ತೋರಿಸಿದವರು. ಗಂಭೀರ ವಿಷಯಗಳನ್ನು ಸರಳಗೊಳಿಸದೇ ಸರಳವಾಗಿ ಬರೆದವರು.

ಅವರ ಪ್ರಬಂಧವೊಂದು ನಮಗೆ ಹನ್ನೆರಡನೇ ತರಗತಿಯಲ್ಲಿ ಕನ್ನಡದ ಪಠ್ಯವಾಗಿತ್ತು. ಅದರಲ್ಲಿ ಚೆರ್ನೋಬಿಲ್ ಅಣು ದುರಂತ, ಭೋಪಾಲ್ ವಿಷಾನಿಲ ದುರಂತಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತಾ ಆಧುನಿಕ ಅಭಿವೃದ್ಧಿ ಮಾದರಿಗಳ ಸಾಧಕ ಬಾಧಕಗಳನ್ನು ಚರ್ಚಿಸಿದ್ದು ನನಗಿನ್ನೂ ಚೆನ್ನಾಗಿ ನೆನಪಿದೆ. ನಿಧಾನವಾಗಿ ಚಳುವಳಿಗಳೆಲ್ಲಾ ಕಾವು ಕಳೆದುಕೊಳ್ಳತೊಡಗಿದ್ದು, ನೋಡನೋಡುತ್ತಲೇ ಗ್ಲೋಬಲ್ ಎಕಾನಮಿ, ಡೆವಲಪ್ಮೆಂಟು ಇತ್ಯಾದಿಗಳು ನಮ್ಮನ್ನು ಆವರಿಸತೊಡಗಿದ್ದು ಶಾಪಿಂಗ್ ಸಂಸ್ಕೃತಿ ಇನ್ನಿಲ್ಲದಂತೆ ಹಬ್ಬುತ್ತಿರುವುದು, ಇವನ್ನೆಲ್ಲಾ ಹೇಗೆ ಅರ್ಥಮಾಡಿಕೊಳ್ಳುವುದು, ಹೇಗೆ ನಿಭಾಯಿಸುವುದು ಎಂದು ಗೊಂದಲಕ್ಕೊಳಗಾದಾಗಲೆಲ್ಲ ನನಗೆ ಅವರ ಅಂಕಣ ಬರಹಗಳು ಒಮ್ಮೊಮ್ಮೆ ಹೊಸದಾರಿಯನ್ನು ತೋರಿವೆ ಕೆಲವೊಮ್ಮೆ ಇನ್ನಷ್ಟು ಬೆಚ್ಚಿಬೀಳಿಸಿವೆ. ಅವರನ್ನು ಹಲವು ವರ್ಷಗಳಿಂದ ತಪ್ಪದೇ ಓದುತ್ತಾ ಬಂದಿರುವ ನಾನು ಬಹಳ ದಿನದಿಂದ ಈ ಎಲ್ಲಾ ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚಿಸಬೇಕು ಎಂದುಕೊಳ್ಳುತ್ತಿದ್ದೆ. ಅಷ್ಟರಲ್ಲಿ ಹರಿ ಪಾಡ್ಕಾಸ್ಟಿನ ಐಡಿಯಾ ಮುಂದಿಟ್ಟರು. ಮೂರ್ನಾಲ್ಕು ತಿಂಗಳಿಂದ ಆಗ ಹೋಗೋಣ, ಈಗ ಹೋಗೋಣ ಎನ್ನುತ್ತಾ ಕೊನೆಗೂ ಜನವರಿಯ ಮೊದಲ ಭಾನುವಾರ ಮುಂಜಾನೆ ಅವರ ಹಳ್ಳಿಗೆ ಹೊರಟೇಬಿಟ್ಟೆವು. ಮಧ್ಯಾಹ್ನ ಅವರ ಮನೆ ತಲುಪಿದಾಗ ಸ್ವಾಗತಿಸಿದ್ದು ಹಕ್ಕಿಗಳ ಚಿಲಿಪಿಲಿ, ನಾಯಿಯ ಬೌಬೌ, ತಂಪಾದ ಗಾಳಿ. ನಾವು ಬೆಂಗಳೂರಿನ ಹೊರವಲಯದಲ್ಲೇ ಇದ್ದೇವೆಯೇ ಎಂದು ಆಶ್ಚರ್ಯಪಡುವಂತೆ ಇತ್ತು ಅಲ್ಲಿಯ ವಾತಾವರಣ. ಅವರ “ಮೈತ್ರಿ” ಫಾರಂನಲ್ಲಿ ಕುಳಿತು ನಾವು informal ಆಗಿ ಚರ್ಚಿಸಿದ್ದು ಇದೀಗ ನಿಮ್ಮ ಮುಂದಿದೆ.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

೯ನೇ ಸಂಚಿಕೆ: ಕಥೆಗಾರ ವಿವೇಕ ಶಾನಭಾಗರೊಂದಿಗೆ - ಸಂದರ್ಶನ: ನರೇಂದ್ರ ಪೈ

field_vote: 
Average: 3.7 (3 votes)
To prevent automated spam submissions leave this field empty.

Podcast with Vivek Shanbag by Narendra Pai

ಲೇಖನ ವರ್ಗ (Category): 

ಜಿ.ಟಿ.ನಾರಾಯಣರಾವ್ ಸಂದರ್ಶನ (ಆಡಿಯೋ, ವಿಡಿಯೋ)

field_vote: 
Average: 5 (1 vote)
To prevent automated spam submissions leave this field empty.
[:video/1|ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ]

 

ಜಿ.ಟಿ. ನಾರಾಯಣರಾವ್ ಅಧ್ಯಯನ ಕೊಠಡಿಯಲ್ಲಿ

ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಜಿ.ಟಿ.ನಾರಾಯಣರಾವ್‌ ಅವರದ್ದೊಂದು ಪಾಡ್‌ಕ್ಯಾಸ್ಟ್‌ ಮಾಡಬೇಕು ಎಂಬ ಯೋಜನೆ ಬಹಳ ಹಳೆಯದು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ನಡುವೆ ಹರಿಪ್ರಸಾದ್‌ ನಾಡಿಗರು ಪಾಡ್‌ಕ್ಯಾಸ್ಟ್‌ ಜತೆ ವಿಡಿಯೋ ಕೂಡಾ ಹಾಕಬಹುದು ಎನ್ನುತ್ತಿದ್ದರು. ಇದಕ್ಕೆ ಅಗತ್ಯವಿರುವ ಕ್ಯಾಮೆರಾ, ಧ್ವನಿಗ್ರಹಣ, ಆಮೇಲೆ ಸಂಕಲನವನ್ನೆಲ್ಲಾ ಯಾರು ಮಾಡುವುದು ಎಂಬುದು ನಮ್ಮೆದುರು ಇದ್ದ ದೊಡ್ಡ ಪ್ರಶ್ನೆಯಾಗಿತ್ತು.

ಗೆಳೆಯ ಅಭಯಸಿಂಹ ವೃತ್ತಿಯ ಕಾರಣಕ್ಕೆ ಬೆಂಗಳೂರಿಗೆ ವಾಸ್ತವ್ಯವನ್ನು ಬದಲಾಯಿಸಿದ್ದೇ ನನ್ನೆದುರು ಇದ್ದ ಎಲ್ಲ ಪ್ರಶ್ನೆಗಳಿಗೂ ಉತ್ತರ ದೊರೆತಿಬಿಟ್ಟಿತು. ಅದರ ಪರಿಣಾಮವಾಗಿ ಈ ವಿಡಿಯೋ ಹಾಗೂ ಪಾಡ್‌ಕ್ಯಾಸ್ಟ್‌ ನಿಮ್ಮ ಮುಂದಿದೆ.

ಜಿ.ಟಿ.ಎನ್‌. ನನಗೆ ಪುಸ್ತಕಗಳ ಮೂಲಕ ಬಾಲ್ಯದಲ್ಲೇ ಪರಿಚಿತರು. ನಿಮ್ಮಲ್ಲನೇಕರಿಗೂ ಅವರು ಹೀಗೆ ಪರಿಚಿತರಾಗಿರಬಹುದು. ಹತ್ತು ಹನ್ನೆರಡು ವರ್ಷಗಳಿಂದ ಅವರನ್ನು ವೈಯಕ್ತಿಕವಾಗಿ ಪರಿಚಯಿಸಿಕೊಳ್ಳಲೂ ಸಾಧ್ಯವಾಯಿತು. `ನುಡಿದಂತೆ ನಡೆಯುವುದು' ಎಂಬುದಕ್ಕೆ ಸಾಕ್ಷಿಯಾಗುವಂಥ ಬದುಕು ಜಿ.ಟಿ.ಎನ್‌. ಅವರದ್ದು. ವೈಜ್ಞಾನಿಕ ಮನೋಧರ್ಮ ಎಂಬುದು ಕೇವಲ ಅವರ ಬರೆವಣಿಗೆಗೆ ಸೀಮಿತವಾಗಿರುವ ವಿಷಯವಲ್ಲ. ಅದು ಅವರ ಬದುಕೂ ಕೂಡಾ.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

Podcastingನ ೭ನೇ ಸಂಚಿಕೆ: ಕೆ ಎಸ್ ನಿಸಾರ್ ಅಹ್ಮದ್ ರವರೊಂದಿಗೆ

field_vote: 
Average: 4.4 (7 votes)
To prevent automated spam submissions leave this field empty.

ಮುನ್ನುಡಿ: ಒಮ್ಮೆ ಅನಂತಮೂರ್ತಿಯವರು "ಇಸ್ಮಾಯಿಲ್ ನಂತೆ ಸಂದರ್ಶನ ಬೇರೊಬ್ಬರು ಮಾಡಿದ್ದಿಲ್ಲ" ಎಂದಿದ್ದರು. ನಾವುಗಳು ನಸುನಕ್ಕು ಸುಮ್ಮನಾಗಿದ್ದೆವು. ಈಗ ಸಂಪದದ ೭ನೇ podcast ಹೊರತರುತ್ತಿರುವ ಸಮಯದಲ್ಲಿ ಪ್ರತಿ ಬಾರಿಯೂ "ಬಹಳ ಒಳ್ಳೆಯ ಪ್ರಶ್ನೆ" ಎಂದು ಶಹಬ್ಬಾಸ್ ಎನಿಸಿಕೊಳ್ಳುವ ಇಸ್ಮಾಯಿಲ್ ಬಗ್ಗೆ ಅನಂತಮೂರ್ತಿಯವರ ಆ ಮಾತು ಉತ್ಪ್ರೇಕ್ಷೆಯೆಂದನಿಸದು. ೭ನೇ ಕಂತು ಸಂಪದವನ್ನು ಸಂಪದವಾಗಿಸಿದ ಇಸ್ಮಾಯಿಲ್, ಓ ಎಲ್ ಎನ್, ಹಾಗೂ ಉಳಿದೆಲ್ಲ ಸ್ನೇಹಿತರಿಗೆ ಮುಡುಪು.

ಗಮನಿಸಿ: ಈ ಸಂಚಿಕೆಯಿಂದ ಪ್ರಾರಂಭಿಸಿ ಸಂದರ್ಶನದ ಆಡಿಯೋ [:http://en.wikipedia.org/wiki/Ogg_Vorbis|ogg vorbis] ಫಾರ್ಮ್ಯಾಟಿನಲ್ಲಿ ಕೂಡ ಲಭ್ಯ. ಈ ಸಂದರ್ಶನದ [:http://sampada.net/article/nisar_interview|ಲಿಖಿತ ರೂಪ ಕೂಡ ಲಭ್ಯವಿದೆ]. ಬರೆಹ ರೂಪಕ್ಕೆ ಇಳಿಸಿದ್ದು. [:http://sampada.net/user/suresh_k|ಸುರೇಶ್ ಕೆ] - ಹರಿ ಪ್ರಸಾದ್ ನಾಡಿಗ್

seperator
Nisar Ahmed

ಹರಿಪ್ರಸಾದ್ ಮತ್ತೊಂದು ಪಾಡ್ ಕ್ಯಾಸ್ಟಿಂಗ್ ಕೂಡಾ ನನ್ನಿಂದಲೇ ಮಾಡಿಸಿಬಿಟ್ಟರು! ಈ ಬಾರಿ ಅವರು ನನ್ನನ್ನು ಸ್ವಾವಲಂಬಿಯಾಗಲು ಪ್ರೇರಪಿಸಿದರು. ಈ ಬಾರಿ ಸಂದರ್ಶಕನೂ ನಾನೇ, ಧ್ವನಿಮುದ್ರಣ ತಂತ್ರಜ್ಞನೂ ನಾನೇ. ದೇವರು ದೊಡ್ಡವನನು (ಅವನಿದ್ದರೆ!). ಜತೆಗೆ ನನ್ನ ಗೆಳೆಯ ಹಾಗೂ ಉದಯವಾಣಿಯಲ್ಲಿ ನನ್ನ ಸಹೋದ್ಯೋಗಿ ಸುರೇಶ್ ಕೆ. ಇದ್ದರು. ನಮ್ಮ ಛಾಯಾಗ್ರಾಹಕ ಡಿ.ಸಿ.ನಾಗೇಶ್ ಇದ್ದರು. ಇಷ್ಟು ಸಾಲದು ಎಂಬಂತೆ ಈ ಟಿವಿ ಕನ್ನಡದಲ್ಲಿ ದುಡಿಯುತ್ತಿರುವ ನಮ್ಮ ಗೆಳೆಯರ ಬಳಗದ ಸದಸ್ಯೆ ಜ್ಯೋತಿ ಇರ್ವತ್ತೂರು ಕೂಡಾ ಜತೆಗೂಡಿದ್ದರು. ಈ ಪಾಡ್ ಕ್ಯಾಸ್ಟಿಂಗ್ ನ ಬಗ್ಗೆ ನಾವ್ಯಾರೂ ಯೋಚಿಸಿರಲಿಲ್ಲ. ಶನಿವಾರ ಬೆಳಿಗ್ಗೆ (16-12-2006) 73ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಡಾ.ಕೆ.ಎಸ್. ನಿಸಾರ್ ಅಹಮದ್ ಅವರನ್ನು "ಉದಯವಾಣಿ"ಗಾಗಿ ಸಂದರ್ಶಿಸುವ ಉದ್ದೇಶದಿಂದ ನಾನು ಮತ್ತು ಸುರೇಶ್ ಅವರ ಮನೆಗೆ ಹೊರಟೆವು. ಪದ್ಮನಾಭ ನಗರದಲ್ಲಿರುವ ನಿಸಾರ್ ಅವರ ಮನೆಗೆ ಹೋಗುವ ಮುನ್ನ ದಾರಿ ಕೇಳಲು ಛಾಯಾಗ್ರಾಹಕ ಡಿ.ಸಿ ನಾಗೇಶ್ ಅವರಿಗೆ ಫೋನಾಯಿಸಿದರೆ ಅವರು ಇಲ್ಲೇ ಹತ್ತಿರ ಮೊದಲು ನಮ್ಮ ಮನೆಗೆ ಬನ್ನಿ ಎಂದರು. ನ್ಯಾಷನಲ್ ಕಾಲೇಜು ಫ್ಲೈ ಓವರ್ ಕೆಳಗಿರುವ ಅವನ ಮನೆಯಲ್ಲಿ ಒಳ್ಳೆಯ ಕಾಫೀ ಸಮಾರಾಧನೆಯ ಬಳಿಕೆ ಹೊಸ ಹೊಸ ಐಡಿಯಾಗಳು ಹೊಳೆಯತೊಡಗಿದವು. ಮೊದಲನೆಯದ್ದು ನಿಸಾರ್ ಅವರ ಹೊಸ ಭಂಗಿಯ ಫೋಟೋಗಳನ್ನು ತೆಗೆಸುವುದು. ಈ ಕುರಿತು ಚರ್ಚಿಸುತ್ತಿರುವಾಗಲೇ ಸಂಪದಕ್ಕೊಂದು ಪಾಡ್ ಕ್ಯಾಸ್ಟಿಂಗ್ ಯಾಕಾಗಬಾರದು ಎನಿಸಿತು. ತಕ್ಷಣ ಹರಿಪ್ರಸಾದ್ ಅವರಿಗೆ ಫೋನಾಯಿಸಿದರೆ ಅವರು ಪ್ರಸ್ತಾಪವನ್ನು ಒಪ್ಪಿದರು. ಆದರೆ "ನಾನು ನಿಮಗೆ ಲ್ಯಾಪ್ ಟಾಪ್ ಮತ್ತು ಮೈಕ್ ಕೊಡುತ್ತೇನೆ. ನನಗೆ ಸಂದರ್ಶನಕ್ಕೆ ಬರಲು ಸಾಧ್ಯವಿಲ್ಲ" ಎಂದರು.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

Podcastingನ 6ನೇ ಸಂಚಿಕೆ: ಟಿ.ಎನ್. ಸೀತಾರಾಂ ಜತೆ ಸಂದರ್ಶನ

field_vote: 
Average: 4.8 (6 votes)
To prevent automated spam submissions leave this field empty.

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಜನಪ್ರಿಯ, ಸೃಜನಶೀಲ ನಿರ್ದೇಶಕ ಟಿ ಎನ್ ಸೀತಾರಾಂರವರ ಸಂದರ್ಶನ. ರಂಗಭೂಮಿ ಹಿನ್ನೆಲೆಯಿಂದ ಬಂದ ಸ್ಪಷ್ಟ ರಾಜಕೀಯ ನಿಲುವುಗಳನ್ನು ಹೊಂದಿರುವ ಸೀತಾರಾಂ ಒಂದು ಸುಖೀ ಸಮಾಜದ ಕನಸನ್ನು ಹೊತ್ತವರು. ಅವರ ಈ ಆದರ್ಶವೇ ಅವರ ಕೃತಿಗಳ ಸಾಮಾಜಿಕ ಕಾಳಜಿಗಳ ಪ್ರೇರಣೆ. ರಂಗಭೂಮಿಯಲ್ಲಿ ತಮ್ಮ ಪ್ರತಿಭೆಯನ್ನು ಮೆರೆದ ಅವರು ಮಾಯಾಮೃಗ, ಮನ್ವಂತರಗಳಂಥ ಯಶಸ್ವೀ ಧಾರಾವಾಹಿಗಳಲ್ಲಿ ಕಿರುತೆರೆಗೂ ಸೀತಾರಾಂ ಶೈಲಿಯನ್ನು ಪರಿಚಿಯಿಸಿದರು. ಗಂಭೀರ ರಂಗಪ್ರಯೋಗಗಳಲ್ಲಿ ತೊಡಗಿಕೊಂಡವರು ಜನಪ್ರಿಯ ಮಾಧ್ಯಮಗಳನ್ನು ಕೈಗೆತ್ತಿಕೊಂಡಾಗ ಸೋಲುತ್ತಾರೆ ಎಂಬುದನ್ನೂ ಸೀತಾರಾಂ ಸುಳ್ಳು ಮಾಡಿದರು. ಮೊದಲೆರಡು ಧಾರಾವಾಹಿಗಳ ಯಶಸ್ಸಿನಾಚೆಗೆ ಅವರ `ಮುಕ್ತ' ಸಾಗಿದೆ. ಮೆಗಾ ಧಾರಾವಾಹಿಗಳ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿರುವ ಅವರು ಇತ್ತೀಚೆಗೆ ಎರಡು ಚಲನಚಿತ್ರಗಳನ್ನು ಪ್ರಕಟಿಸಿದ್ದಾರೆ. ಈ‌ ಸಮಯದಲ್ಲಿ ಸಂಪದದ ಕೆಲ ಪ್ರಮುಖ ಸದಸ್ಯರು ಸೀತಾರಾಂರವರ ಸಂದರ್ಶನ ಮಾಡಬೇಕು ಎಂದು ಬಹಳ ಹಿಂದೆಯೇ ಆಲೋಚಿಸಿದ್ದರು, ಆದರೆ ಸಾಧ್ಯವಾಗಿದ್ದು ಹಲವು ತಿಂಗಳುಗಳ ನಂತರವೇ.

 

ಪ್ರತೀ ಬಾರಿಯೂ ಸಂದರ್ಶನ ನಡೆಸಲು ಹೋಗುವವರಷ್ಟೇ ಪ್ರಶ್ನೆಗಳನ್ನು ಸಿದ್ಧ ಪಡಿಸಿಕೊಂಡು ಕೇಳುತ್ತಿದ್ದರು. ಈ ಬಾರಿ ಸಂಪದ ಬಳಗದ ಸದಸ್ಯರಿಂದ ಪ್ರಶ್ನೆಗಳನ್ನು ಆಹ್ವಾನಿಸಿ ಅವುಗಳಿಗೂ ಉತ್ತರ ಪಡೆಯಲು ಪ್ರಯತ್ನಿಸಿದ್ದೇವೆ. ಸಮಯದ ಅಭಾವ ಮುಂತಾದ ಕಾರಣಗಳಿಂದ ನಿರೀಕ್ಷಿತ ಮಟ್ಟದಲ್ಲಿ ಈ ಪ್ರಯತ್ನ ಯಶಸ್ವಿಯಾಗಲಿಲ್ಲ. ಆದರೆ ನಮ್ಮ ಮಿತಿಯೊಳಗೆ ಒಳ್ಳೆಯದನ್ನು ನೀಡುವ ನಮ್ಮ ಪ್ರಯತ್ನ ವಿಫಲವಾಗಿಲ್ಲ ಎನಿಸುತ್ತಿದೆ. ಇದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ನೀವೇ ತಿಳಿಸಬೇಕು.

> ಸಂದರ್ಶನದ ಆಡಿಯೋ ಕೇಳಲು ಇಲ್ಲಿ ಕ್ಲಿಕ್ ಮಾಡಿ (೧೯ MB). ಸಂದರ್ಶನದ ದಿನ ತೆಗೆದ ಕೆಲವು ಫೋಟೋಗಳು:

ಟಿ ಎನ್ ಸೀತಾರಾಂರವರ ಮನೆ ಹುಡುಕುವುದರಲ್ಲಿ ಬ್ಯುಸಿ ಟಿ ಎನ್ ಸೀತಾರಾಂT N Seetharam

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

ಐದನೆಯ ಸಂಚಿಕೆ - ಡಾ|| ಜಿ ಎಸ್ ಶಿವರುದ್ರಪ್ಪನವರೊಂದಿಗೆ

field_vote: 
Average: 5 (5 votes)
To prevent automated spam submissions leave this field empty.

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ. ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿಸಿಕೊಂಡಿರುವ, ನಮ್ಮ ಎಷ್ಟೋ ಭಾವನೆಗಳಿಗೆ ಮಾತನ್ನು ಕೊಟ್ಟಿರುವ ಬಹಳ ಮುಖ್ಯವಾದ ಕವಿ ಅವರು. ಮೊನ್ನೆ ತಾನೆ, ಅಂದರೆ ಫೆಬ್ರುವರಿ ೭ನೇ ತಾರೀಖು ನಮ್ಮ ಜಿ ಎಸ್ ಎಸ್ ಅವರಿಗೆ ೮೦ ವರ್ಷ ತುಂಬಿ, ಈಗ ೮೧ರ ಹರೆಯಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ನಡೆದ ಈ ಸಂದರ್ಶನದಲ್ಲಿ:

೧. ಕಾವ್ಯೋದ್ಯಮ ಶುರು ಮಾಡಿದ್ದು, ಸಾಹಿತ್ಯದಲ್ಲಿ ಆಸಕ್ತಿ ಹುಟ್ಟಿದ್ದು, ಬಾಲ್ಯ

೨. ಕಾವ್ಯಗಳಲ್ಲಿ 'ಕತ್ತಲು ಬೆಳಕು' ಈ ಸಂಗತಿಗಳ ಬಗ್ಗೆ ನಮ್ಮೊಡನೆ ಸಂವಾದ ನಡೆಸಿದ್ದಾರೆ.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

೪ನೆಯ ಸಂಚಿಕೆ: ಭಾಷಾ ತಜ್ಞ ಲಿಂಗದೇವರು ಹಳೆಮನೆಯವರೊಂದಿಗೆ

field_vote: 
Average: 3.8 (4 votes)
To prevent automated spam submissions leave this field empty.

ಸಂಪದದ ಗೆಳೆಯರಿಗಾಗಿ ಈ ಬಾರಿ ಲಿಂಗದೇವರು ಹಳೆಮನೆಯವರ ಸಂದರ್ಶನ.
ಶ್ರೀ ಹಳೆಮನೆಯವರು ೧೯೭೩ರಿಂದ ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥೆ, ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್ ನಲ್ಲಿ
ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡದ ಪ್ರಮುಖ ನಾಟಕಕಾರ, ಸಾಂಸ್ಕೃತಿ ಚಿಂತಕ, ಅಂಕಣಕಾರ, ಭಾಷಾ ತಜ್ಞ ಹಳೆಮನೆಯವರು ಈ ಸಂದರ್ಶನದಲ್ಲಿ
೧.ಕನ್ನಡ ಶಾಸ್ತ್ರೀಯ ಭಾಷೆ
೨. ಕನ್ನಡದ ರಂಗಭೂಮಿ
೩. ಅನ್ಯಭಾಷಿಕರಿಗಾಗಿ ಕನ್ನಡ ಕಲಿಸುವ ಕೆಲಸ
೪. ಜಾಗತೀಕರಣ
ಈ ಸಂಗತಿಗಳ ಬಗ್ಗೆ ನಮ್ಮೊಡನೆ ಸಂವಾದ ನಡೆಸಿದ್ದಾರೆ.
ಶ್ರೀ ಹಳೆಮನೆಯವರು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಹಾಮಾನಾ ಪ್ರಶಸ್ತಿ ಮತ್ತು ಕೆವಿ ಸುಬ್ಬಣ್ಣ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಭಾಷಾ ತಜ್ಞರಾಗಿ

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

ಎರಡನೆಯ ಸಂಚಿಕೆ - ಕಂಬಾರರೊಂದಿಗೆ

field_vote: 
Average: 3.7 (16 votes)
To prevent automated spam submissions leave this field empty.

"ಸಿರಿಸಂಪಿಗೆಯ ಕವಿ ಚಂದ್ರಶೇಖರ ಕಂಬಾರರನ್ನು ಕನ್ನಡಿಗರಿಗೆ ಪರಿಚಯಿಸುವ ಅಗತ್ಯವಿಲ್ಲ. ಜಾನಪದವನ್ನು ತಮ್ಮ ಕೃತಿಗಳ ಕಸುವಾಗಿಸಿಕೊಂಡು ಜನಭಾಷೆಯಲ್ಲಿ ಕಾವ್ಯ ರಚಿಸಿದವರು ಕಂಬಾರರು. ಕನ್ನಡ ವಿಶ್ವ ವಿದ್ಯಾಲಯದ ಸ್ಥಾಪಕ ಕುಲಪತಿಗಳಾಗಿ ವಿಶ್ವ ವಿದ್ಯಾಲಯವನ್ನು ಕಟ್ಟಿದ ಕಂಬಾರರು ಈಗ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರು. ಸಂಪದ ಬಳಗ ಇವರ ಸಂದರ್ಶನವನ್ನು ಪ್ರಸ್ತುತಪಡಿಸುತ್ತಿದೆ. ಚಂದ್ರಶೇಖರ ಕಂಬಾರರ ಸಂದರ್ಶನ ನಡೆಸಿಕೊಟ್ಟವರು:  ಎನ್.ಎ.ಎಂ.ಇಸ್ಮಾಯಿಲ್.

 > ಸಂದರ್ಶನದ ಆಡಿಯೋ ಕೇಳಲು ಇಲ್ಲಿ ಕ್ಲಿಕ್ ಮಾಡಿ. (18 MB) ಈ ಸಂದರ್ಶನದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನೂ, ಅದರಲ್ಲಿ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನೂ‌ ಸಂಪದದಲ್ಲಿ ಕಾಮೆಂಟ್ ಮೂಲಕ ನೀವು ಸೇರಿಸಬಹುದು.

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 

ಪೂರ್ಣ ಚಂದ್ರ ತೇಜಸ್ವಿಯವರೊಂದಿಗೆ ಕಳೆದ ಕೆಲವು ಘಳಿಗೆಗಳು

field_vote: 
Average: 3.9 (34 votes)
To prevent automated spam submissions leave this field empty.

K P Purnachandra Tejasvi

ನಮ್ಮೆಲ್ಲರನ್ನು ಕನ್ನಡ ಪುಸ್ತಕಗಳನ್ನೋದುವಂತೆ ಮಾಡಿದ ತೇಜಸ್ವಿ ಇನ್ನಿಲ್ಲ. ಇವರ ನೆನಪಿನಲ್ಲಿ ಇವರೊಂದಿಗೆ ನಾವು ನಡೆಸಿದ ಸಂದರ್ಶನದ podcast, ಅದರಲ್ಲಿನ ಅವರ ಮಾತುಗಳನ್ನು ಸ್ಮರಣ ಸಂಚಿಕೆಯಾಗಿ ಮತ್ತೆ ಸದಸ್ಯರ ಮುಂದಿಡುತ್ತಿದ್ದೇವೆ. ಈ ಸಂದರ್ಶನ ನಡೆಸಿದ್ದು ೨೦೦೫ರಲ್ಲಿ. ತೇಜಸ್ವಿಯವರೊಂದಿಗಿನ ಸಂದರ್ಶನ ಸಂಪದದ ಮೊದಲ podcast ಕೂಡ ಆಗಿತ್ತು.

ನಮಸ್ಕಾರ. ಸಂಪದದ ಸದಸ್ಯರೆಲ್ಲರಿಗೂ ದೀಪಾವಳಿ ಹಾಗೂ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸಂಪದದಲ್ಲಿ podcasting ಪ್ರಾರಂಭ ಮಾಡಬೇಕೆಂದು ನಮ್ಮಲ್ಲಿ ಹಲವರು ಬಯಸಿದ್ದೆವು. ಕೊನೆಗೊಮ್ಮೆ ಸಮಯ ಕೂಡಿ ಬಂದಿದೆ. ಈ ಮೊದಲ 'ಕಡಿಮೆ ಆಡಂಬರದ' ಸಂಚಿಕೆಯಲ್ಲಿ ನಮ್ಮೆಲ್ಲರಿಗೂ ಚಿರಪರಿಚಿತರಾದ ಸಾಹಿತಿ ಮತ್ತು ಚಿಂತಕ, ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಸಂದರ್ಶನವನ್ನು ನಿಮ್ಮ ಮುಂದಿಡಲು ಸಾಧ್ಯವಾಗಿರುವುದು ಸಂತಸದ ವಿಷಯ. > ಸಂದರ್ಶನದ ಆಡಿಯೋ ಕೇಳಲು ಇಲ್ಲಿ ಕ್ಲಿಕ್ ಮಾಡಿ. (14 MB)

ಸಂದರ್ಶನ ಇಲ್ಲೇ ಕೇಳಿ: 
ಲೇಖನ ವರ್ಗ (Category): 
Subscribe to ಶ್ರಾವ್ಯ (ಆಡಿಯೋ) - Podcasts